ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳ ಬಿಡುಗಡೆ: ಸೋಮವಾರ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್‌

Date:

ಗುಜರಾತ್‌ ಹತ್ಯಾಕಾಂಡದ ಸಂದರ್ಭದಲ್ಲಿ ಬಿಲ್ಕಿಸ್‌ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಲೆಗೈದ ಪ್ರಕರಣದಲ್ಲಿ ದೋಷಿಗಳಾಗಿದ್ದ 11 ಮಂದಿಗೆ ಶಿಕ್ಷೆ ತಗ್ಗಿಸಿದ್ದ ಗುಜರಾತ್‌ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಜ.8, ಸೋಮವಾರ) ಮಹತ್ವದ ತೀರ್ಪು ಪ್ರಕಟಿಸಲಿದೆ.

- Advertisement -

ಪ್ರಕರಣಕ್ಕೆ ಸಂಬಂಧಿಸಿದ ತೀರ್ಪನ್ನು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಹಾಗೂ ಕರ್ನಾಟಕದ ಬಿ ವಿ ನಾಗರತ್ನ ಅವರಿದ್ದ ಪೀಠ ಅಕ್ಟೋಬರ್ 12ರಂದು ಕಾಯ್ದಿರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಪ್ಪತ್ತೆರಡು ವರ್ಷಗಳ ಹಿಂದೆ ನಡೆದಿದ್ದ ಗುಜರಾತ್ ಗಲಭೆ ವೇಳೆ ಬಾನು ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಅಪರಾಧಿಗಳನ್ನು ಅವಧಿಪೂರ್ವದಲ್ಲೇ ಬಿಡುಗಡೆ ಮಾಡಿದ್ದನ್ನು ಪ್ರಶ್ನಿಸಿದ್ದ ಪ್ರಕರಣ ಇದಾಗಿದೆ.

ಕ್ಷಮಾದಾನದ ಅರ್ಜಿಯನ್ನು ಅಪರಾಧ ನಡೆದ ರಾಜ್ಯದ ನೀತಿಗೆ ಅನುಗುಣವಾಗಿ ಪರಿಗಣಿಸಬೇಕೆ ವಿನಾ ವಿಚಾರಣೆ ನಡೆದ ಸ್ಥಳದಲ್ಲಿನ ನೀತಿಗೆ ಅನುಗುಣವಾಗಿ ಅಲ್ಲ ಎಂದು ಮೇ 2022ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನಂತೆ ಗುಜರಾತ್‌ ಸರ್ಕಾರ ಅಪರಾಧಿಗಳ ಶಿಕ್ಷೆ ಕಡಿತಗೊಳಿಸಿತ್ತು.

aparadhi1
ಬಿಡುಗಡೆಗೊಂಡಿದ್ದ ಅಪರಾಧಿಗಳು

ತೀರ್ಪಿಗೆ ಅನುಗುಣವಾಗಿ ಪ್ರಕರಣದ ವಿಚಾರಣೆ ಮಹಾರಾಷ್ಟ್ರದಲ್ಲಿ ನಡೆದಿದ್ದರೂ ಅಪರಾಧಿಗಳನ್ನು ಬಿಡುಗಡೆ ಮಾಡಲು ಗುಜರಾತ್ ಸರ್ಕಾರ ತನ್ನ ಕ್ಷಮಾದಾನ ನೀತಿಯನ್ನು ಅನ್ವಯಿಸಿತ್ತು. ಅದರಂತೆ ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧೇಶಾಮ್‌ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯ್ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯ ವೇಳೆ ಇವರೆಲ್ಲರನ್ನೂ ಆರತಿ ಎತ್ತಿ, ಸ್ವಾಗತಿಸಲಾಗಿತ್ತು. ಇದು ದೇಶಾದ್ಯಂತ ವ್ಯಾಪಕ ಟೀಕೆಗೂ ಕಾರಣವಾಗಿತ್ತು.

ಇದನ್ನು ಓದಿದ್ದೀರಾ? ಕೇಂದ್ರ ಸರ್ಕಾರ ಕರ್ನಾಟಕವನ್ನು ಪ್ರತಿಯೊಂದರಲ್ಲೂ ಸವತಿ ಮಗನಂತೆ‌ ನೋಡುತ್ತಿದೆ: ಸಚಿವ ಗುಂಡೂರಾವ್

ಜೈಲಿನಲ್ಲಿ 14 ವರ್ಷಗಳನ್ನು ಪೂರ್ಣಗೊಳಿಸಿದ ಕಾರಣ ಮತ್ತು ವಯಸ್ಸು, ಅಪರಾಧದ ಸ್ವರೂಪ, ಜೈಲಿನಲ್ಲಿನ ನಡವಳಿಕೆ ಮುಂತಾದ ಅಂಶಗಳಿಂದಾಗಿ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜ್ ಕುಮಾರ್ ಹೇಳಿದ್ದರು.

ಗುಜರಾತ್ ಸರ್ಕಾರದ ನಿರ್ಧಾರವನ್ನು ಬಾನೊ ಸೇರಿದಂತೆ ಹಲವು ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಇದರ ತೀರ್ಪನ್ನು ಸುಪ್ರೀಂ ಕೋರ್ಟ್‌ ನಾಳೆ(ಜ.8) ತೀರ್ಪು ಪ್ರಕಟಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...