ಪಂಜಾಬ್‌ | ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ರಾಜೀನಾಮೆ

Date:

ಆಮ್ ಆದ್ಮಿ ಆಡಳಿತವಿರುವ ಪಂಜಾಬ್‌ನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯೊಂದರಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಇಂದು(ಫೆ.3) ರಾಜೀನಾಮೆ ನೀಡಿದ್ದಾರೆ.

83 ವರ್ಷದ ಬನ್ವರಿಲಾಲ್ ಪುರೋಹಿತ್ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಕಳುಹಿಸಿದ್ದು, ಅಂಗೀಕರಿಸುವಂತೆ ಕೋರಿದ್ದಾರೆ.

ಬನ್ವರಿಲಾಲ್ ಪುರೋಹಿತ್ ಪಂಜಾಬ್ ರಾಜ್ಯಪಾಲ ಸ್ಥಾನದ ಜೊತೆಗೆ ಚಂಡೀಗಢ ಆಡಳಿತ ಮುಖ್ಯಸ್ಥನ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಚಂಡೀಗಢ ಕೇಂದ್ರಾಡಳಿತ ಪ್ರದೇಶವಾಗಿರುವ ಕಾರಣ ಇದರ ಆಡಳಿತ ಜವಾಬ್ದಾರಿಯೂ ಪಂಜಾಬ್ ರಾಜ್ಯಪಾಲರ ಹೊಣೆಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ವೈಯಕ್ತಿಕ ಹಾಗೂ ಇತರ ಕೆಲ ಬಾಧ್ಯತೆಗಳ ಕಾರಣದಿಂದ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಬನ್ವರಿಲಾಲ್ ಪುರೋಹಿತ್ ಹೇಳಿದ್ದಾರೆ. ಸೆಪ್ಟೆಂಬರ್ 9, 2021ರಿಂದ ಪಂಜಾಬ್ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿರುವ ಬನ್ವರಿಲಾಲ್ ಪುರೋಹಿತ್, ರಾಜೀನಾಮೆಯಿಂದ ಕೇಂದ್ರ ಸರ್ಕಾರ ಇದೀಗ ಹೊಸ ರಾಜ್ಯಪಾಲರ ನೇಮಕ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದೆ.

ಪಂಜಾಬ್‌ನಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ನಡುವಿನ ಗುದ್ದಾಟಗಳು ನಡೆಯುತ್ತಿದೆ. ಲೋಕಸಭೆ ಚುನಾವಣೆಗೆ ಯಾವುದೇ ಮೈತ್ರಿ ಇಲ್ಲದೆ ಆಮ್ ಆದ್ಮಿ ಪಾರ್ಟಿ ಏಕಾಂಗಿ ಹೋರಾಟ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಚಂಡೀಗಡ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಕ್ರಮ ನಡೆಸಿದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷವು ಭಾರೀ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ರಾಜ್ಯಪಾಲರು ರಾಜೀನಾಮೆ ಸಲ್ಲಿಸಿದ್ದಾರೆ.

ಪಂಜಾಬ್‌ನಲ್ಲಿ ಆಡಳಿತಾರೂಢ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರದೊಂದಿಗೆ ದೀರ್ಘಕಾಲದ ವಾಗ್ಯುದ್ಧದಲ್ಲಿ ತೊಡಗಿದ್ದರು. ರಾಜ್ಯಕ್ಕೆ ಸಂಬಂಧಿಸಿದ ಹಲವಾರು ವಿಷಯಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಕೋರಿ ಮುಖ್ಯಮಂತ್ರಿ ಭಗವಂತ್ ಮಾನ್‌ಗೆ ಸರಣಿ ಪತ್ರಗಳನ್ನು ಬರೆದು ಸುದ್ದಿಯಾಗುತ್ತಿದ್ದರು. ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ಗುರಾಣಿಯಾಗಿ ಬಳಸಿಕೊಂಡು, ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ ಎಂದು ಆಪ್ ಸರ್ಕಾರ ಆರೋಪಿಸಿತ್ತು.

