ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಜಿಲ್ಲೆಯಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಮಾಡಿ ಮಾ.31ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರ ತನಕ ಸರ್ಕಾರಿ ಕಚೇರಿಗಳ ಕೆಲಸದ ಸಮಯ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರೀಲ್ 1; ಪೂರ್ವಭಾವಿ ಸಭೆ
ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ತಮ್ಮ ಕರ್ತವ್ಯವನ್ನು ಎಂದಿನಂತೆ ಯಾವುದೇ ಲೋಪ/ಅಡೆತಡೆಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು. ಸಾರ್ವಜನಿಕರಿಗೆ ಯಾವುದೇ ರೀತಿ ಅನಾನುಕೂಲ ಆಗದಂತೆ ಮತ್ತು ಜಿಲ್ಲಾಧಿಕಾರಿಗಳು/ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಕರ್ತವ್ಯ ನಿರ್ವಹಿಸತಕ್ಕದ್ದು ಎಂಬ ಷರತ್ತನ್ನು ಸಹ ಹಾಕಲಾಗಿದೆ.



