ಎಂಎಲ್ ಸಿ ಶರಣಗೌಡ ಪಾಟೀಲ್ ಅವರ ಕಾರಿಗೆ ಡಿ ಎಸ್ ಹುಲಗೇರಿ ಬಣದ ಕಾಂಗ್ರೆಸ್ ಕಾರ್ಯಕರ್ತರು ಅಡ್ಡ ಹಾಕಿ ಮಾತಿನ ಚಕಮಕಿ ನಡೆದ ಘಟನೆ ಲಿಂಗಸೂಗೂರು ತಾಲ್ಲೂಕು ಗೋರೆಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕೃಷಿ ಗೋದಾಮ ಉದ್ಘಾಟನೆ ಕಾರ್ಯಕ್ರಮ ಮುಗಿಸಿ ತೆರಳುವಾಗ ಎಂಎಲ್ ಸಿ ಶರಣಗೌಡ ಪಾಟೀಲ್ ಕಾರು ಹುಲಿಗೇರಿ ಬಣದ ಕಾರ್ಯಕರ್ತರು ತಡೆಯಿದ್ದು, ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆಯಿತು.
ಪತ್ರಿಕಾಗೋಷ್ಠಿಯಲ್ಲಿ ಎಂಎಲ್ ಸಿ ಶರಣಗೌಡ ಅವರು ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕಾರ್ಯಕರ್ತರು ರೊಚ್ಚಿಗೆದ್ದು ವಾಗ್ವಾದ ಉಂಟಾಗಿದೆ.

ಈ ಸಂದರ್ಭದಲ್ಲಿ ಎರಡು ಗುಂಪಿನ ಮಧ್ಯೆ ವಾಕ್ಸಮರ ಏರ್ಪಟ್ಟು, ಗದ್ದಲ ಉಂಟಾಯಿತು. ಒಂದು ಹಂತದಲ್ಲಿ ಎರಡೂ ಬಣದ ಕಾರ್ಯಕರ್ತರು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಟ್ಟಡ ವಾಲಿದ ಪ್ರಕರಣ: ಸಾರ್ವಜನಿಕ ಭದ್ರತೆಗಾಗಿ ತೆರವಿಗೆ ಮುಂದಾದ ಪಾಲಿಕೆ
ಲಿಂಗಸಗೂರು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾಂಗ್ರೆಸ್ ಮುಖಂಡರ ಅಂತರಕಲಹವು ಸೋಲಿಗೆ ಕಾರಣವಾಗಿದೆ. ಈ ಭಾಗದಲ್ಲಿ ಕಾಂಗ್ರೆಸ್ ನಾಯಕರ ನಡುವೆ ಉಂಟಾದ ಅಸಮಾಧಾನ, ಪರಸ್ಪರ ಟೀಕೆಗಳು ಹಾಗೂ ಒಗ್ಗಟ್ಟಿನ ಕೊರತೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂದರು.
