ಕನ್ನಡಿಗರ ಹಿತರಕ್ಷಣೆಗೆ ಪೂರಕವಾದ ಅಂಶ ಚುನಾವಣಾ ಪ್ರಣಾಳಿಕೆಯಲ್ಲಿರಲಿ : ಕನ್ನಡಪರ ಸಂಘಟನೆ ಒತ್ತಾಯ

Date:

Advertisements
  • ಯಾವ ಪಕ್ಷವೂ ಕನ್ನಡಿಗರ ಸಮಸ್ಯೆಗಳಿಗೆ ಪರಿಹಾರ ನೀಡುವ ವಿಷಯ ಪ್ರಸ್ತಾಪಿಸುತ್ತಿಲ್ಲ
  • ಉದ್ಯೋಗದಲ್ಲಿ ಆದ್ಯತೆ ನೀಡುವ ನೀಡುವ ಮಹಿಷಿ ವರದಿಯ ಅನುಷ್ಠಾನವಾಗಲಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕನ್ನಡ, ಕನ್ನಡಿಗರ ಹಿತರಕ್ಷಣೆ, ಅಭಿವೃದ್ಧಿಗೆ ಪೂರಕವಾದ ಅಂಶಗಳು ಚುನಾವಣೆ ಪ್ರಣಾಳಿಕೆಯಲ್ಲಿ ಅಡಕವಾಗಿರಲಿ ಎಂದು ಕನ್ನಡಪರ ಸಂಘಟನೆ ಒತ್ತಾಯಿಸಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಸರ್ಕಾರ, ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ, ಜಾತಿಗೊಂದು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಲ್ಲಿ ನಿರತವಾಗಿದೆ ಎಂದು ದೂರಿದ್ದಾರೆ.

ಎಲ್ಲ ರಾಜಕೀಯ ಪಕ್ಷಗಳು ಹಲವು ಭಾಗ್ಯಗಳನ್ನು, ಉಚಿತ ಕೊಡುಗೆಗಳನ್ನು, ಸಾಲಮನ್ನಾ ಹೀಗೆ ಭರಪೂರ ಭರವಸೆಗಳನ್ನು ನೀಡುತ್ತಿವೆ. ಅವುಗಳ ಅನುಷ್ಠಾನದ ಬಗ್ಗೆ ಗ್ಯಾರಂಟಿ ಪತ್ರಗಳನ್ನೂ ವಿತರಿಸುತ್ತಿವೆ.

Advertisements

ಆದರೆ, ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯಾಗಲೀ, ಕರ್ನಾಟಕದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಯಾವ ವಿಚಾರವನ್ನೂ ಪ್ರಮುಖ ಮೂರೂ ರಾಜಕಿಯ ಪಕ್ಷಗಳು ಪ್ರಸ್ತಾಪ ಮಾಡುತ್ತಿಲ್ಲ. ಕನ್ನಡಗರಿಗೆ ಉದ್ಯೋಗದಲ್ಲಿ ಆದ್ಯತೆ ನೀಡುವ ಮಹಿಷಿ ವರದಿಯ ಅನುಷ್ಠಾನದ ಬಗ್ಗೆ ಮಾತನಾಡುತ್ತಿಲ್ಲ. ಕನ್ನಡವನ್ನು ಶಾಸ್ತ್ರೀಯ ಭಾಷೆಯಾಗಿ ಘೋಷಿಸಿ 16 ವರ್ಷಗಳಾದರೂ ಸಿಗಬೇಕಾದ ಸವಲತ್ತು ದೊರೆತಿಲ್ಲ ಎಂದು ಬೇಸರಿಸಿದ್ದಾರೆ.

