ತಮ್ಮ ಮದುವೆಗೆ ಆಹ್ವಾನಿಸಿ ಯುವಕನೋರ್ವ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಂದಿಸಿದ್ದು, ‘ಮದುವೆಗೆ ಶುಭ ಕೋರಿ ಪ್ರಧಾನಿ ಬರೆದ ಪತ್ರಕ್ಕೆ’ ಯುವಕ ಸೇರಿ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.
ಸಿಂಧನೂರು ತಾಲ್ಲೂಕಿನ ಕಾನಿಹಾಳ ಗ್ರಾಮದ ಯುವಕ ರಾಜೇಶ್ ನಾಯಕ ಅವರ ಮದುವೆ ಸವಿತಾ ಅವರೊಂದಿಗೆ ಏ.13 ರಂದು ನಿಗದಿಯಾಗಿತ್ತು. ತಮ್ಮ ಮದುವೆ ಸಂಭ್ರಮಕ್ಕೆ ಪ್ರಧಾನಿ ಮೋದಿಯವರನ್ನೂ ಆಹ್ವಾನಿಸಬೇಕೆಂದು ಬಯಸಿದ ರಾಜೇಶ್, ದೆಹಲಿಯ ಪ್ರಧಾನಿ ಕಚೇರಿಗೆ ಮದುವೆಯ ಆಹ್ವಾನ ಪತ್ರಿಕೆಯನ್ನು ಕಳುಹಿಸಿದ್ದರು. ಈ ಆಹ್ವಾನವನ್ನು ಸ್ವೀಕರಿಸಿದ ಪ್ರಧಾನಿ ಮೋದಿ ಅವರು ಪತ್ರದ ಮೂಲಕ ನವಜೋಡಿಗೆ ಶುಭ ಹಾರೈಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಬಿರುಬಿಸಿಲು: ಕಚೇರಿ ಕೆಲಸಗಳ ಸಮಯ ಪರಿಷ್ಕರಣೆ ಉಪಯೋಗವಾಗುತ್ತಿದೆಯೇ?
ಈ ಹಿನ್ನಲೆಯಲ್ಲಿ ರಾಜೇಶ್ ನಾಯಕ್ ಅವರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, ‘ನಿಮ್ಮ ವಿವಾಹ ಮಹೋತ್ಸವಕ್ಕೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ಹೃತ್ಪೂರ್ವಕ ಧನ್ಯವಾದಗಳು. ಜೀವನದ ಈ ಶುಭ ಸಂದರ್ಭಕ್ಕೆ ಕಾಲಿಡುತ್ತಿರುವ ನಿಮಗೆ ಮತ್ತು ಸವಿತಾ ಅವರಿಗೆ ಸುಂದರ ಭವಿಷ್ಯಕ್ಕಾಗಿ ಶುಭಾಶೀರ್ವಾದಗಳು’ ಎಂದು ಹಾರೈಸಿದ್ದಾರೆ.





