ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡಲು ‘ನಮಗೆ’ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್‌

Date:

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿದೆ.

- Advertisement -

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಅದನ್ನು ಸಂಸತ್ತು ಮಾಡಬೇಕೆಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ‘ನ್ಯಾಯಾಲಯವು ಕಾನೂನುಗಳನ್ನು ಮಾಡುವುದಿಲ್ಲ ಬದಲಿಗೆ ಅವುಗಳನ್ನು ವ್ಯಾಖ್ಯಾನಿಸುತ್ತದೆ. ಕೇವಲ ಸಂಸತ್ತು ಮಾತ್ರ ವಿಶೇಷ ವಿವಾಹ ಕಾಯ್ದೆಯಲ್ಲಿ ಬದಲಾವಣೆ ತರಬಹುದು. ಆದರೆ ಈ ಎಲ್‌ಜಿಬಿಟಿಕ್ಯೂ ಸಮುದಾಯ ತಮ್ಮ ಬದುಕು ಸಾಗಿಸುವಲ್ಲಿ ಯಾವುದೇ ತಾರತಮ್ಯ ಆಗದಂತೆ ನೋಡಿಕೊಳ್ಳಬೇಕಾದ ಜವಾಬ್ದಾರಿ ಕೇಂದ್ರ, ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳದ್ದು’ ಎಂದು ಸೂಚಿಸಿದರು.

‘ವಿಶೇಷ ವಿವಾಹ ಕಾಯ್ದೆ(SMA) ವಿಷಯವನ್ನು ಸಂಸತ್ತು ನಿರ್ಧರಿಸಬೇಕು. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 4 ಅನ್ನು ರದ್ದುಪಡಿಸಿದರೆ ಪ್ರಗತಿಪರ ಶಾಸನದ ಪ್ರಯೋಜನಗಳನ್ನು ಕಳೆದುಕೊಳ್ಳಬೇಕಾಗುವ ಅಪಾಯವೂ ಇದೆ. ಇದು ದೇಶವನ್ನು ಸ್ವಾತಂತ್ರ್ಯ ಪೂರ್ವ ಯುಗಕ್ಕೆ ಕೊಂಡೊಯ್ಯಲಿದೆ. ಭಾರತೀಯ ಉತ್ತರಾಧಿಕಾರ ಕಾಯ್ದೆ ಅಥವಾ ಹಿಂದೂ ಉತ್ತರಾಧಿಕಾರ ಕಾಯ್ದೆಯನ್ನು ಒಮ್ಮೆ ಗಮನಿಸಿದರೆ ಈ ಪ್ರಕರಣವು ಶಾಸಕಾಂಗ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ ಎಂಬುದು ಸ್ಪಷ್ಟ’ ಎಂದು ಸಿಜೆಐ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಮೇ 11ರಂದು ತೀರ್ಪು ಕಾಯ್ದಿರಿಸಿತ್ತು.

 

ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರಿದ್ದ ಪಂಚಪೀಠವು ಈ ತೀರ್ಪು ನೀಡಿದೆ.

live law

ಫೋಟೋ ಕೃಪೆ: Live Law

ಸಲಿಂಗಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕು ಎಂದು ಕೋರಿ 18 ಸಲಿಂಗಿ ದಂಪತಿ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಕೋರ್ಟ್​ ಏಪ್ರಿಲ್ 18ರಿಂದ ಆರಂಭಿಸಿತ್ತು.

ತೀರ್ಪಿನಲ್ಲಿ ಉಲ್ಲೇಖಿಸಿದ ಪ್ರಮುಖ ಅಂಶಗಳು:

  1. ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನ ಕ್ರಮವನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗ
  2. ಮದುವೆಯು ಸ್ಥಿರ ಮತ್ತು ಬದಲಾಗದ ಸಂಸ್ಥೆ ಎಂದು ಹೇಳುವುದು ತಪ್ಪು
  3. ಎಲ್‌ಜಿಬಿಟಿ ಸಮುದಾಯದ ವ್ಯಕ್ತಿಗಳು ಸೇರಿದಂತೆ ಎಲ್ಲ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ.
  4. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದ ಬದುಕನ್ನು ಬದುಕುವ ಸಾಮರ್ಥ್ಯವಾಗಿದೆ
  5. ಕ್ವೀರ್ ಸಮುದಾಯಕ್ಕೆ ಯಾವುದೇ ಸೇವೆ, ಸವಲತ್ತು ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...