ಆಪರೇಷನ್‌ ಹಸ್ತ | ರಹಸ್ಯವಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಿವರಾಮ್‌ ಹೆಬ್ಬಾರ್

Date:

Advertisements
  • ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್‌ ಹೆಬ್ಬಾರ್
  • ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದ ಹೆಬ್ಬಾರ್

ಆಪರೇಷನ್‌ ಹಸ್ತದ ಚರ್ಚೆ ಜೋರಾಗಿರುವ ನಡುವೆ ಬಿಜೆಪಿ ನಾಯಕ ಶಿವರಾಮ್‌ ಹೆಬ್ಬಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಶುಕ್ರವಾರ ರಾತ್ರಿ ಖಾಸಗಿಯಾಗಿ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಶಿವರಾಮ್‌ ಹೆಬ್ಬಾರ್ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್‌ನತ್ತ ಚಿತ್ತ ನೆಟ್ಟಿದ್ದಾರೆ ಎಂಬ ಮಾಹಿತಿ ಇದೆ. ಈ ನಡುವೆ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಸಚಿವ ಎಸ್‌ ಟಿ ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Advertisements

ಈ ಬೆಳವಣಿಗೆ ಬೆನ್ನಲ್ಲೇ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಕೂಡ ‌ಸಿದ್ದರಾಮಯ್ಯ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಬಿಜೆಪಿ ನಾಯಕರನ್ನು ಬೀದಿಯಲ್ಲಿ ನಿಲ್ಲಿಸಿದ ಪ್ರಧಾನಿ ಮೋದಿ : ಟ್ವೀಟ್ ಮೂಲಕ ಕಾಲೆಳೆದ ಕಾಂಗ್ರೆಸ್

ಆದರೆ, ಕಾಂಗ್ರೆಸ್‌ ಸೇರುವ ಬಗ್ಗೆ ಎಸ್‌ ಟಿ ಸೋಮಶೇಖರ್‌ ಮತ್ತು ಶಿವರಾಮ್‌ ಹೆಬ್ಬಾರ್ ನಿರಾಕರಿಸಿದ್ದಾರೆ. ಆದರೂ ಇಬ್ಬರು ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಕ್ಷೇತ್ರದ ಅಭಿವೃದ್ಧಿ ಕೆಲಸ ಕಾರ್ಯಗಳ ಕುರಿತಾಗಿ ಚರ್ಚೆ ಮಾಡುವುದು ಕಾರಣ ಎಂದು ಎಸ್‌ಟಿ ಸೋಮಶೇಖರ್ ಹೇಳಿದ್ದರು. ಇದೇ ಹೇಳಿಕೆಯನ್ನು ಶಿವರಾಮ್‌ ಹೆಬ್ಬಾರ್ ಕೂಡಾ ಪುನರ್‌ ಉಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X