ರಾಜಸ್ಥಾನ | ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ

Date:

Advertisements

ರಾಜಸ್ತಾನದಲ್ಲಿ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ಬಲಪಂಥೀಯ ವಿಚಾರಧಾರೆ ಹೊಂದಿದ್ದ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷನ ಮನೆಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಂದಿರುವುದಾಗಿ ವರದಿಯಾಗಿದೆ.

ಇಂದು ಮುಂಜಾನೆ ಜೈಪುರದಲ್ಲಿ ಅವರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿ ಅವರನ್ನು ಗುಂಡಿಟ್ಟು ಕೊಂದಿದೆ ಎಂದು ರಾಜಸ್ಥಾನ ಪೊಲೀಸರು ತಿಳಿಸಿದ್ದಾರೆ.

“ಈ ಘಟನೆ ಮಂಗಳವಾರ ಮುಂಜಾನೆ ಶ್ಯಾಮ್ ನಗರ ಪ್ರದೇಶದಲ್ಲಿರುವ ಅವರ ಮನೆಯಲ್ಲಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ನಾಲ್ವರು ಸುಖ್‌ದೇವ್ ಇದ್ದ ಮನೆಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಿಂದಾಗಿ ಸುಖ್‌ದೇವ್ ಅವರ ಭದ್ರತಾ ಸಿಬ್ಬಂದಿ ಹಾಗೂ ಇನ್ನೊಬ್ಬರು ಗಾಯಗೊಂಡಿದ್ದಾರೆ” ಎಂದು ರಾಜಸ್ಥಾನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ‘ಪಿಟಿಐ’ಗೆ ತಿಳಿಸಿದ್ದಾರೆ.

Advertisements

ಗೊಗಮೆಡಿ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು ಎಂದು ಜೈಪುರ ಪೊಲೀಸ್ ಆಯುಕ್ತ ಬಿಜು ಜಾರ್ಜ್ ಜೋಸೆಫ್ ತಿಳಿಸಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸುತ್ತಿರುವ ದೃಶ್ಯ ಸುಖ್‌ದೇವ್ ಸಿಂಗ್ ಅವರ ಮನೆಯಲ್ಲಿರುವ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭೀಕರವಾಗಿದೆ.

ಘಟನೆಯಿಂದಾಗಿ ಆಕ್ರೋಶಗೊಂಡಿರುವ ರಜಪೂತ ಕರ್ಣಿ ಸೇನೆಯ ಸದಸ್ಯರು ಹಾಗೂ ಸುಖ್‌ದೇವ್ ಸಿಂಗ್ ಅವರ ಬೆಂಬಲಿಗರು ರಾಜಸ್ಥಾನದ ವಿವಿಧೆಡೆ ಪ್ರತಿಭಟನೆ ನಡೆಸುತ್ತಿದ್ದು, ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸುವಂತೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X