ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ : ತುಮಕೂರು ಜಿಲ್ಲೆಯಲ್ಲಿ ಶೇ.71.56 ಮತದಾನ

Date:

 ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಶೇ.71.56ರಷ್ಟು ಮತದಾನವಾಗಿದೆ. ಜಿಲ್ಲೆಯ 50,060 ಅರ್ಹ ಮತದಾರರ ಪೈಕಿ 35,825 ಮಂದಿ ಮತ ಚಲಾಯಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.

- Advertisement -

ಮತ ಚಲಾಯಿಸಿದವರಲ್ಲಿ 21,226 ಪುರುಷರು ಹಾಗೂ 14,599 ಮಹಿಳೆಯರು ಸೇರಿದ್ದಾರೆ. ಜಿಲ್ಲೆಯ 11 ತಾಲ್ಲೂಕುಗಳ ವ್ಯಾಪ್ತಿಯಲ್ಲಿ 57 ಮುಖ್ಯ ಹಾಗೂ 23 ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 80 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಶುಕ್ರವಾರ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತುಮಕೂರು ನಗರದಲ್ಲಿ 7,075 ಮಂದಿ ಮತ ಚಲಾಯಿಸಿದ್ದು, ಜಿಲ್ಲೆಯ ತಾಲ್ಲೂಕುಗಳ ಪೈಕಿ ಅತಿ ಹೆಚ್ಚು ಮತದಾರರು ಇಲ್ಲಿ ಹಕ್ಕು ಚಲಾಯಿಸಿದ್ದಾರೆ. ಶಿರಾದಲ್ಲಿ 3,971, ಪಾವಗಡದಲ್ಲಿ 3,460, ತುಮಕೂರು ಗ್ರಾಮಾಂತರದಲ್ಲಿ 3,568, ಮಧುಗಿರಿಯಲ್ಲಿ 3,129, ತಿಪಟೂರಿನಲ್ಲಿ 3,065, ಗುಬ್ಬಿಯಲ್ಲಿ 3,029, ಚಿಕ್ಕನಾಯಕನಹಳ್ಳಿಯಲ್ಲಿ 2,297, ಕೊರಟಗೆರೆಯಲ್ಲಿ 2,151, ತುರುವೇಕೆರೆಯಲ್ಲಿ 2,063 ಹಾಗೂ ಕುಣಿಗಲ್‌ನಲ್ಲಿ 2,017 ಮಂದಿ ಮತ ಚಲಾಯಿಸಿದ್ದಾರೆ.

ಚುನಾವಣೆಯಲ್ಲಿ ಕಾಂಗ್ರೆಸ್‌ನ ಶಶಿ ಹುಲಿಕುಂಟೆಮಠ್, ಬಿಜೆಪಿಯ ಕೆ.ಎಂ. ಸುರೇಶ (ಸೋಮೇಶ್ವರ), ಸರ್ವ ಜನತಾ ಪಕ್ಷದ ಜಿ.ಸಿ. ಪಟೇಲ್ ಸೇರಿದಂತೆ ಒಟ್ಟು 10 ಅಭ್ಯರ್ಥಿಗಳು ಕಣದಲ್ಲಿದ್ದರು.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗಾಗಿ ಎಲ್ಲ ಮತಗಟ್ಟೆಗಳಲ್ಲಿ ವೆಬ್‌ಕ್ಯಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಚುನಾವಣಾ ಕರ್ತವ್ಯಕ್ಕೆ 400 ಸಿಬ್ಬಂದಿ ಹಾಗೂ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಎಲ್ಲ ತಾಲ್ಲೂಕುಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್ (ಎಫ್‌ಎಸ್‌ಟಿ) ಮತ್ತು ಸೆಕ್ಟರ್ ಅಧಿಕಾರಿಗಳ ತಂಡಗಳನ್ನು ನೇಮಿಸಲಾಗಿತ್ತು.

ಚುನಾವಣೆಯ ಮತ ಎಣಿಕೆಯು ಅಕ್ಟೋಬರ್ 27ರಂದು ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೀದಿಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ಚಿಕ್ಕನಾಯಕನಹಳ್ಳಿ | ಬೀಡಿ ವಿಚಾರಕ್ಕೆ ಗಲಾಟೆ, ಕೊಲೆಯಲ್ಲಿ ಅಂತ್ಯ: ಆರೋಪಿ ಬಂಧನ

ಚಿಕ್ಕನಾಯಕನಹಳ್ಳಿ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಅಕ್ಟೋಬರ್ 13ರಂದು ನಡೆದಿದ್ದ...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...