ಲೋಕಾಯುಕ್ತ ಪೊಲೀಸರ ದಾಳಿ: ಲಂಚದ ಹಣವನ್ನು ನುಂಗಿ ನೀರು ಕುಡಿದ ಅಧಿಕಾರಿ!

Date:

  • ಮಧ್ಯಪ್ರದೇಶದ ಕಟ್ನಿಯಲ್ಲಿ ನಡೆದ ಘಟನೆ
  • ಪ್ರಕರಣ ದಾಖಲಾಗಿದೆ ಎಂದ ಲೋಕಾಯುಕ್ತ ಪೊಲೀಸರು

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಸಿಕ್ಕಿಬೀಳುವ ಭಯದಲ್ಲಿ ಲಂಚವಾಗಿ ಪಡೆದಿದ್ದ ಹಣವನ್ನು ಬಾಯಿಗೆ ಹಾಕಿ, ನುಂಗಿದ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

- Advertisement -

ಮಧ್ಯಪ್ರದೇಶದ ಕಟ್ನಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಯೊಬ್ಬ ವ್ಯಕ್ತಿಯೋರ್ವನಿಂದ ಲಂಚವಾಗಿ ಪಡೆದಿದ್ದ 5 ಸಾವಿರ ರೂ. ಹಣವನ್ನು ಪೊಲೀಸರ ದಾಳಿಯಾಗುತ್ತಿದ್ದಂತೆಯೇ ಹಣವನ್ನು ನುಂಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ವೇಳೆ ಹಣವನ್ನು ನುಂಗುತ್ತಿರುವ ದೃಶ್ಯವನ್ನು ಲೋಕಾಯುಕ್ತ ಅಧಿಕಾರಿಗಳು ಸೆರೆ ಹಿಡಿದಿದ್ದು, ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದೆ.

ಈ ಘಟನೆ ನಿನ್ನೆ(ಜು.24)ರಂದು ನಡೆದಿದ್ದು, ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಕಂದಾಯ ಇಲಾಖೆಯ ಅಧಿಕಾರಿಯನ್ನು ಪಟ್ವಾರಿ ಗಜೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂ–ಮೈ ಎಕ್ಸ್‌ಪ್ರೆಸ್-ವೇನಲ್ಲಿ ಲಘು ವಾಹನ ಸಂಚಾರ ನಿರ್ಬಂಧ

ಈ ಬಗ್ಗೆ ಮಾಹಿತಿ ನೀಡಿರುವ ಲೋಕಾಯುಕ್ತ ಸ್ಪೆಷಲ್​ ಪೊಲೀಸ್​ ಎಸ್ಟಾಬ್ಲಿಶ್​ಮೆಂಟ್‌ನ (ಎಸ್‌ಪಿಇ) ಪೊಲೀಸ್ ವರಿಷ್ಠಾಧಿಕಾರಿ ಸಂಜಯ್​ ಸಾಹು, “ಬರ್ಖೇಡಾ ಗ್ರಾಮದ ವ್ಯಕ್ತಿಯೊಬ್ಬರು ಗಜೇಂದ್ರ ಸಿಂಗ್ ಲಂಚ ಕೇಳುತ್ತಿದ್ದಾರೆಂದು ಆರೋಪಿಸಿ ನಮಗೆ ದೂರು ನೀಡಿದ್ದರು. ಹಣವನ್ನು ತೆಗೆದುಕೊಂಡ ನಂತರ ಸ್ಥಳದಲ್ಲಿದ್ದ ಲೋಕಾಯುಕ್ತ ಅಧಿಕಾರಿಗಳನ್ನು ಗಮನಿಸಿ, ರೆಡ್ ಹ್ಯಾಂಡಾಗಿ ಸಿಕ್ಕಿ ಬೀಳುವುದು ಗೊತ್ತಾಗಿದೆ. ಭಯದಿಂದ ಬಳಿಕ ಲಂಚವಾಗಿ ಪಡೆದಿದ್ದ ಐದು ಸಾವಿರ ಮೊತ್ತದಷ್ಟಿದ್ದ ನೋಟುಗಳನ್ನು ಬಾಯಿಗೆ ಹಾಕಿ, ನೀರು ಕುಡಿದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಪರೀಕ್ಷಿಸಿದ ವೈದ್ಯರು, ಆತನ ಆರೋಗ್ಯದಲ್ಲಿ ಏನೂ ಏರುಪೇರಾಗಿಲ್ಲ, ಚೆನ್ನಾಗಿದ್ದಾರೆ ಎಂದು ತಿಳಿಸಿದರು. ಸದ್ಯ ಗಜೇಂದ್ರ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ” ಎಂದು ಅಧಿಕಾರಿ ಹೇಳಿದರು.

ಈ ಘಟನೆಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಹಲವು ನೆಟ್ಟಿಗರು, ಈವರೆಗೆ ಅಧಿಕಾರಿಗಳು ಹಣವನ್ನು ನುಂಗಿ, ನೀರು ಕುಡಿದಿದ್ದಾರೆ ಎಂದಷ್ಟೇ ಕೇಳಿದ್ದೆವು. ಈತ ಅದನ್ನು ಎಲ್ಲರಿಗೂ ನಿಜವಾಗಿಯೂ ಸಾಕ್ಷಿ ನೀಡಿದ. ಇಂತದ್ದೂ ಕೂಡ ನಮ್ಮ ದೇಶದಲ್ಲಿ ನಡೆಯುತ್ತದೆಯಲ್ವಾ!” ಎಂದು ಆಶ್ಚರ್ಯ ವ್ಯಕ್ತಪಡಿಸಿ, ಟ್ರೋಲ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಪದವೀಧರರ-ಶಿಕ್ಷಕರ ನಿಜವಾದ ಧ್ವನಿಯಾಗಲು ಸ್ಪರ್ಧೆ;ಯಾವುದೇ ಒತ್ತಡಕ್ಕೂ ಹಿಂದೆ ಸರಿಯಲ್ಲ:ವಕೀಲ ಬರೀದ್

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ವಕೀಲ ಬರೀದ್...

ಸಿಜೆಪಿ ಪ್ರತಿಭಟನೆ ಯಶಸ್ವಿ; 40 ಸಾವಿರ ಅರೆಸೇನಾ ಯೋಧರ ನಿಯೋಜನೆಯೇ ಸಾಕ್ಷಿ:‌ ಪ್ರಶಾಂತ್ ಕಿಶೋರ್

ಭಾರತದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಸಿಜೆಪಿ ಕರೆಕೊಟ್ಟಿದ್ದ...

ಬೀದರ್‌ | ಜಿಪಂ 34, ತಾಪಂ 123 ಸ್ಥಾನಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ!

ರಾಜ್ಯ ಸರ್ಕಾರವು ಬೀದರ್‌ ಜಿಲ್ಲೆಯ 34 ಜಿಲ್ಲಾ ಪಂಚಾಯಿತಿ ಹಾಗೂ 123...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...