ಮದುವೆ ಕಾರ್ಯಕ್ರಮದ ನಿಮಿತ್ತ ಒಂದೇ ಕುಟುಂಬದ ನಾಲ್ವರು ನದಿಯಲ್ಲಿ ಸ್ನಾನಕ್ಕೆ ತೆರಳಿದ ವೇಳೆ ದುರ್ಘಟನೆಯಾಗಿ ಮೃತಪಟ್ಟಿರುವ ಘಟನೆ ರಾಜಲ ಬಂಡಾ ತುಂಗಭದ್ರಾ ಅಣೆಕಟ್ಟಿನಲ್ಲಿ ನಡೆದಿದೆ.
ಮೃತಪಟ್ಟವರು ಉಮಾವತಿ ಗೋವಿಂದ(35), ರತ್ನ ಮಹಾಂತೇಶ್(28), ಶಿವಾನಂದ ಹನುಮಂತರಾಯ( 24) ಹಾಗೂ ಮಹಾಂತೇಶ್ ಪೀತಾಂಬರ (24) ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕುರ್ಡಿ ಗ್ರಾಮದ ಒಂದೇ ಕುಟುಂಬಸ್ಥರು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಶಾಲೆ ಮುಚ್ಚುವಿಕೆ; ಗ್ರಾಮಸ್ಥರು, ವಿದ್ಯಾರ್ಥಿಗಳು ಪ್ರತಿಭಟನೆ
ಆಂಧ್ರಪ್ರದೇಶದ ಕೋಸಗಿ ಗ್ರಾಮಕ್ಕೆ ಮದುವೆ ಕಾರ್ಯಕ್ರಮಕ್ಕೆ ಎಂದು ತೆರಳುತ್ತಿದ್ದರು. ಮಾರ್ಗ ಮಧ್ಯೆ ಸ್ನಾನಕ್ಕೆ ಮುಂದಾದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.



