ಬ್ರೇಕಿಂಗ್ ನ್ಯೂಸ್ | ಕ್ರಾಂತಿಕಾರಿ ಗಾಯಕ ‘ಗದ್ದರ್’ ಇನ್ನಿಲ್ಲ

Date:

ತೆಲುಗಿನ ಖ್ಯಾತ ಕ್ರಾಂತಿಕಾರಿ ಗಾಯಕ, ‘ಗದ್ದರ್’ ಎಂದೇ ಪ್ರಸಿದ್ಧರಾದ ಗುಮ್ಮಡಿ ವಿಠ್ಠಲ್ ರಾವ್ ಇಂದು ನಿಧನರಾಗಿದ್ದಾರೆ.

- Advertisement -

ಕೆಲವು ಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಗದ್ದರ್, ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಮೊನ್ನೆಯಷ್ಟೇ ಬೈಪಾಸ್ ಸರ್ಜರಿ ಮಾಡಲಾಗಿತ್ತು. ಅದರಿಂದ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿದ್ದಾಗಲೇ ಇತರೆ ಕಾಯಿಲೆಗಳು ಉಲ್ಭಣಗೊಂಡಿವೆ. ತಮ್ಮ ಹಾಡುಗಳ ಮೂಲಕ ಲಕ್ಷಾಂತರ ಜನರ ಹೃದಯ ಗೆದ್ದಿದ್ದ ಗದ್ದರ್ ಕೊನೆಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗದ್ದರ್ ಅವರ ನಿಜವಾದ ಹೆಸರು ಗುಮ್ಮಡಿ ವಿಠ್ಠಲ್ ರಾವ್. ಪಂಜಾಬ್‌ನಲ್ಲಿ ಬ್ರಿಟೀಷ್ ಅಧಿಪತ್ಯವನ್ನು ವಿರೋಧಿಸಿದ್ದ ಗದಾರ್ ಪಕ್ಷದ ಹಿನ್ನೆಲೆಯಲ್ಲಿ ತಮ್ಮ ಹೆಸರನ್ನು ಗದ್ದರ್ ಎಂದು ಮರುನಾಮಕರಣ ಮಾಡಿಕೊಂಡಿದ್ದರು.

1949ರಲ್ಲಿ ತೆಲಂಗಾಣದ ತೂಪ್ರಾನ್‌ನಲ್ಲಿ ಹುಟ್ಟಿದ್ದ ಗದ್ದರ್, ನಿಜಾಮಾಬಾದ್‌, ಹೈದರಾಬಾದ್‌ಗಳಲ್ಲಿ ವಿದ್ಯಾಭ್ಯಾಸ ಮಾಡಿದ್ದರು. 1975ರಲ್ಲಿ ಕೆನರಾ ಬ್ಯಾಂಕ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ, ಶೋಷಣೆ, ಅನ್ಯಾಯಗಳ ವಿರುದ್ಧ ಸಿಡಿದೆದ್ದು, ನಕ್ಸಲ್‌ ಚಳವಳಿಯತ್ತ ಆಕರ್ಷಿತರಾದರು. ಜನನಾಟ್ಯ ಮಂಡಳಿಯ ಮೂಲಕ ಅವಿಭಜಿತ ಆಂಧ್ರಪ್ರದೇಶದಲ್ಲಿ ಊರೂರು ತಿರುಗುತ್ತ ಜನರನ್ನು ಸಂಘಟಿಸತೊಡಗಿದರು. ಸ್ಥಳದಲ್ಲೇ ಹಾಡು ಕಟ್ಟಿ ಹಾಡುತ್ತಿದ್ದ ಗದ್ದರ್ ಅವರ ಹಾಡುಗಳು ತೆಲುಗು ಜನ ಸಮುದಾಯದ ನಡುವೆ ತುಂಬಾ ಜನಪ್ರಿಯವಾಗಿದ್ದವು.

ಗದ್ದರ್ ಹಾಡಲು ಶುರುವಿಟ್ಟರೆ ನೆರೆದವರಲ್ಲಿ ಶೋಷಣೆಯ ವಿರುದ್ಧ ಸಿಟ್ಟು ಸ್ಫೋಟಗೊಳ್ಳುತ್ತಿತ್ತು. ಇದೇ ಕಾರಣಕ್ಕೆ ಗದ್ದರ್ ಪೊಲೀಸರ ಟಾರ್ಗೆಟ್ ಆದರು. ಹಲವು ಬಾರಿ ಪೊಲೀಸರ ದಾಳಿಯಿಂದ ಗದ್ದರ್ ಸ್ವಲ್ಪದರಲ್ಲಿ ಪಾರಾಗಿದ್ದರು. ಪೊಲೀಸರು ಹಾರಿಸಿದ ಗುಂಡೊಂದು ಅವರ ದೇಹದಲ್ಲಿ ಹಾಗೆಯೇ ಉಳಿದುಬಿಟ್ಟಿತ್ತು. ನಂತರ ಗದ್ದರ್, ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದಲ್ಲಿ ತಮ್ಮನ್ನು ಗುರುತಿಸಿಕೊಂಡರು. ತೆಲಂಗಾಣ ಪ್ರತ್ಯೇಕ ರಾಜ್ಯವಾಗಿ ಘೋಷಣೆಯಾದಾಗ ವಿಪರೀತ ಖುಷಿ ಪಟ್ಟರು.

ಗದ್ದರ್ ಹಾಡುಗಳಿಗೆ ತೆಲಂಗಾಣ, ಆಂಧ್ರಪ್ರದೇಶಗಳ ಆಚೆಗೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕರ್ನಾಟಕದ ಹಲವು ಚಳವಳಿ, ಆಂದೋಲನಗಳಲ್ಲಿ ಗದ್ದರ್ ಭಾಗವಹಿಸಿದ್ದರು. ಎಲ್ಲೇ ಶೋಷಣೆ ನಡೆದರೂ ಅಲ್ಲಿ ಹಾಜರಿರುತ್ತಿದ್ದ ಗದ್ದರ್, ಕರ್ನಾಟಕದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡು ಹಾಡು ಹಾಡಿದ್ದಾರೆ.

ಗದ್ದರ್ ಅವರ ಪಾರ್ಥಿವ ಶರೀರದ ದರ್ಶನ ಪಡೆಯಲು ಸಿಕಂದರಾಬಾದ್‌ನ ಭೂದೇವಿನಗರದ ಅವರ ಮನೆ ಮುಂದೆ ದೊಡ್ಡ ಪ್ರಮಾಣದ ಅಭಿಮಾನಿಗಳು ನೆರೆಯುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸವಿತಾ ಸಮಾಜ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆಯ ಸವಿತಾ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿಗಳು ಮತ್ತು...

ಕೊಲ್ಹಾರ | ಮೂರು ದಶಕವಾದರೂ ಮುಳುಗಡೆ ಸಂತ್ರಸ್ತರಿಗೆ ಸಿಗದ ಹಕ್ಕುಪತ್ರ

1996ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ವಿಜಯಪುರ ಜಿಲ್ಲೆಯ ಕೊಲ್ಹಾರದ...

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...