ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತಪತ್ರಗಳನ್ನು ತಿರುಚಿರುವುದರ ಬಗ್ಗೆ ಚುನಾವಣಾಧಿಕಾರಿ ಅನಿಲ್ ಮಾಸಿಹ್ ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಚಂಡೀಗಢ ಮೇಯರ್ ಚುನಾವಣೆಯ ಫಲಿತಾಂಶದ ಬಗ್ಗೆ ಹೊಸದಾಗಿ ಚುನಾವಣೆಗೆ ಆದೇಶಿಸುವ ಬದಲು ಪ್ರಸ್ತುತ ಬ್ಯಾಲೆಟ್ ಪೇಪರ್‌ಗಳ ಆಧಾರದ ಮೇಲೆ ಘೋಷಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದ್ದು, ಮತ ಪತ್ರಗಳನ್ನು ನಾಳೆ ಬೆಳಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.
#BREAKING #ChandigarhMayorElection : #SupremeCourt proposes that the results be declared by counting the present ballot papers, disregarding the marks made by Returning Officer, instead of a fresh election.
The court asks for the ballot papers to be produced tomorrow to… https://t.co/x3FkeeL7UI
— Live Law (@LiveLawIndia) February 19, 2024
ಇಂದು ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಚುನಾವಣಾಧಿಕಾರಿ ಅನಿಲ್ ಮಾಸೀಹ್ ಅವರಿಗೆ ನೋಟಿಸ್ ನೀಡಿತ್ತು. ನೋಟಿಸ್ ಹಿನ್ನೆಲೆಯಲ್ಲಿ ಹಾಜರಾಗಿದ್ದ ಅವರು, 8 ಬ್ಯಾಲೆಟ್ ಪೇಪರ್‌ಗಳ ಮೇಲೆ ಮಾರ್ಕ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
चंडीगढ़ मेयर इलेक्शन मामले की सुनवाई में भाग लेने रिटर्निग ऑफिसर अनिल मसीह सुप्रीम कोर्ट पहुंचे हैं।
मसीह पर गंभीर आरोप हैं। कोर्ट ने समन किया था।@news24tvchannel pic.twitter.com/hp8TFEarqr— Prabhakar Kr Mishra (@PMishra_Journo) February 19, 2024
ಈ ಹಿನ್ನೆಲೆಯಲ್ಲಿ ರಿಟರ್ನಿಂಗ್ ಅಧಿಕಾರಿ ಅನಿಲ್ ಮಾಸೀಹ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಮತ ಪತ್ರಗಳನ್ನು ನಾಳೆ ಬೆಳಿಗ್ಗೆ, 10.30 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು. ಮತಪತ್ರಗಳನ್ನು ನ್ಯಾಯಾಲಯಕ್ಕೆ ತರಲು ನ್ಯಾಯಾಂಗ ಅಧಿಕಾರಿಯನ್ನು ನಾಮನಿರ್ದೇಶನ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರನ್ನು ಕೇಳುವುದಾಗಿ ಹೇಳಿದೆ.
ಸುಪ್ರೀಂ ಕೋರ್ಟ್‌ನಲ್ಲಿ ಚಂಡೀಗಢ ಮೇಯರ್ ಚುನಾವಣೆಯ ಅಕ್ರಮದ ವಿಚಾರಣೆ ನಡೆಯುತ್ತಿರುವಾಗಲೇ ಕುದುರೆ ವ್ಯಾಪಾರ ನಡೆಯುತ್ತಿದೆ. ಎಎಪಿಯ ಮೂವರು ಕೌನ್ಸಿಲರ್‌ಗಳಾದ ನೇಹಾ, ಪೂನಂ ಹಾಗೂ ಗುರುಚರಣ್ ಕಾಲಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಹೊಸದಾಗಿ ಚುನಾವಣೆಯ ನಡೆಸುವ ಬದಲು, ಮರು ಮತಎಣಿಕೆ ಮಾಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದ ಅನಿಲ್ ಮಾಸಿಹ್ ಅವರು ಮಾಡಿರುವ ಗುರುತುಗಳನ್ನು ಕಡೆಗಣಿಸಿ ಈಗಾಗಲೇ ಚಲಾವಣೆಯಾದ ಮತಗಳನ್ನು ಎಣಿಕೆ ಮಾಡುವಂತೆ ನಿರ್ದೇಶಿಸುವುದಾಗಿ ನ್ಯಾಯಾಲಯ ಹೇಳಿದೆ.
BIG BREAKING 🚨
The Supreme Court has given belt treatment to Chandigarh returning officer right now.
Anil Masih has accepted that he put the cross marks on 8 ballot votes of AAP & Congress.
Now, BJP has a lot to answer. This is thd question to save the democracy.
“It is very… pic.twitter.com/ViK7jxRVGy
— Amock (@Politics_2022_) February 19, 2024
ಚುನಾವಣಾ ಅಧಿಕಾರಿಯಾಗಿ ನಾಮನಿರ್ದೇಶನ ಮಾಡಲು ಚಂಡೀಗಢ ಆಡಳಿತದ ಡೆಪ್ಯುಟಿ ಕಮಿಷನರ್ ಅವರನ್ನು ಕೇಳುವುದಾಗಿ ನ್ಯಾಯಾಲಯ ತಿಳಿಸಿದ್ದು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಿಂದ ನಾಮ ನಿರ್ದೇಶನಗೊಂಡ ನ್ಯಾಯಾಂಗ ಅಧಿಕಾರಿಯಿಂದ ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ನ್ಯಾಯಾಲಯದ ಮೇಲ್ವಿಚಾರಣೆ ಮೂಲಕ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.