ತುಮಕೂರು | ಮಳೆ ಹಾನಿ ಪರಿಹಾರ : ತಕ್ಷಣ ಕ್ರಮಕ್ಕೆ ಡಿಸಿ ಸೂಚನೆ

Date:

Advertisements

ತುಮಕೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು.

  ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ 10ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

Advertisements

ಜಿಲ್ಲೆಯ 330 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ ಮಾಡಬೇಕೆಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ನೀರಿನ ಗುಣಮಟ್ಟದಲ್ಲಿ ನಿರಂತರ ನಿಗಾವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಬೆಂಗಳೂರು ನಗರದಲ್ಲಿ ಇತ್ತೀಚಿಗೆ 53 ಕೋವಿಡ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಅಧಿಕಾರಿಗಳು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಬೆಂಗಳೂರಿಗೆ ಸುಮಾರು 70 ಕಿಲೋಮೀಟರ್ ದೂರದಲ್ಲಿರುವ ತುಮಕೂರು ಜಿಲ್ಲೆಯಿಂದ ದಿನವೂ ಅನೇಕ ಮಂದಿ ಉದ್ಯೋಗ, ವ್ಯವಹಾರ ಹಾಗೂ ಇತರ ಕಾರಣಗಳಿಗಾಗಿ ಬೆಂಗಳೂರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಹಶೀಲ್ದಾರರು ಕೋವಿಡ್ ನಿಯಂತ್ರಣದ ಮೇಲೆ ಹೆಚ್ಚು ಗಮನಹರಿಸಬೇಕೆಂದು ಸೂಚನೆ ನೀಡಿದರು. 

  ಗ್ರಾಮಾಂತರ ಮಟ್ಟದಲ್ಲಿಯೂ ಎಚ್ಚರಿಕಾ ಕ್ರಮವಾಗಿ ಗ್ರಾಮ ಪಂಚಾಯತಿಯಲ್ಲಿ ರಚಿಸಲಾಗಿರುವ ಕೋವಿಡ್ ಕಾರ್ಯಪಡೆಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಹಳ್ಳಿಗಳಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಪೈಪ್‌ಲೈನ್‌ಗಳ ಅಳವಡಿಕೆ ಸಂದರ್ಭದಲ್ಲಿ ಕಲುಷಿತ ನೀರು ಮಿಶ್ರಣವಾಗರ್ದಂತೆ ಹೆಚ್ಚಿನ ಗಮನ ಹರಿಸಬೇಕು. ಚರಂಡಿಗಳಲ್ಲಿ ಮಳೆ ನೀರು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ಇದೇ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X