ರಾಯಚೂರು | ನಾಳೆಯಿಂದ ಚಿಂತನ-ಮಂಥನ ಕಾರ್ಯಕ್ರಮ

Date:

ಹೈದರಾಬಾದ್- ಕರ್ನಾಟಕ ಜನಾಂದೋಲನ ಕೇಂದ್ರ ಜಿಲ್ಲಾ ಸಮಿತಿಯಿಂದ ಮೇ 24, 25 ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೆವಿಕೆ ಸಭಾಂಗಣದಲ್ಲಿ ವರ್ತಮಾನ ಸಂದರ್ಭದ ರಾಜಕಾರಣ ತತ್ವ ಸಿದ್ಧಾಂತಗಳ ಮನನ ಕುರಿತು ಚಿಂತನ-ಮಂಥನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೈದರಾಬಾದ್- ಕರ್ನಾಟಕ ಜನಾಂದೋಲನ ಕೇಂದ್ರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.‌ ಬಸವರಾಜ ತಿಳಿಸಿದರು.

- Advertisement -

ಮೇ 24 ರಂದು ಬೆಳಿಗ್ಗೆ 9.30 ರಿಂದ 12 ರವರೆಗೆ ಗೋಷ್ಠಿ-1 ನಡೆಯಲಿದೆ. ಹೈದರಾಬಾದ್- ಕರ್ನಾಟಕ ಜಿಲ್ಲಾ ಕೇಂದ್ರದ ಸಂಸ್ಥಾಪಕ ರಾಘವೇಂದ್ರ ಕುಷ್ಟಗಿ ಅಂಬೇಡ್ಕರ್ ಬರೆದ ಸಂವಿಧಾನದ ಬಗ್ಗೆ ಪ್ರಸ್ತಾವನೆ ಮಾಡಲಿದ್ದಾರೆ. ಸಾಹಿತಿ ಶಿವಸುಂದರ ಅಂಬೇಡ್ಕರ್ ಬಯಸಿದ್ದ ಸಂವಿಧಾನ ಕುರಿತು ವಿಷಯ ಮಂಡಿಸಲಿದ್ದಾರೆ. ವಿದ್ಯಾನಿಧಿ ಕಾಲೇಜಿನ ಪ್ರಾಂಶುಪಾಲ ಚಂದ್ರಗಿರೀಶ ಅಧ್ಯಕ್ಷತೆ ವಹಿಸುವರು ಎಂದು ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಗೋಷ್ಠಿ-2 ಮಧ್ಯಾಹ್ನ 12.15 ರಿಂದ 2 ಗಂಟೆವರೆಗೆ ನಡೆಯಲಿದೆ. ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೆ.‌ಪ್ರಕಾಶ ಸಂವಿಧಾನ ಸಶಕ್ತೀಕರಣ- ಸವಾಲುಗಳು ಮತ್ತು ಸಾಧ್ಯತೆ ಕುರಿತು ವಿಷಯ ಮಂಡಿಸಲಿದ್ದಾರೆ. ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಕಾರ್ಯದರ್ಶಿ ಕೆ. ವಿ. ಭಟ್ ಅಧ್ಯಕ್ಷತೆ ವಹಿಸುವರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮಸೀದಿ ಆವರಣದಲ್ಲಿದ್ದ ಅನಧಿಕೃತ ಮನೆ, ಅಂಗಡಿ ತೆರವು

ಗೋಷ್ಠಿ-3 ಮಧ್ಯಾಹ್ನ 3 ರಿಂದ 5 ರವರೆಗೆ ನಡೆಯಲಿದೆ. ಕರ್ನಾಟಕ ರಾಷ್ಟ್ರ ಸಮಿತಿಯ ಸಂಸ್ಥಾಪಕ ರವಿಕೃಷ್ಣ ರೆಡ್ಡಿ ವರ್ತಮಾನ ಸಂದರ್ಭದಲ್ಲಿ ಗಾಂಧಿವಾದದ ಸ್ಥಾನಮಾನ ಸ್ಥಿತಿಗತಿ ಕುರಿತು ವಿಷಯ ಮಂಡಿಸಲಿದ್ದಾರೆ. ಸಾಮಾಜಿಕ ಕಾರ್ಯಕರ್ತ ದಿಲೀಪ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಮೇ 25 ರಂದು ಬೆಳಿಗ್ಗೆ 9.30 ರಿಂದ 12 ಗಂಟೆ ವರೆಗೆ ಗೋಷ್ಠಿ-4 ನಡೆಯಲಿದೆ. ಸಾಮಾಜಿಕ ಕಾರ್ಯಕರ್ತ ದಿಲೀಪ ಕಾಮತ್ ಭಾರತದ ಪರಿಕಲ್ಪನೆ- ವ್ಯವಸ್ಥೆ ಮತ್ತು ಜನಬದುಕಿನ ವೈರುಧ್ಯಗಳ ಕುರಿತು ವಿಷಯ ಮಂಡಿಸಲಿದ್ದಾರೆ. ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ ಅಧ್ಯಕ್ಷತೆ ವಹಿಸುವರು.

ಗೋಷ್ಠಿ-5 ಬೆಳಿಗ್ಗೆ 12.15 ರಿಂದ 2 ರವರೆಗೆ ನಡೆಯಲಿದೆ. ಬೆಂಗಳೂರಿನ ಬಿಜಿವಿಎಸ್‌ನ ಚೇಗರೆಡ್ಡಿ, ಶಿಕ್ಷಣದ ಚಿಂತಕ ಸಯ್ಯದ್ ಹಫೀಜುಲ್ಲಾ ಹೈದರಾಬಾದ್- ಕರ್ಣಾಟಕ ಶೈಕ್ಷಣಿಕ ಪರಿಸ್ಥಿತಿ ಮತ್ತು ಕಥೆ-ವ್ಯಥೆ ಕುರಿತು ಮಾತನಾಡಲಿದ್ದಾರೆ. ಜತೆಗೆ ಗೋಷ್ಠಿಯಲ್ಲಿ ಸಹಸ್ಪಂದನಾ ಸಂವಾದ ಏರ್ಪಡಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಶಿಕ್ಷಣ ಪ್ರೇಮಿಗಳು, ದಲಿತರ ಪರ ಚಿಂತಕರು, ಸಾಹಿತಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಡಾ. ಶಾರದ ಹುಲಿನಾಯಕ, ಲಿಂಗಪ್ಪ ಪೂಜಾರಿ, ಜಾನ್‌ ವೆಸ್ಲಿ, ಖಾಜಾ ಅಸ್ಲಂ ಮಹಮ್ಮದ್, ವೀರಣ್ಣ ಭಂಡಾರಿ, ಬೂದೇಪ್ಪ, ಲಕ್ಷ್ಮಣ, ಶಾಂತ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...