ಹರ್ಯಾಣ ಗಲಭೆ | ಸುಳ್ಳು ಸುದ್ದಿ ಹರಡಿದ ಸುದರ್ಶನ್ ಟಿವಿಯ ಸುದ್ದಿ ಸಂಪಾದಕ ಬಂಧನ; ಬಿಡುಗಡೆ

Date:

  • ಸುದರ್ಶನ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್ ಬಂಧನ, ಬಿಡುಗಡೆ
    • ಹಿಂದೂಗಳನ್ನು ಬಂಧಿಸಲು ಪೊಲೀಸರ ಮೇಲೆ ಅಲ್ ಜಝೀರಾ ವಾಹಿನಿ ಒತ್ತಡ ಹಾಕಿದ್ದರು’ ಎಂದು ಟ್ವೀಟ್

ಹರ್ಯಾಣದ ನೂಹ್‌ನಲ್ಲಿ ಸಂಭವಿಸಿದ ಕೋಮು ಗಲಭೆಯ ವೇಳೆ ಪೊಲೀಸರ ವಿರುದ್ಧವೇ ಸುಳ್ಳು ಸುದ್ದಿ ಹರಡಿದ್ದ ಆರೋಪದ ಮೇಲೆ ಸುದರ್ಶನ್ ಟಿವಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್‌ನನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆಗೊಳಿಸಲಾಗಿದೆ.

- Advertisement -

ಬಲಪಂಥೀಯ ವಿಚಾರಧಾರೆ ಹರಡುವ ಸುದ್ದಿವಾಹಿನಿಯಾಗಿ ಸುದರ್ಶನ ಟಿವಿ ಗುರುತಿಸಿಕೊಂಡಿದೆ. ನೂಹ್ ಗಲಭೆಯ ವೇಳೆ ಟ್ವೀಟ್ ಮಾಡಿದ್ದ ವಾಹಿನಿಯ ಸುದ್ದಿ ಸಂಪಾದಕ ಮುಖೇಶ್ ಕುಮಾರ್‌, ‘ಅಲ್ ಜಝೀರಾ ಸುದ್ದಿ ವಾಹಿನಿಯು ಹರ್ಯಾಣ ಜಿಲ್ಲಾಧಿಕಾರಿಯ ಮೇಲೆ ಒತ್ತಡ ಹಾಕುತ್ತಿದೆ. ಅಲ್ಲದೇ, ಈ ಒತ್ತಡಕ್ಕೆ ಮಣಿದು ಗುರುಗ್ರಾಮ್ ಪೊಲೀಸರು ಹಿಂದೂ ಕಾರ್ಯಕರ್ತರನ್ನು ಬಂಧಿಸುತ್ತಿದ್ದಾರೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈ ಹಿನ್ನೆಲೆಯಲ್ಲಿ ಪೊಲೀಸ್ ಮತ್ತು ಜಿಲ್ಲಾಡಳಿತದ ಮೇಲೆಯೇ ಆರೋಪ ಹೊರಿಸಿ, ಸುಳ್ಳು ಸುದ್ದಿ ಹರಡಿದ್ದಕ್ಕೆ ಮುಖೇಶ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದರು.

“ಗಲಭೆ ಹೆಚ್ಚಿಸುವ ಉದ್ದೇಶದಿಂದ ಆಧಾರರಹಿತ, ಸುಳ್ಳು ಮತ್ತು ತಪ್ಪುದಾರಿಗೆಳೆಯುವ ಮಾಹಿತಿ ಹಾಕಿದ್ದಕ್ಕೆ ಮುಖೇಶ್ ವಿರುದ್ಧ ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು. ಆ ಬಳಿಕ ಬಂಧಿಸಲಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಗುರುಗ್ರಾಮ್ ಪೊಲೀಸರು ಸ್ಪಷ್ಟಪಡಿಸಿದ್ದರು.

ಈ ನಡುವೆ ಸುದರ್ಶನ ನ್ಯೂಸ್‌ನ ಪ್ರಧಾನ ಸಂಪಾದಕ ಸುರೇಶ್ ಚವ್ಹಾಂಕೆ, ಟ್ವಿಟರ್‌ನಲ್ಲಿ ಸುದೀರ್ಘ ಪೋಸ್ಟ್‌ ಹಾಕಿ, ಮುಖೇಶ್ ಕುಮಾರ್ ಬಂಧನವನ್ನು ಪ್ರಶ್ನಿಸಿದ್ದರು. ಅಲ್ಲದೇ, ಮುಖೇಶ್ ಕುಮಾರ್ ಅವರನ್ನು ಬಿಡುಗಡೆ ಮಾಡದಿದ್ದರೆ ಶನಿವಾರ ‘ದೊಡ್ಡ ಘೋಷಣೆ’ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಜೊತೆಗೆ, ‘ನಮ್ಮೊಂದಿಗೆ ಯಾವ ಹಿಂದೂ ಪುರುಷರು ಇದ್ದಾರೆ ಎಂದು ನೋಡೋಣ’ ಎಂದು ಬರೆದಿದ್ದರು.

ಈ ಎಲ್ಲ ಬೆಳವಣಿಗೆಗಳ ನಡುವೆ ಅವರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ ಎಂದು ಸುರೇಶ್ ಚವ್ಹಾಂಕೆ ಅವರೇ ಟ್ವೀಟ್ ಮಾಡಿ, ಮಾಹಿತಿ ಪ್ರಕಟಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಧಿಕೃತವಾಗಿ ಪ್ರಕಟಿಸಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...

ಚಿಕ್ಕಮಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕಬ್ಬಳ್ಳಿ ಗೇಟ್‌ ಬಳಿ ಸಖರಾಯಪಟ್ಟಣ-ಬಾಣಾವರ ಸಂಪರ್ಕ...

ಉಡುಪಿಯಲ್ಲಿ ಆನಂದ್ ಡೆಂಟಲ್‌ ಆ್ಯಂಡ್‌ ಆರ್ಥೋಅಲೈನರ್ಸ್‌ ನೂತನ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‌

ಕಳೆದ 18 ವರ್ಷಗಳಿಂದ ದಂತ ಆರೈಕೆ ಮತ್ತು ಚಿಕಿತ್ಸಾ ಕ್ಷೇತ್ರದಲ್ಲಿ ಗುಣಮಟ್ಟದ...

ಚಿಕ್ಕಮಗಳೂರು | ಮಾದರಿಯಾದ ಗೊಂಡೇದಹಳ್ಳಿ; ಸೌಹಾರ್ದ ಪರಂಪರೆ ಎತ್ತಿಡಿದ ಗ್ರಾಮ 

ಹಳ್ಳಿಯಿಂದ ದಿಲ್ಲಿಯವರೆಗೆ ಸೌಹಾರ್ದ ಪರಂಪರೆ, ವಿಶ್ವಾಸ, ಕಲೆ, ಸಾಹಿತ್ಯ, ಸಂಸ್ಕೃತಿ ನಾವು...