ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

Date:

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು ಜಾತ್ಯತೀತ ತತ್ವವನ್ನು ಸಾರಿದ್ದಾರೆ. ಮಹಿಳೆಯರಿಗೆ ಮೊಟ್ಟಮೊದಲು ಸ್ವಾತಂತ್ರ್ಯ ಹಾಗೂ ಸಮಾನ ಅವಕಾಶಗಳನ್ನು ನೀಡಿದವರು ವಿಶ್ವಗುರು ಬಸವಣ್ಣನವರು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

- Advertisement -

ನಗರದ ಹರಳಯ್ಯನವರ ಗವಿಯಲ್ಲಿ ಅಂತಾರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಹಾಗೂ ಲಿಂಗವಂತ ಹರಳಯ್ಯ ಪೀಠದ ವತಿಯಿಂದ ನಡೆಯುತ್ತಿರುವ ಶರಣ ವಿಜಯೋತ್ಸವ, ನಾಡಹಬ್ಬ ಹಾಗೂ ಹುತಾತ್ಮ ದಿನಾಚರಣೆಯ ನಾಲ್ಕನೇ ದಿನದ ಕಾರ್ಯಕ್ರಮದಲ್ಲಿ ಶಿವಯೋಗಿ ಸಿದ್ಧರಾಮ ನಾಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

“ಸಮಾನತೆ ಮತ್ತು ಸೌಹಾರ್ದತೆಯ ಸಮಾಜ ನಿರ್ಮಿಸಲು ಶರಣರು ಅಂಧಕಾರ, ಮೌಢ್ಯ ಹಾಗೂ ಅಸಮಾನತೆಗಳ ವಿರುದ್ಧ ಹೋರಾಡಿದರು. ವಿಶ್ವದ ಪ್ರಥಮ ಸಂಸತ್ತು ಎಂದೇ ಪ್ರಸಿದ್ಧವಾದ ಅನುಭವ ಮಂಟಪದಲ್ಲಿ ವಿವಿಧ ಸಮುದಾಯಗಳ 770 ಅಮರಗಣಂಗಳಿಗೆ ಅವಕಾಶ ಕಲ್ಪಿಸುವ ಮೂಲಕ ಎಲ್ಲರನ್ನೂ ಒಂದೇ ವೇದಿಕೆಗೆ ತಂದರು. ಶರಣರು ಎಳೆಹೂಟೆ ಶಿಕ್ಷೆಗೆ ಗುರಿಯಾದರೂ ತಾವು ನಂಬಿದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳಲಿಲ್ಲ. ಮರಣದಲ್ಲಿಯೂ ಮಹಾನವಮಿಯನ್ನು ಕಂಡ ಮಹಾನ್ ಚೇತನಗಳಾಗಿದ್ದಾರೆ” ಎಂದು ಹೇಳಿದರು.

WhatsApp Image 2026 10 10 at 7.46.08 PM 9
ಜಾಹೀರಾತು

“ಹುತಾತ್ಮ ಶರಣರ ಸ್ಮರಣಾರ್ಥ ಸ್ಮಾರಕ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಮನುಕುಲದ ಒಳಿತಿಗಾಗಿ ಅಗತ್ಯವಿರುವ ಎಲ್ಲ ಚಿಂತನೆಗಳು ಬಸವತತ್ವದಲ್ಲಿವೆ. ಅಸತ್ಯದಿಂದ ಸತ್ಯದ ಕಡೆಗೆ, ಅಧರ್ಮದಿಂದ ಧರ್ಮದ ಕಡೆಗೆ ಸಾಗಬೇಕು. ಕೆಡುಕಿನ ಮೇಲೆ ಒಳಿತಿನ ವಿಜಯವಾಗಬೇಕು. ವರ್ಗ, ವರ್ಣ ಹಾಗೂ ಲಿಂಗಭೇದವಿಲ್ಲದ ಸಮಾಜ ನಿರ್ಮಾಣವಾಗಬೇಕು” ಎಂದು ಆಶಯ ವ್ಯಕ್ತಪಡಿಸಿದರು.

ಮುಂಬರುವ ಬಸವ ಜಯಂತಿಯೊಳಗಾಗಿ ನೂತನ ಅನುಭವ ಮಂಟಪವನ್ನು ಲೋಕಾರ್ಪಣೆ ಮಾಡಲಾಗುವುದು. ಬಸವತತ್ವದ ಪ್ರಸಾರ ಮತ್ತು ಪ್ರಚಾರಕ್ಕಾಗಿ ಪೂಜ್ಯ ಅಕ್ಕನವರು ನಿರಂತರವಾಗಿ ಮಾಡುತ್ತಿರುವ ಕಾರ್ಯಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.