ಪಂಜಾಬ್ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಮೊದಲು ಬನ್ವರಿಲಾಲ್ ಪುರೋಹಿತ್ ತಮಿಳುನಾಡು ಹಾಗೂ ಅಸ್ಸಾಂ ರಾಜ್ಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ತುಮಕೂರು ಶಿವಕುಮಾರ ಶ್ರೀಗಳಿಗೆ ‘ಭಾರತ ರತ್ನ’ ನೀಡಲು ಪತ್ರ ಬರೆದಿದ್ದೆವು: ಸಿಎಂ ಸಿದ್ದರಾಮಯ್ಯ

2017ರಿಂದ 2021ರ ವರೆಗೆ ತಮಿಳುನಾಡು ರಾಜ್ಯಪಾಲರಾಗಿ ಹಾಗೂ 2026ರಿಂದ 2017ರ ವರೆಗೆ ಅಸ್ಸಾಂ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿದ್ದ ಬನ್ವರಿಲಾಲ್, 1991ರ ವೇಳೆ ಎಲ್‌ ಕೆ ಅಡ್ವಾಣಿ ರಾಮಜನ್ಮಭೂಮಿ ರಥಯಾತ್ರೆ ವೇಳೆ ಬಿಜೆಪಿ ಸೇರಿಕೊಂಡಿದ್ದರು.

1991ರಿಂದ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಸದಸ್ಯರಾಗಿ 1996 ಹಾಗೂ 1999ರಲ್ಲಿ ಬಿಜೆಪಿ ಟಿಕೆಟ್ ಪಡೆದು ಸೋಲು ಕಂಡಿದ್ದರು. ಬಳಿಕ 2003ರಲ್ಲಿ ಬಿಜೆಪಿ ತೊರೆದು ವಿದರ್ಭ ರಾಜ ಪಾರ್ಟಿ ಸ್ಥಾಪಿಸಿ ಮತ್ತೆ ಸೋಲು ಕಂಡಿದ್ದರು. 2009ರಲ್ಲಿ ಮತ್ತೆ ಬಿಜೆಪಿ ಸೇರಿಕೊಂಡಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಬಾ ರಾಮ್‌ದೇವ್‌ ಮಾಲೀಕತ್ವದ ಪತಂಜಲಿಯ ಜಾಹೀರಾತಿಗೆ ನಿಷೇಧ ಹೇರಿದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ? ಸುಪ್ರೀಂ ಕೋರ್ಟ್‌ ಗರಂ ಸುಪ್ರೀಂ...

ಮಧ್ಯ ಪ್ರದೇಶ | ಕೆಲಸ ಕಳೆದುಕೊಳ್ಳುವ ಭಯ: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಉದ್ಯೋಗ ಕಳೆದುಕೊಳ್ಳುವ ಭೀತಿಯಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್‌ನ...

ಮಾಲೆಗಾಂವ್‌ ಪ್ರಕರಣ | ವಿಚಾರಣೆಗೆ ಬಾರದಿದ್ದರೆ ಕ್ರಮ; ಪ್ರಮುಖ ಆರೋಪಿ ಪ್ರಜ್ಞಾ ಸಿಂಗ್‌ಗೆ ಕೋರ್ಟ್‌ ಎಚ್ಚರಿಕೆ

"ಒಂದೋ ವಿಚಾರಣೆಗೆ ಹಾಜರಾಗಿ, ಇಲ್ಲವೇ ಸೂಕ್ತ ಕ್ರಮ ಎದುರಿಸಲು ಸಿದ್ಧರಾಗಿ"...ಹೀಗಂತ ಹೇಳಿದ್ದು...

ಬದುಕಿನ ಹಾಡು ಮುಗಿಸಿದ ದೇಶದ ಖ್ಯಾತ ಗಝಲ್ ಗಾಯಕ ಪಂಕಜ್ ಉಧಾಸ್

ದೇಶದ ಹಿರಿಯ ಗಝಲ್ ಗಾಯಕ, ಪದ್ಮಶ್ರೀ ಪಂಕಜ್ ಉಧಾಸ್ ಅವರು ನಿಧನರಾಗಿದ್ದಾರೆ."ದೀರ್ಘಕಾಲದ...