ಮೈಸೂರು ದಸರಾ ವೈಭವಕ್ಕೆ ತುಮಕೂರಿನ ಸಾಂಸ್ಕೃತಿಕ ಸ್ಪರ್ಶ

Date:

ನಾಡಿನ ಸುಭಿಕ್ಷ, ಜನರ ಶಾಂತಿ, ನೆಮ್ಮದಿ ಹಾಗೂ ಮಳೆ-ಬೆಳೆ ಸಮೃದ್ಧಿಗಾಗಿ ತಾಯಿ ಚಾಮುಂಡೇಶ್ವರಿಯನ್ನು ಆರಾಧಿಸುವುದು ದಸರಾ ಉತ್ಸವದ ಉದ್ದೇಶವಾಗಿದೆ. ಬರಗಾಲದ ನಡುವೆಯೂ ದೇವಿಯ ಆರಾಧನೆ ಮೂಲಕ ಉತ್ತಮ ಮಳೆ-ಬೆಳೆಯಾಗಲಿ, ನಾಡು ಸುಭಿಕ್ಷವಾಗಲಿ ಎಂದು ಪ್ರಾರ್ಥಿಸುವುದು ನಮ್ಮ ಹಿರಿಯರು ನಮಗೆ ