ಮೇಲಾಧಿಕಾರಿಗೆ ದೂರು ನೀಡಿದ್ದ ಕಾರಣಕ್ಕೆ ಗ್ರಾಮಸ್ಥನೊಬ್ಬನ ಮೇಲೆ ಪಿಡಿಒ ಹಲ್ಲೆ ನಡೆಸಿದ ಘಟನೆ ದೇವದುರ್ಗ ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಹಾಗೂ ನಿರುದ್ಯೋಗ ಭತ್ಯೆ ವಿತರಣೆಯಲ್ಲಿ ನಿರ್ಲಕ್ಷ್ಯ ತೋರಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥ ಕಾಶಿನಾಥ ಅವರು ಮೇಲಾಧಿಕಾರಿಗೆ ದೂರು ಸಲ್ಲಿಸಿದ್ದರು. ಇದನ್ನು ಸಹಿಸದ ಪಿಡಿಒ ಶಿವರಾಜ, ಕಾಶಿನಾಥ ಅವರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಗ್ರಾಮದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ಘಟನೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಪಿಡಿಒ ಅವರನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಆಗ್ರಹಿಸಿದ್ದಾರೆ ಮತ್ತು ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ಮೇಲಾಧಿಕಾರಿಗೆ ಮನವಿ ಸಲ್ಲಿಸಿ ಕೂಡಲೇ ಪಿಡಿಒ ಅವರನ್ನು ಅಮಾನತು ಮಾಡಬೇಕು ಇಲ್ಲದಿದ್ದರೆ ಬೇಡಿಕೆ ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ ಮಾಡುತ್ತಿದ್ದ ರಂಗಾಪುರ ಗ್ರಾಮಕ್ಕೆ ಅಧಿಕಾರಿಗಳ ಭೇಟಿ
ಸಿಸಿಟಿವಿ ದೃಶ್ಯಾಧಾರ ಹಾಗೂ ದೂರದಾರ ಅನ್ವಯ ಆಧರಿಸಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
