ತುಮಕೂರು | 2047ರ ಭಾರತ ನಿರ್ಮಾಣಕ್ಕೆ ಯುವಶಕ್ತಿಯೇ ಬುನಾದಿ : ಪ್ರೊ. ಪರಶುರಾಮ ಕೆ.ಜಿ

Date:

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಮಹತ್ವದ ಗುರಿ ಸಾಕಾರಗೊಳ್ಳುವಲ್ಲಿ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರು ಕೇವಲ ಉದ್ಯೋಗಾಕಾಂಕ್ಷಿಗಳಾಗದೆ, ಹೊಸ ಆಲೋಚನೆ, ಸೃಜನಶೀಲತೆ ಮತ್ತು ನಾಯಕತ್ವದ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿಯುತ ನಾಯಕರಾಗಿ ರೂಪುಗೊಳ್ಳಬೇಕು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕಲಾ ನಿಕಾಯದ ಡೀನ್ ಪ್ರೊ. ಪರಶುರಾಮ ಕೆ.ಜಿ. ಹೇಳಿದರು.

- Advertisement -

ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ ಹಾಗೂ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ವಿಕಸಿತ್ ಭಾರತ್ ಯಂಗ್ ಲೀಡರ್ಸ್ ಡೈಲಾಗ್–2027’ರ ಪವರ್ ಪಾಯಿಂಟ್ ಪ್ರೆಸೆಂಟೇಷನ್ (PPT) ಜಿಲ್ಲಾ ಮಟ್ಟದ ಚಾಂಪಿಯನ್‌ಶಿಪ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಯುವಜನರಲ್ಲಿ ಇಂದಿನ ಸಾಮಾಜಿಕ, ಆರ್ಥಿಕ ಹಾಗೂ ಅಭಿವೃದ್ಧಿ ಸಂಬಂಧಿತ ಸಮಸ್ಯೆಗಳನ್ನು ವಿಶ್ಲೇಷಿಸುವ ಸಾಮರ್ಥ್ಯ ಬೆಳೆಸುವುದು ಮತ್ತು ನವೀನ ಚಿಂತನೆಗೆ ಪ್ರೋತ್ಸಾಹ ನೀಡುವುದು ಇಂತಹ ಸ್ಪರ್ಧೆಗಳ ಪ್ರಮುಖ ಉದ್ದೇಶವಾಗಿದೆ. ಯುವಕರು ತಮ್ಮ ಪ್ರತಿಭೆ ಮತ್ತು ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸುವುದರ ಜೊತೆಗೆ ದೇಶದ ಭವಿಷ್ಯದ ಕುರಿತು ಸ್ಪಷ್ಟ ದೃಷ್ಟಿಕೋನ ಹೊಂದಬೇಕು ಎಂದರು.

ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಸಂಶೋಧನಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಪ್ರೊ. ಬಸವರಾಜ ಜಿ. ಮಾತನಾಡಿ, ವಿಕಸಿತ ಭಾರತ ಪರಿಕಲ್ಪನೆಯು ಕೇವಲ ಆರ್ಥಿಕ ಬೆಳವಣಿಗೆಗೆ ಸೀಮಿತವಾಗಿಲ್ಲ. ಶಿಕ್ಷಣ, ಆರೋಗ್ಯ, ತಂತ್ರಜ್ಞಾನ, ಕೃಷಿ, ಉದ್ಯೋಗ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಸಮಾನತೆ ಸೇರಿದಂತೆ ಎಲ್ಲ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಒಳಗೊಂಡಿದೆ. ಈ ಗುರಿ ಸಾಧನೆಗೆ ಯುವಜನರ ಚಿಂತನೆ, ಸಂಶೋಧನೆ ಮತ್ತು ಕ್ರಿಯಾಶೀಲ ಪಾಲ್ಗೊಳ್ಳುವಿಕೆ ಅತ್ಯಗತ್ಯ ಎಂದು ತಿಳಿಸಿದರು.

ಯುವಕರು ತಮ್ಮ ವಿಚಾರಗಳನ್ನು ಏಕಮುಖವಾಗಿ ಮಂಡಿಸುವುದಕ್ಕೆ ಸೀಮಿತವಾಗದೆ, ಸಂವಾದದ ಮೂಲಕ ಪರಸ್ಪರ ವಿಚಾರ ವಿನಿಮಯ ಮಾಡಿಕೊಳ್ಳಬೇಕು. ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ತಮ್ಮ ಆಲೋಚನೆ, ಪ್ರತಿಭೆ ಹಾಗೂ ನಾಯಕತ್ವದ ಗುಣಗಳನ್ನು ಸಮರ್ಥವಾಗಿ ಬಳಸಿಕೊಂಡು ಸದೃಢ ಮತ್ತು ಸ್ವಾವಲಂಬಿ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು. ದೇಶದ ಅಭಿವೃದ್ಧಿಯ ಕುರಿತು ಮಾತನಾಡುವುದಷ್ಟೇ ಅಲ್ಲದೆ, ಅದರ ಭಾಗವಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯನ್ನು ಯುವಜನರು ಅರಿತುಕೊಳ್ಳಬೇಕು ಎಂದು ಹೇಳಿದರು.

ತುಮಕೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಪ್ರೊ. ನಾಗಭೂಷಣ ಬಗ್ಗನಡು ಸ್ವಾಗತಿಸಿದರು. ಅನಿತಾ ವಂದಿಸಿದರು. ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಸುದೀಪ್ ಕುಮಾರ್ ಆರ್. ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಗುಬ್ಬಿ | ರಸ್ತೆ ವಿವಾದಕ್ಕೆ ವಿದ್ಯಾರ್ಥಿನಿಯ ಶಿಕ್ಷಣ ಬಲಿ?

ತೋಟದ ಸಾಲಿನಲ್ಲಿನ ರಸ್ತೆಗೆ ಓಡಾಡದಂತೆ ನಿರ್ಬಂಧ ಹೇರಿ ಒಂದು ಕುಟುಂಬಕ್ಕೆ ದಿಗ್ಬಂಧನ...