ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ರಮೇಶ ರಾಠೋಡ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ಸಹಕರಿಸದಿರುವುದರಿಂದ ತಾಲೂಕಿನ ಪ್ರಗತಿ ಕುಂಠಿತವಾಗುತ್ತಿದೆ ಎಂದು ತಹಶೀಲ್ದಾರರು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಿಗಮ-ಮಂಡಳಿ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯ
ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪರಿಶೀಲಿಸಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಕಾರಣಕ್ಕೆ ಲಿಂಗಸೂಗೂರ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ್ ಜಿ. ರಾಠೋಡ್ ಅವರನ್ನು KCSR ಅಡಿಯಲ್ಲಿ ಇಲಾಖಾ ವಿಚಾರಣೆಗೆ ಒಳಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
