ರಾಯಚೂರು | ಶಾಲೆಗಳಲ್ಲಿ ಫೈಲೇರಿಯಾ ಪ್ರಸರಣಾ ಸಮೀಕ್ಷೆಗೆ ಸಹಕಾರ ನೀಡುವಂತೆ ಸೂಚನೆ

Date:

ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಶನಿವಾರ ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ತಾಲೂಕಿನ 37 ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಮತ್ತು ಹೆಚ್ಚುವರಿಯಾಗಿ ಆಯ್ಕೆಯಾದ 15 ಶಾಲೆಗಳ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಲ್ಲಿ ಇಎಲ್‌ಎಫ್ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಶಾಲಾ ಮುಖ್ಯಗುರುಗಳು ಮತ್ತು ವ್ಯವಸ್ಥಾಪಕರು ಸಮೀಕ್ಷೆ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಗೆ ಅಗತ್ಯ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಸೂಚಿಸಿದರು.

ಶಾಲೆಗಳು ಸಮೀಕ್ಷೆಗೆ ನಿರಾಕರಿಸಿದಲ್ಲಿ ಅಂತಹ ಸಂಸ್ಥೆಗಳ ನೋಂದಣಿಯನ್ನು ರದ್ದುಪಡಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.ಸೆಪ್ಟೆಂಬರ್ 2025ರ ಮಧ್ಯಭಾಗದಲ್ಲಿ ದಸರಾ ರಜೆಗೆ ಮಕ್ಕಳನ್ನು ಕಳುಹಿಸುವ ಮುನ್ನ ಎಫ್‌ಟಿಎಸ್ ಕೀಟ್ಸ್ ಮೂಲಕ ಪರೀಕ್ಷಾ ಕಾರ್ಯ ಪೂರ್ಣಗೊಳಿಸುವಂತೆ ಆರೋಗ್ಯ ಇಲಾಖೆ ಕ್ರಿಯಾ ಯೋಜನೆ ರೂಪಿಸಬೇಕೆಂದು ತಹಶೀಲ್ದಾರ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನ ಭೂಮಿಯಿಲ್ಲದೇ ಅಂತ್ಯಸಂಸ್ಕಾರಕ್ಕೆ ಸಂಕಟ

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಧೀಕ್ಷಕರು, ತಾಲೂಕು ಆರೋಗ್ಯಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕು ವಿಬಿಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ರಾಯಚೂರು | ಕೆವೈಸಿಗಾಗಿ ರಾತ್ರಿ ಸರತಿ ಸಾಲು: ಜನರ ಪರದಾಟ

ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...