ರಾಯಚೂರು | 16 ವರ್ಷಗಳ ಬಾಕಿ ಬಿಲ್ ಪ್ರಕರಣ; ಜಿ.ಪಂ. ಸಿಇಒ ಕಾರು ಜಪ್ತಿ ಆದೇಶದ ಬಳಿಕ ಒಂದೇ ದಿನದಲ್ಲಿ ಪಾವತಿ

Date:

ಗುತ್ತಿಗೆ ಕೆಲಸ ನಿರ್ವಹಿಸಿದ ಗುತ್ತಿಗೆದಾರರಿಗೆ 16 ವರ್ಷಗಳಿಂದ ಬಿಲ್ ಪಾವತಿಸದೆ ವಿಳಂಬ ಧೋರಣೆ ಅನುಸರಿಸಿದ್ದ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊನೆಗೂ ಕಾನೂನು ಚಾಟಿ ಬೀಸಿದ ಘಟನೆ ನಡೆದಿದೆ. ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಅವರ ಕಾರು ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದ ಹಿನ್ನೆಲೆಯಲ್ಲಿ, ಸಿಇಒ ಒಂದೇ ದಿನದಲ್ಲಿ ಬಾಕಿ ಮೊತ್ತ ಪಾವತಿಸಿ ಪ್ರಕರಣಕ್ಕೆ ತೆರೆ ಎಳೆದ ಅಪರೂಪದ ಘಟನೆ ನಡೆದಿದೆ.

ಹದಿನಾರು ವರ್ಷಗಳಿಂದ ಗುತ್ತಿಗೆದಾರರಿಗೆ ಬಾಕಿ ಉಳಿದಿದ್ದ ಬಿಲ್‌ನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಪಾವತಿಸದ ಕಾರಣ, ನಗರದ ಹಿರಿಯ ಶ್ರೇಣಿ ನ್ಯಾಯಾಲಯವು 05-02-2026ರಂದು ಎರಡನೇ ಬಾರಿ ಇಲಾಖೆಯ ವಾಹನ ಜಪ್ತಿಗೆ ಆದೇಶಿಸಿತ್ತು. ಇದಕ್ಕೂ ಮೊದಲು ಜಪ್ತಿಗೆ ಆದೇಶಿಸಿದಾಗ, ಇಲಾಖೆ ಅಧಿಕಾರಿಗಳು ತಡೆಯಾಜ್ಞೆ ಪಡೆದುಕೊಂಡು ನಂತರ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿ ಎರಡು ತಿಂಗಳೊಳಗೆ ಬಿಲ್ ಪಾವತಿಸುವುದಾಗಿ ಭರವಸೆ ನೀಡಿದ್ದರು.

ಆದರೆ, ನೀಡಿದ ಅವಧಿ ಮುಗಿದರೂ ಪಾವತಿ ಮಾಡದ ಹಿನ್ನೆಲೆ, ನ್ಯಾಯಾಲಯವು ಪುನಃ ಜಪ್ತಿ ಆದೇಶ ಹೊರಡಿಸಿತು. ಇದರ ಅನ್ವಯ, ಫೆ.5ರಂದು ನ್ಯಾಯಾಲಯದ ಅಧಿಕಾರಿಗಳು ಗುತ್ತಿಗೆದಾರರ ಪರ ವಕೀಲರೊಂದಿಗೆ ಇಲಾಖೆಯ ಬುಲೆರೊ ವಾಹನವನ್ನು ಜಪ್ತಿ ಮಾಡಿದರು. ಇದಾದ ಬಳಿಕವೂ ಇಲಾಖೆ ನಿರ್ಲಕ್ಷ್ಯ ತೋರಿದ ಕಾರಣ, ಗುತ್ತಿಗೆದಾರರ ವಕೀಲರು ಫೆ.12ರಂದು ರಾಯಚೂರು ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಾರನ್ನೇ ಜಪ್ತಿ ಮಾಡಲು ಮುಂದಾದರು.

- Advertisement -

ಈ ಸುದ್ದಿ ಓದಿದ್ದೀರಾ? ಲಿಂಗಸುಗೂರು | ಸರ್ಕಾರಿ ಆಸ್ಪತ್ರೆ ವೈದ್ಯರ ಮೇಲಿನ ಸುಳ್ಳು ಆರೋಪ ಖಂಡನೆ; ಮೋಹನ್ ಗೋಸ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡ ಸಿಇಒ ಈಶ್ವರಕುಮಾರ ಕಾಂಡೂ ಅವರು ತಕ್ಷಣವೇ ಪೂರ್ಣ ಪ್ರಮಾಣದ ಚೆಕ್ ನೀಡುವ ಮೂಲಕ ಬಾಕಿ ಮೊತ್ತ ಪಾವತಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸಿದರು.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...