ರಾಮನಗರ‌ | ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ: ಆರ್ ಕೆ ಭೈರಲಿಂಗಯ್ಯ

Date:

ಮಕ್ಕಳಿಗೆ ಸೂಕ್ತ ಪ್ರೇರಣೆ ದೊರೆತರೆ ಪ್ರತಿಭೆಗಳು ಅರಳುತ್ತವೆ ಮತ್ತು ಸಾಧಿಸುವ ಛಲ ಮೂಡುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಆರ್ ಕೆ ಭೈರಲಿಂಗಯ್ಯ ಅಭಿಮತ ವ್ಯಕ್ತಪಡಿಸಿದರು.

- Advertisement -

ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹೋಲಿಕ್ರೆಸೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಧಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಮಕ್ಕಳಲ್ಲಿ ಪ್ರತಿಭೆಯನ್ನು ಗುರುತಿಸುವುದು ತಂದೆ-ತಾಯಿ ಹಾಗೂ ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ. ಅಂಕಗಳಿಗಿಂತ ಸಂಸ್ಕಾರಗಳನ್ನು ಬೆಳೆಸುವುದು ಮುಖ್ಯ” ಎಂದರು.‌

ಸನ್ಮಾನ 1 1

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ‌ ಟಿ ದಿನೇಶ್ ಬಿಳಗುಂಬ ಮಾತನಾಡಿ, “ಪ್ರತಿ ವರ್ಷ ಕನ್ನಡದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುತ್ತಿದ್ದೇವೆ. ಕನ್ನಡ ಸಾಹಿತ್ಯ ಪರಿಷತ್ ಕನ್ನಡವನ್ನು ಅಜರಾಮರ ಮಾಡಲು ಶ್ರಮಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಗೌರವ ನೀಡಲು ಮುಂದಾಗಿದೆ” ಎಂದು ಹೇಳಿದರು.

ಪ್ರಧಾನ ಅತಿಥಿಯಾಗಿ ಆಗಮಿಸಿದ್ದ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಬಿ ಟಿ ನಾಗೇಶ್ ಮಾತನಾಡಿ, “ಸಂಸ್ಕೃತಿಯನ್ನು ಉಳಿಸುವ ಕೆಲಸ ಮುಂದಿನ ತಲೆಮಾರುಗಳಾದ ಇಂದಿನ ವಿದ್ಯಾರ್ಥಿಗಳಿಂದಲೇ ಸಾಧ್ಯ” ಎಂದು ಹೇಳಿದರು.

ಸನ್ಮಾನ 2

ಹೋಲಿಕ್ರೆಸೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಲ್ತಾಫ್ ಅಹಮದ್ ಮಾತನಾಡಿ, “ಖಾಸಗಿ ಶಾಲೆಗಳಲ್ಲಿ ಕನ್ನಡಕ್ಕೆ ಸೂಕ್ತ ಪ್ರಾಮುಖ್ಯತೆ ಕೊಡಲಾಗುತ್ತಿಲ್ಲ. ಕನ್ನಡವನ್ನು ಜೀವಂತವಾಗಿ ಉಳಿಸಲು ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹತ್ತು ಮಂದಿ ಫ್ರೌಡಶಾಲಾ ಕನ್ನಡ ಶಿಕ್ಷಕರನ್ನು, 14 ಮಂದಿ ದ್ವಿತೀಯ ಪಿಯುಸಿ ಕನ್ನಡ ವಿದ್ಯಾರ್ಥಿಗಳನ್ನು, 18 ಮಂದಿ ಎಸ್‌ಎಸ್‌ಎಲ್‌ಸಿ ಕನ್ನಡ ವಿದ್ಯಾರ್ಥಿಗಳನ್ನು ಮತ್ತು ಚಿನ್ನದ ಪದಕ ಪಡೆದ ಆರು ಸಾಧಕರನ್ನು ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಅಪಘಾತದ ವೇಳೆ ತಾಯಿಯನ್ನು ರಕ್ಷಿಸಿದ್ದ ಬಾಲಕಿಗೆ ಜಿಲ್ಲಾಧಿಕಾರಿ ಸನ್ಮಾನ

ಗೌರವ ಕಾರ್ಯದರ್ಶಿಗಳಾದ ಅರುಣ್ ಕವಣಾಪುರ, ಕಿರಣ್ ಎನ್, ಕೋಶಾಧ್ಯಕ್ಷ ನಂಜುಂಡಪ್ಪ ಬಿ ಕೆ, ಸಾಹಿತಿಗಳಾದ ಜಿ ಎಚ್ ರಾಮಯ್ಯ, ವನರಾಜು, ಕರೀಗೌಡರು, ರಾಮಕೃಷ್ಣ ಡಿ, ಸ್ಟ್ಯಾನ್ಲಿ ಪಾಲ್, ನಗರ ಘಟಕದ ಅಧ್ಯಕ್ಷ ಡೈರಿ ವೆಂಕಟೇಶ್, ಕಸಬಾ ಹೋಬಳಿ ಅಧ್ಯಕ್ಷ ಮಹಾದೇವು ಲಕ್ಕಸಂದ್ರ ದೇವರಾಜು ಕ್ಯಾಸಾಪುರ, ಬಿ ಟಿ ರಾಜೇಂದ್ರ, ಸಮಧ್, ಅರುಣ್ ಆನುಮಾನಹಳ್ಳಿ, ಡಾ ಕೃಷ್ಣ ಕೆ ಎಂ, ಮತ್ತಿಕೆರೆ ಚಲುವರಾಜು, ಲೋಕೇಶ್ ಬಿಡದಿ ಇದ್ದರು.

WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...