ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

Date:

Advertisements

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ಯನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್, ಕರಡು ಮತದಾರರ ಪಟ್ಟಿಯಿಂದ ಹೊರಗುಳಿದ ವ್ಯಕ್ತಿಗಳು ಮತದಾರರ ಪಟ್ಟಿಗೆ ಮರು ಸೇರ್ಪಡೆಗಾಗಿ ಆನ್‌ಲೈನ್ ವಿಧಾನದ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಗಳನ್ನು ಭೌತಿಕವಾಗಿ ಸಲ್ಲಿಸುವ ಅಗತ್ಯವಿಲ್ಲ. ಈ ಮೊದಲು ತಿಳಿಸಿದ 11 ದಾಖಲೆಗಳು ಅಥವಾ ಆಧಾರ್ ಕಾರ್ಡ್ ಅನ್ನು ದಾಖಲೆಯಾಗಿ ಸಲ್ಲಿಸಬಹುದು ಎಂದು ಹೇಳಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸದನದ ಘನತೆಯನ್ನು ಮಣ್ಣುಪಾಲು ಮಾಡಿದ ಮಹನೀಯರು

Advertisements

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಗಾಗಿ ಮತದಾರರಿಗೆ 11 ದಾಖಲೆಗಳು ಸಲ್ಲಿಕೆಗೆ ಅವಕಾಶವಿದೆ. ಮತದಾರರು ಪಟ್ಟಿಯಲ್ಲಿರುವ 11 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಸಲ್ಲಿಸಬೇಕಾಗುತ್ತದೆ. ಇದೀಗ ದಾಖಲೆಗಳ ಪಟ್ಟಿ ಆಧಾರ್ ಕಾರ್ಡ್‌ನ್ನು ಸೇರಿಸಿಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X