ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

Date:

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ ‘ಊರೂರೂ ಜಂತರ್ ಮಂತರ್’ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಉಡುಪಿಯಲ್ಲೂ ಪ್ರತಿಭಟನೆ ಹಾಗೂ ಜಾಥಾ ಆಯೋಜಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಚಾರ್ಲ್ಸ್ ಅಂಬ್ಲರ್ ತಿಳಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಸಹಬಾಳ್ವೆ ಮತ್ತು ಸಹಭಾಗಿತ್ವದ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ದೇಶದಲ್ಲಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಶಕ್ತಿಗಳು ತಮ್ಮ ಕೋಮುವಾದಿ ಅಜೆಂಡಾವನ್ನು ಜಾರಿಗೊಳಿಸಲು ಸಂವಿಧಾನಬದ್ಧ ಸಂಸ್ಥೆಗಳನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿವೆ. ಇದರಿಂದ ಪ್ರಜಾಪ್ರಭುತ್ವದ ಮೂಲತತ್ವಗಳಿಗೆ ಧಕ್ಕೆಯಾಗುತ್ತಿದ್ದು, ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

1013255538

ಸಂವಿಧಾನಬದ್ಧವಾಗಿ ಪ್ರತಿಭಟಿಸುವ ಹಕ್ಕನ್ನು ಮೊಟಕುಗೊಳಿಸುವ ಪ್ರಯತ್ನಗಳು ನಡೆಯುತ್ತಿದ್ದು, ಪ್ರಜಾಪ್ರಭುತ್ವದ ಬದಲಿಗೆ ಸರ್ವಾಧಿಕಾರಿ ಧೋರಣೆಯನ್ನು ನೆಲೆಗೊಳಿಸುವ ಆತಂಕ ಎದುರಾಗಿದೆ. ನ್ಯಾಯಾಂಗದ ಕಾರ್ಯವೈಖರಿಯ ಬಗ್ಗೆಯೂ ಜನರಲ್ಲಿ ಅನುಮಾನಗಳು ಮೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂವಿಧಾನದ ಆಶಯ ಎತ್ತಿಹಿಡಿಯಲ್ಪಡಬೇಕು ಎಂದು ಚಾರ್ಲ್ಸ್ ಅಂಬ್ಲರ್ ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ಸಂವಿಧಾನದ ಆಶಯಗಳು ಅಪಾಯಕ್ಕೆ ಸಿಲುಕಿವೆ ಎಂಬ ಆತಂಕದ ಸಂದರ್ಭದಲ್ಲಿ, ಸಂವಿಧಾನವನ್ನು ರಕ್ಷಿಸುವುದು ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳನ್ನು ಉಳಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಕ್ಟೋಬರ್ 23ರಂದು ನಡೆಯುವ ‘ಊರೂರೂ ಜಂತರ್ ಮಂತರ್’ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದ ಪರ ಇರುವ ಎಲ್ಲರೂ ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಅವರು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ದ ಒರಿಜಿನಲ್ ಆಭರಣ ಜುವೆಲ್ಲರ್ಸ್’ ನವೀಕೃತ ಶೋರೂಂ ಲೋಕಾರ್ಪಣೆ

ಉಡುಪಿ ನಗರದ ಹೃದಯ ಭಾಗದಲ್ಲಿರುವ ಸಿಬಿ ರಸ್ತೆಯಲ್ಲಿ 1935 ರಲ್ಲಿ ಆರಂಭಗೊಂಡಿದ್ದ...

ವಿಜಯಪುರ |ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರ ಬದುಕಿಗೆ ಬೆಳಕಾದ ಎಂ.ಎಸ್. ಖೇಡ: 10ನೇ ಪುಣ್ಯಸ್ಮರಣೆ

ಬಡವರು, ದೀನ-ದುರ್ಬಲರು ಹಾಗೂ ವಿಕಲಚೇತನರಿಗೆ ಶಿಕ್ಷಣದ ಮೂಲಕ ಬದುಕು ಕಟ್ಟಿಕೊಟ್ಟ ವಿಜಯಪುರ...

ಹಾಸನ | ಅಕ್ರಮ ಪೋಡಿ ದುರಸ್ತಿ: ರದ್ದು ಪಡಿಸಲು ನ್ಯಾಯಾಲಯ ಆದೇಶ 

ಸಕಲೇಶಪುರ ತಾಲೂಕಿನ ಸರ್ವೆಯರ್ ಹಾಗೂ ಸೂಪರ್‌ವೈಸರ್ ಸೇರಿ ಅಕ್ರಮವಾಗಿ ಕಿರುಹುಣಸೆ ಗ್ರಾಮದ...

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...