WhatsApp Image 2026 10 15 at 5.01.21 PM
ಶಿವಯೋಗಿ ಸಿದ್ಧರಾಮ ನಾಟಕ ಪ್ರದರ್ಶನಗೊಂಡಿತು

ದಿವ್ಯ ಸಾನ್ನಿಧ್ಯ ವಹಿಸಿದ್ದ ಡಾ.ಗಂಗಾಂಬಿಕಾ ಅಕ್ಕ ಆಶೀರ್ವಚನ ನೀಡಿ, “ಬಸವಕಲ್ಯಾಣ ಶರಣರ ಸಿದ್ಧಿಯ ನಾಡಾಗಿದೆ. ಹಂಪಿ ಉತ್ಸವ ಮತ್ತು ಮೈಸೂರು ದಸರಾ ಮಾದರಿಯಲ್ಲಿ ಶರಣ ವಿಜಯೋತ್ಸವವೂ ಪ್ರತಿವರ್ಷ ವಿಜೃಂಭಣೆಯಿಂದ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕಾಗಿ ಪ್ರಾಣಬಲಿದಾನಗೈದ ಶರಣರ ಸ್ಮರಣಾರ್ಥ ಹುತಾತ್ಮ ಶರಣರ ಸ್ಮಾರಕ ನಿರ್ಮಾಣವಾಗಬೇಕು” ಎಂದು ಹೇಳಿದರು.

ಹಿರೇಮಠ ಸಂಸ್ಥಾನದ ಪೂಜ್ಯ ಗುರುಬಸವ ಪಟ್ಟದ್ದೇವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಪೂಜ್ಯ ಸತ್ಯಕ್ಕತಾಯಿ ಅನುಭಾವ ನೀಡಿದರು. ಬಿಡಿವಿಸಿ ಅಧ್ಯಕ್ಷ ಶಶಿಕಾಂತ ದುರ್ಗೆ ಹಾಗೂ ಬೀದರ್ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ದೇವಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬಿಡಿಪಿಸಿ ಕೋಶಾಧ್ಯಕ್ಷ ಜಗನ್ನಾಥ ಖೂಬಾ ಅಧ್ಯಕ್ಷತೆ ವಹಿಸಿದ್ದರು.

WhatsApp Image 2026 10 10 at 6.59.09 PM 4
ಜಾಹೀರಾತು

ಕಾರ್ಯದರ್ಶಿ ಅಶೋಕ ನಾಗರಾಳೆ, ನಿರ್ದೇಶಕ ಮಲ್ಲಿಕಾರ್ಜುನ ಚಿರಡೆ, ಬಿಡಿವಿಸಿ ಕಾರ್ಯದರ್ಶಿ ನಾಗಯ್ಯ ಸ್ವಾಮಿ, ಜಿಲ್ಲಾ ಹೂಗಾರ ಸಮಾಜದ ಅಧ್ಯಕ್ಷ ರಾಜಕುಮಾರ ಹೂಗಾರ, ಜೇಡರ ದಾಸಿಮಯ್ಯ ಸಮಾಜದ ಅಧ್ಯಕ್ಷ ಶಿವಕುಮಾರ ಸಿದ್ಧವೀರೆ, ಮಡಿವಾಳ ಸಮಾಜದ ಅಧ್ಯಕ್ಷ ಗಣಪತಿ ಮಡಿವಾಳ, ಹುಲಸೂರ ಬಸವ ಕೇಂದ್ರದ ಉಪಾಧ್ಯಕ್ಷ ಮಲ್ಲಿಕಾರ್ಜುನ ದೇವಪ್ಪ, ಶಿವಕುಮಾರ ಪಾಟೀಲ, ಚಂಪಾವತಿ ಮಹಾಜನ, ಹೇಮಾ ನೆಹರು, ವಿದ್ಯಾವತಿ ಶೇರಿಕಾರ ಹಾಗೂ ಬಸವರಾಜೇಶ್ವರಿ ನಾಗರಾಳೆ ಉಪಸ್ಥಿತರಿದ್ದರು.

ಅರಿವಿನ ಮನೆ ಅಕ್ಕನ ಬಳಗದವರು ಗುರುಪೂಜೆ ನೆರವೇರಿಸಿದರು. ಪ್ರತಾಪೂರದ ನೀಲಾಂಬಿಕಾ ಅಕ್ಕನ ಬಳಗದವರು ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಶಿವಕುಮಾರ ಬಿರಾದಾರ ಸ್ವಾಗತಿಸಿದರು. ಕವಿತಾ ರಾಜೋಳೆ ನಿರೂಪಿಸಿದರು.

ಇದನ್ನೂ ಓದಿ : ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಲಕ್ಷ್ಮಣ ಮೇತ್ರೆ ಅವರ ನಿರ್ದೇಶನದಲ್ಲಿ ಬೀದರ್ ಅನುಭವ ಮಂಟಪ ಸಂಸ್ಕೃತಿ ವಿದ್ಯಾಲಯದ ಮಕ್ಕಳು ಶಿವಯೋಗಿ ಸಿದ್ಧರಾಮ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬೀದರ್ ದಕ್ಷಿಣ ಕ್ಷೇತ್ರದಲ್ಲಿ 1 ಜಿ.ಪಂ. ಕ್ಷೇತ್ರವನ್ನಾದರೂ ಎಸ್‌ಸಿಗೆ ಮೀಸಲಿಡಿ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕನಿಷ್ಠ ಒಂದು ಜಿಲ್ಲಾ ಪಂಚಾಯಿತಿ...