ರಾಯಚೂರು | ಯಾರ ಹೆಸರನ್ನೂ ಮತದಾರರ ಪಟ್ಟಿಯಿಂದ ಕೈ ಬಿಡಲ್ಲ; ಅರ್ಜಿಯಲ್ಲಿ ಸಂಪೂರ್ಣ ಮಾಹಿತಿ ನೀಡಿ: ಡಿಸಿ

Date:

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಾರಂಭವಾಗಿದ್ದು ಜೂ.20 ರಿಂದ ಜು.29 ವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರ್ಮಸ್ ದ್ವಿ ಪತ್ರಿಯನ್ನು ನೀಡುತ್ತಿದ್ದು 2025 ಮತದಾರರ ಪಟ್ಟಿಯಲ್ಲಿರುವವರು ಅರ್ಜಿಗಳನ್ನು ಭರ್ತಿ ಮಾಡಿ ಒಂದು ಪ್ರತಿಯನ್ನು ಕಾಯ್ದಿರಿಸಿಕೊಳ್ಳಬೇಕು. ಪಾರದರ್ಶಕವಾಗಿ ನಡೆಯಲಿದ್ದು ಯಾವುದೇ ಆತಂಕ ಪಡೆದೇ ಮಾಹಿತಿಯನ್ನು ಒದಗಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ.ಎಸ್. ಮನವಿ ಮಾಡಿದರು.

- Advertisement -

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿದೆ. ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರಿಗೆ ತರಬೇತಿ ಸಹ ನೀಡಲಾಗಿದೆ. 2002 ಮತದಾರರ ಪಟ್ಟಿಯನ್ನು ಮಾನದಂಡವಾಗಿಟ್ಟುಕೊಂಡು 2025 ಮತದಾರರ ಪಟ್ಟಿಯೊಂದಿಗೆ ಹೋಲಿಕೆ ಮಾಡಿ ನೈಜ ಮತದಾರರನ್ನುಗುರುತಿಸಲಾಗುತ್ತದೆ. ಮೃತಪಟ್ಟವರು, ಎರಡು ಮತಗಟ್ಟೆಯಲ್ಲಿ ಹೆಸರು ಇರುವವರು, ವಲಸೆ ಹೋದವರನ್ನು ಗುರುತಿಸಲಾಗುತ್ತದೆ. ಯಾರ ಹೆಸರನ್ನು ಮತದಾರರ ಪಟ್ಟಿಯಿಂದ ಕೈ ಬಿಡುವದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಮನೆ ಮನೆಗೆ ಬಿಎಲ್‌ಓಗಳು ಭೇಟಿ ನೀಡಿದಾಗ ಪ್ರತಿಯೊಬ್ಬ ಮತದಾರರು ಸ್ವಯಂ ಧೃಡೀಕರಣ ದಾಖಲೆಗಳೊಂದಿಗೆ ಸಲ್ಲಿಸಬೇಕು. ಸ್ವೀಕೃತಿ ರಸೀದಿ ಪಡೆಯಬೇಕು. ಚುನಾವಣಾ ಆಯೋಗ ಗುರುತಿಸಿರುವ 12 ದಾಖಲೆಗಳ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗುತ್ತದೆ. ವಿದೇಶಿ ಪೌರತ್ವ ಪಡೆದವರ ಕುಟುಂಬ ವರ್ಗದವರು ಸ್ಪಷ್ಟ ಮಾಹಿತಿ ಒದಗಿಸಬೇಕು. ಸುಳ್ಳು ಮಾಹಿತಿ ಒದಗಿಸದಲ್ಲಿ ಕಾನೂನಿನ್ವಯ ಕ್ರಮಕೈಗೊಳ್ಳಲಾಗುತ್ತದೆ. ಯಾರನ್ನು ಏಕಾಎಕಿ ಮತದಾರರ ಪಟ್ಟಿಯಿಂದ ಕೈ ಬಿಡುವದಿಲ್ಲ. ಎನ್ಯುಮರೇಷನ್ ಫಾರ್ಮ ನೀಡದೇ ಇರುವ ಮತದಾರರ ಹೆಸರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವದಿಲ್ಲ ಎಂದು ತಿಳಿಸಿದರು.

ಮತದಾರ ಪಟ್ಟಿಯಲ್ಲಿ ಹೆಸರಿನ ಕಾಗುಣಿತ, ವಿಳಾಸದ ಬದಲಾವಣೆ, ಮತಗಟ್ಟೆ ಹಂಚಿಕೆ, ಗುರುತಿನ ಚೀಟಿ ಪೋಟೋ ಬದಲಾವಣೆ ಸೇರಿದಂತೆ ಯಾವುದೇ ತಾಂತ್ರಿಕ ದೋಷಗಳಿದ್ದರೆ ಬಿಎಲ್‌ಓಗಳಿಗೆ ಆಕ್ಷೇಪಣೆ ಸಲ್ಲಿಸಬಹುದು. ವಿಶೇಷ ಸಮಗ್ರ ಮತದಾರರ ಪರಿಷ್ಕರಣೆಯ ಕರಡು ಮತದಾರರ ಪಟ್ಟಿಯನು ಅಕ್ಬೋಬರ್ 7 ರಂದು ಪ್ರಕಟಿಸಲಾಗುತ್ತದೆ. ನಿಖರವಾದ ದಾಖಲೆಗಳೊಂದಿಗೆ ಪ್ರಮಾಣಪತ್ರ ನೀಡಿದಲ್ಲಿ ಬದಲಾವಣೆ ಸಾಧ್ಯವಿದೆ ಎಂದರು.

ಆಕ್ಷೇಪಣೆಗಳನ್ನು ಸಲ್ಲಿಸಿದ ವ್ಯಕ್ತಿಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳು ದೂರುಗಳ ಸಲ್ಲಿಕೆಯಾದರೆ ಪರಿಶೀಲಿಸಿ ಅಗತ್ಯ ವಿಚಾರಣೆ ನಡೆಸಿ ಮತದಾರರ ಪಟ್ಟಿಯಲ್ಲಿ ಸೇರಿಸುವ ಕುರಿತುನಿರ್ಧಾರ ಕೈಗೊಳ್ಳುತ್ತಾರೆ. ಹೊಸ ಮತದಾರರು ಫಾರ್ಮ -6 ನೊಂದಿಗೆ ನಿಗಧಿತ ಘೋಷಣಾ ಮತ್ರ ಸಲ್ಲಿಸಬೇಕು ಎಂದರು.

ವಲಸೆ ಹೋದವರು ಸೇರಿದಂತೆ ಮತದಾರರ ಪಟ್ಟಿ ಖಚಿತೆತೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಿ ನಿರ್ಧರಿಸುತ್ತಾರೆ. ಅಕ್ಷರಸ್ಥರು, ಅನಕ್ಷರಸ್ಥರು ಎಂಬ ಕುರಿತಾಗಿ ಎಲ್ಲರೂ ಮಾಹಿತಿಯನ್ನು ಬಿಎಲ್‌ಓಗಳಿಗೆ ನೀಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ ಏನೇ ಸಮಸ್ಯೆಗಳು, ಕುಂದುಕೊರತೆಗಳಿದ್ದಲ್ಲಿ ಜಿಲ್ಲಾ ಮತ್ತು ತಾಲೂಕ ಮಟ್ಟದಲ್ಲಿ ಮತದಾರರ ಸಹಾಯಕೇಂದ್ರವನ್ನು ಸ್ಥಾಪಿಸಲಾಗುತ್ತದೆ ಎಂದರು.

ಆನ್‌ಲೈನ್ ಮೂಲಕವೂ ಎನ್ಯುಮರೇಷನ್ ಫಾರ್ಮ ಸಲ್ಲಿಸಬಹುದಾಗಿದೆ. ಬಿಹಾರದಲ್ಲಿ ಮತದಾರರು ಕಡ್ಡಾಯವಾಗಿ ಸಹಿ ಮಾಡಿ ಮಾಹಿತಿ ನೀಡಬೇಕಿತ್ತು. ರಾಜ್ಯದಲ್ಲಿ ಮತದಾರರ ಪಟ್ಟಿಯಲ್ಲಿರುವವರು ಕುಟುಂಬ ಯಾರೇ ಮಾಹಿತಿ ನೀಡಿದರೂ ಬಿಎಲ್‌ಓಗಳು ಮಾಹಿತಿಯನ್ನು ದಾಖಲೀಕರಿಸುತ್ತಾರೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ವಲಸೆ ಹೋದವರು ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮಾಹಿತಿ ನೀಡಬಹುದಾಗಿದೆ. ಬಂಗಾಳಿ ಕ್ಯಾಂಪ್ ನಲ್ಲಿ ವಾಸಿಸುವರು ಪೌರತ್ವದ ಮಾಹಿತಿಯೂ ಸೇರಿ ಮತದಾರರ ಪಟ್ಟಿಯಲ್ಲಿರುವವರು ಮಾತ್ರ ನೀಡಬೇಕಾಗುತ್ತದೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಿಡಿಲು ಬಡಿದು ಮಹಿಳೆಗೆ ಗಾಯ

ಈ ಸಂದರ್ಬದಲ್ಲಿ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ ಇದ್ದರು.

237f7ffccb444279d008bf3b9996085b28ea2ee502b53dcd4b516808491f04d0?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ವಿಜಯಪುರ | ಬಡ ಮಕ್ಕಳಿಗೂ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿಯುವ ಅವಕಾಶ ನೀಡಿ: ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ

ಆರ್ಥಿಕ ಸಂಕಷ್ಟ ಮತ್ತು ಸಾಮಾಜಿಕ ಹಿಂದುಳಿದಿರುವಿಕೆಯ ಕಾರಣಕ್ಕೆ ಮಕ್ಕಳ ಶಿಕ್ಷಣದ ಅವಕಾಶಗಳು...