ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆದ INDIAvsNDA ಹ್ಯಾಷ್‌ಟ್ಯಾಗ್

Date:

Advertisements

2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ 26 ವಿರೋಧ ಪಕ್ಷಗಳು, ತಮ್ಮ ಒಕ್ಕೂಟಕ್ಕಿದ್ದ ಹಳೆಯ ‘ಯುಪಿಎ’ ಎಂಬ ಹೆಸರನ್ನು ಬದಲಿಸಿ, ‘ಇಂಡಿಯಾ (I.N.D.I.A)’ ಎಂಬ ಹೆಸರನ್ನಿಟ್ಟ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ INDIAvsNDA ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವಿಪಕ್ಷಗಳ ಸಭೆಯ ಬಳಿಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಇಂಡಿಯಾ (I.N.D.I.A)’ ಹೆಸರನ್ನು ಘೋಷಿಸಿದರು.

ಇಂಡಿಯಾ ಅಥವಾ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್‌ ಇನ್‌ಕ್ಲೂಸಿವ್ ಅಲಯನ್ಸ್ (ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟ) ಎಂಬ ಸಂಕ್ಷಿಪ್ತ ರೂಪವನ್ನು ಹೆಸರನ್ನಾಗಿ ಇಡಲಾಗಿದೆ.

Advertisements

ಈ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಇದು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೆಂಡ್ ಆಗಿದೆ. ಇದು ಹಲವರ ಕುತೂಹಲಕ್ಕೂ ಕಾರಣವಾಗಿದೆ.

ಮುಂದಿನ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಸೋಲಿಸಿ, ಎಲ್ಲರನ್ನೂ ಒಳಗೊಂಡು, ದೇಶದ ಸಾರ್ವಭೌಮತ್ವವನ್ನು ಈ ಒಕ್ಕೂಟ ಕಾಪಾಡಲಿದೆ ಎಂಬ ಅಭಿಪ್ರಾಯಗಳನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.

ಅಧಿಕೃತವಾಗಿ ಈ ಹೆಸರು ಘೋಷಣೆಗೂ ಮುನ್ನವೇ ಟ್ವೀಟ್ ಮಾಡಿದ್ದ ಟಿಎಂಸಿ ಮುಖಂಡ ಡೆರೆಕ್ ಓಬ್ರಿಯಾನ್, ಚಕ್‌ದೇ ಇಂಡಿಯಾ ಎಂದು ತಿಳಿಸಿದ್ದರು.

ಸಭೆಯ ಬಳಿಕ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿಯವರು, ‘ಭಾರತ ಒಂದಾಗಲಿದೆ, INDIA ಗೆಲ್ಲಲಿದೆ’ ಎಂದಿದ್ದರು.

“ಭಾರತದ ಸಂವಿಧಾನದ 1 ನೇ ವಿಧಿ, ಅಂದರೆ ಭಾರತ. ಇದು ರಾಜ್ಯಗಳ ಒಕ್ಕೂಟ. ಇಂದು ಬೆಂಗಳೂರಿನಲ್ಲಿ 26 ರಾಜಕೀಯ ಪಕ್ಷಗಳು ಘೋಷಿಸಿದ ಭಾರತ ರಾಷ್ಟ್ರೀಯ ಅಭಿವೃದ್ಧಿಶೀಲ ಸರ್ವಸಮ್ಮಿಳಿತ ಒಕ್ಕೂಟದ ಹಿಂದಿನ ಸ್ಫೂರ್ತಿ ಇದು” ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಹೊಸ ಹೆಸರನ್ನು ಸೂಚಿಸಿದವರು ಯಾರು ಎಂಬ ಬಗ್ಗೆ ಪ್ರಶ್ನಿಸಿ, ಹಲವರು ಕುತೂಹಲ ವ್ಯಕ್ತಪಡಿಸಿದ್ದಾರೆ.

‘ಹೊಸ ಹೆಸರಿಗೆ ಅಂತಿಮವಾಗಿ ಸಂಕ್ಷಿಪ್ತ ರೂಪ ನೀಡಿದವರು ರಾಹುಲ್ ಗಾಂಧಿ’ ಎಂದು ಟ್ವೀಟ್ ಮಾಡಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಜಿತೇಂದ್ರ ಅಹ್ವಾದ್, “ಅವರ ಸೃಜನಶೀಲತೆಯನ್ನು ಪ್ರಶಂಸಿಸುತ್ತೇವೆ” ಎಂದಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ದೆಹಲಿಯಲ್ಲಿ ಸಭೆ ನಡೆಸುತ್ತಿದೆ. ವಿಪಕ್ಷಗಳ ಒಗ್ಗೂಡುವಿಕೆಯು ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರಿಗೆ ನಡುಕ ಹುಟ್ಟಿಸಿದೆ. ಹಾಗಾಗಿ, ಇಷ್ಟರವರೆಗೆ ಮರೆತು ಹೋಗಿದ್ದ ಸ್ನೇಹಿತರನ್ನು ಮತ್ತೆ ಒಂದುಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹಲವು ವಿಪಕ್ಷಗಳ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X