ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

Date:

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಆಯೋಗದ ಪದಚ್ಯುತ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಹಾಲಿ ಸದಸ್ಯೆ ಬಿ.ವಿ. ಗೀತಾ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ.

- Advertisement -

ಇಡಿ ಅಧಿಕಾರಿಗಳ ಪ್ರತ್ಯೇಕ ತಂಡಗಳು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಆರೋಪಿಗಳ ಫ್ಲ್ಯಾಟ್‌ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದವು. ಸತತ ಹಲವು ಗಂಟೆಗಳ ಕಾಲ ನಡೆಸಿದ ಸುದೀರ್ಘ ಶೋಧ ಕಾರ್ಯಾಚರಣೆ ಮತ್ತು ಡ್ರಿಲ್ ವಿಚಾರಣೆಯ ಬಳಿಕ, ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಸಾಕ್ಷ್ಯನಾಶದ ಬಲವಾದ ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಬ್ಬರನ್ನೂ ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ನಂತರ ಆರೋಪಿಗಳನ್ನು ಬೆಂಗಳೂರಿನ ಕೋರಮಂಗಲದಲ್ಲಿರುವ ಜಡ್ಜ್‌ ನಿವಾಸದಲ್ಲಿ ಹಾಜರುಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಆಯೋಗದಲ್ಲಿ ನಡೆದ 400 ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಅಕ್ರಮ ಈ ಬೃಹತ್ ಜಾಲದ ಪ್ರಮುಖ ಕೊಂಡಿಯಾಗಿದೆ. ಈ ಪರೀಕ್ಷೆಯ ಹಿಂದಿನ ದಿನವೇ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ, ಅಭ್ಯರ್ಥಿಗಳಿಂದ ಕೋಟ್ಯಂತರ ರೂಪಾಯಿ ಲಂಚ ಪಡೆಯಲಾಗಿತ್ತು.

ಇದನ್ನೂ ಓದಿ: ಬೆಂಗಳೂರು | ಕೆಪಿಎಸ್​ಸಿ ಸದಸ್ಯತ್ವ ಕೊಡಿಸುತ್ತೇವೆಂದು ₹4 ಕೋಟಿ ವಂಚನೆ; ನಾಲ್ವರ ಬಂಧನ

ಈ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿದ್ದ ಪರೀಕ್ಷಾ ನಿಯಂತ್ರಕ ಹಾಗೂ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಹಾಗೂ ಸಾಹುಕಾರ್ ಸಂಬಂಧಿ ಸೋಗುರೇಶ್ ಇಡಿ ಕಸ್ಟಡಿಯಲ್ಲಿದ್ದಾಗ ನೀಡಿದ ಸರಣಿ ಹೇಳಿಕೆಗಳು ಬಂಧನಕ್ಕೆ ಪ್ರಮುಖ ಕಾರಣವಾಗಿವೆ. ಪರೀಕ್ಷೆಯ ಹಿಂದಿನ ದಿನ ಸಾಹುಕಾರ್ ಸೂಚನೆ ಮೇರೆಗೆ ಉತ್ತರ ಸಹಿತ ಪ್ರಶ್ನೆಪತ್ರಿಕೆ ಸಿಕ್ಕಿತ್ತು ಎಂದು ಸೋಗುರೇಶ್ ಬಾಯಿಬಿಟ್ಟಿದ್ದ. ಅಲ್ಲದೆ ಗಂಗ್ವಾರ್ ವಿಚಾರಣೆ ವೇಳೆ ಸಾಹುಕಾರ್ ಸೇರಿದಂತೆ ಸದಸ್ಯೆ ಬಿ.ವಿ. ಗೀತಾ ಅವರ ಹೆಸರುಗಳನ್ನು ಬಹಿರಂಗಪಡಿಸಿದ್ದರು.

ರಾಯಚೂರು ಜಿಲ್ಲೆಯ ದೇವದುರ್ಗ ಮೂಲದ ಶಿವಶಂಕರಪ್ಪ ಸಾಹುಕಾರ್ 2019ರಲ್ಲಿ ಆಯೋಗದ ಸದಸ್ಯರಾಗಿ, ನಂತರ 2021ರಲ್ಲಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಆದರೆ, ತಮ್ಮ ಮಗಳಿಗೆ ಸುಳ್ಳು ಆದಾಯ ಪ್ರಮಾಣಪತ್ರದ ಮೂಲಕ ಅಕ್ರಮವಾಗಿ ಹುದ್ದೆ ಕೊಡಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಾಜ್ಯಪಾಲರು ಅವರನ್ನು ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿದ್ದರು. ಮತ್ತೊಂದೆಡೆ, ಶಿವಮೊಗ್ಗ ಮೂಲದ ಬಿ.ವಿ. ಗೀತಾ ಅವರು ಈ ಹಿಂದೆ ಮಾಹಿತಿ ಹಕ್ಕು ಆಯುಕ್ತರಾಗಿದ್ದು, 2022ರಲ್ಲಿ ಕೆಪಿಎಸ್‌ಸಿ ಸದಸ್ಯೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಅಭ್ಯರ್ಥಿಗಳಿಂದ ತಲಾ ಲಕ್ಷಾಂತರ ರೂಪಾಯಿ ಹಣ ಪಡೆದು ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿತ್ತು. ಇದೀಗ ಸಾಹುಕಾರ್ ಹಾಗೂ ಗೀತಾ ಬಂಧನದಿಂದ ಆಯೋಗದಲ್ಲಿದ್ದ ಇನ್ನುಳಿದ ಪ್ರಭಾವಿ ಮಧ್ಯವರ್ತಿಗಳು ಹಾಗೂ ಭ್ರಷ್ಟ ಅಧಿಕಾರಿಗಳಿಗೂ ಆತಂಕ ಶುರುವಾಗಿದ್ದು, ತನಿಖೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...

ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಹಾಸನ ಜಿಲ್ಲೆಯ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ‘ಆಸ್ತಿಕತೆ ಮತ್ತು ನಾಸ್ತಿಕತೆ ವೈಯಕ್ತಿಕ ವಿಚಾರವೇ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ: ವಿರೋಧಿಸಿ ಬೃಹತ್ ಪಾದಯಾತ್ರೆ 

ಮಲೆನಾಡಿನ ಜನರ ಪಾಲಿಗೆ 'ಮರಣಶಾಸನ'ವಾಗಿ ಪರಿಣಮಿಸಿರುವ ಅರಣ್ಯ ಕಾಯ್ದೆಗಳಲ್ಲೊಂದಾದ ಕಸ್ತೂರಿ ರಂಗನ್...

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...