ಸರ್ಕಾರಿ ಶಾಲೆಗಳನ್ನು ಉಳಿಸುವ ವಿಚಾರವಾಗಲಿ ಅಥವಾ ಇತರೆ ವಿಷಯವಾಗಲಿ ಯಾವ ಪಕ್ಷವೂ ಕನ್ನಡ ಸಮಸ್ಯಗಳಿಗೆ ಪರಿಹಾರ ನೀಡುವ ವಿಷಯ ಪ್ರಸ್ತಾಪಿಸುತ್ತಿಲ್ಲ. ಕನ್ನಡದ ಭವಿಷ್ಯದ ದೃಷ್ಟಿಯಿಂದ ಇದು ಆತಂಕದ ಆಘಾತಕಾರಿ ಬೆಳವಣಿಗೆ ಎಂದು ಚಂದ್ರಶೇಖರ ದೂರಿದ್ದಾರೆ.

ರಾಜಕೀಯ ಪಕ್ಷಗಳು ಕನ್ನಡದ ವಿಚಾರವು ಮತ ಗಳಿಸಿಕೊಡುವುದಿಲ್ಲ ಎಂದು ನಂಬಿರುವಂತಿದೆ. ರಾಜಕೀಯ ಪಕ್ಷಗಳು ಕನ್ನಡದ ಹಿತವನ್ನು ಕಡೆಗಣಿಸುತ್ತಿರುವದನ್ನು ಕನ್ನಡ ಗೆಳೆಯರ ಬಳಗ ಖಂಡಿಸಿದೆ.

ರಾಜಕೀಯ ಪಕ್ಷಗಳು ಕರ್ನಾಟಕದ ಜನಸಾಮಾನ್ಯರ ಆಶೋತ್ತರಗಳನ್ನು ಬಿಂಬಿಸುವ ಪ್ರಣಾಳಿಕೆಗೆ ಬದಲು ಪಕ್ಷವನ್ನು ಅಧಿಕಾರಕ್ಕೆ ತರಲು ಜನರನ್ನು ದಾರಿ ತಪ್ಪಿಸುವ ಹುಸಿ ಭರವಸೆಗಳನ್ನು ನೀಡುತ್ತಿದೆ. ಕನ್ನಡ ಸಂವರ್ಧನೆ ಕುರಿತು ಮೌನತಾಳಿರುವುದು ಸರಿಯಲ್ಲ ಎಂದು ಹೇಳಿದೆ.

ಕನ್ನಡನಾಡಿನ ಸರ್ವಾಂಗೀಣ ಪ್ರಗತಿಗೆ ಪೂರಕವಾದ, ಸಮಾಜದ ಎಲ್ಲರೂ ಸ್ವಾಭಿಮಾನದಿಂದ ಬದುಕಲು ಅವಕಾಶ ಕಲ್ಪಿಸುವ, 18 ವರ್ಷದವರೆಗಿನ ಎಲ್ಲ ಮಕ್ಕಳಿಗೆ ತಾರತಮ್ಯ ಇಲ್ಲದ ಉಚಿತ ಏಕರೂಪದ ಮಾತೃಭಾಷಾ ಮಾಧ್ಯಮದಲ್ಲಿ ಶಿಕ್ಷಣ, ಕನ್ನಡಿಗರಿಗೆ ಉದ್ಯೋಗಾವಕಾಶದಲ್ಲಿ ಮೀಸಲಾತಿ ಒದಗಿಸುವ ಮಹಿಷಿ ವರದಿಯ ಅನುಷ್ಠಾನ, ಕನ್ನಡ ಶಾಸ್ತ್ರೀಯ ಭಾಷೆಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸುವುದು, ಕನ್ನಡದ ಸರ್ವಾಂಗೀಣ ಬೆಳವಣಿಗೆಗೆ ಪೂರಕ ಯೋಜನೆಗಳು, ಒಟ್ಟಾರೆಯಾಗಿ ಕನ್ನಡ ಭಾಷೆ, ಸಮಸ್ತ ಕನ್ನಡಿಗರ ಹಿತಕ್ಕೆ ಒತ್ತು ನೀಡುವ ಅಂಶಗಳನ್ನು ಚುನಾವಣಾ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳುವಂತೆ ಕನ್ನಡ ಗೆಳೆಯರ ಬಳಗವು ರಾಜಕೀಯ ಪಕ್ಷಗಳನ್ನು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ ನೀಡಿಲ್ಲ, ಬದಲಿಗೆ ಸಂಪುಟದಿಂದ ಉಚ್ಚಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ...

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X