ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

Date:

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ 6ನೇ ಕ್ರಾಸ್‌ನಲ್ಲಿರುವ ಪಾಳು ಜಾಗದಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ವೇಳೆ ದಿಢೀರನೇ ನಾಲ್ಕು ಸಿಲಿಂಡರ್‌ಗಳ ಸರಣಿ ಸ್ಫೋಟ ಉಂಟಾಗಿದೆ.

- Advertisement -

ಸ್ಫೋಟದ ರಭಸಕ್ಕೆ ಸಿಲಿಂಡರ್‌ ಒಂದರ ಭಾಗ ಪಕ್ಕದಲ್ಲೇ ಇದ್ದ ಶಾಲೆಯ ಕಿಟಕಿಗೆ ಬಂದು ಬಡಿದಿದೆ. ಇದರಿಂದ ಸ್ಥಳೀಯವಾಗಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಹುಬ್ಬಳ್ಳಿಯಲ್ಲಿ ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ₹31ರಿಂದ ₹60ಕ್ಕೆ ಏರಿಕೆ ಮಾಡಿ...

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಮೂರ್ತಿ ಎಂಬುವವರಿಗೆ ಸೇರಿದ ಪಾಳು ಜಾಗದ ಶೆಡ್‌ನಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದ್ದು, ಸ್ಫೋಟದ ತೀವ್ರತೆಗೆ ಶೆಡ್ ಸಂಪೂರ್ಣವಾಗಿ ಹಾನಿಗೊಳಗಾಗಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಬೈಯಪ್ಪನಹಳ್ಳಿ ಠಾಣೆಯ ಪೊಲೀಸರು ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.​

ಈ ಸುದ್ದಿ ಓದದ್ದೀರಾ? ಉಡುಪಿ | ಈಜಲು ತೆರಳಿದ ಯುವಕರು ನೀರುಪಾಲು; ಬೈಂದೂರಿನಲ್ಲಿ ಕೊಲೆ ಯತ್ನ ಆರೋಪಿಗಳ ಆತ್ಮಹತ್ಯೆ

ಘಟನಾ ಸ್ಥಳಕ್ಕೆ ಎಸಿಪಿ ಹಾಗೂ ಇನ್ಸ್​​ಪೆಕ್ಟರ್​ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ದಂಧೆ, ಘಟನೆಗೆ ಕಾರಣವಾದ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಟೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ಪತ್ರಕರ್ತ ಶ್ರೀನಿವಾಸ ಎ. ಕೊಳ್ಳೇಗಾಲ ನಿಧನ

ಕಿರಿಯ ವಯಸ್ಸಿನಲ್ಲೇ ಹೃದಯಾಘಾತದಿಂದ ಪತ್ರಕರ್ತ ಹಾಗೂ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ...

ಶಿಕಾರಿಪುರದಲ್ಲಿ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ

ಇಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಿಟ್ಟದಹಳ್ಳಿ ಗ್ರಾಮದಿಂದ ‘ಭಾರತ್ ಜೋಡೋ...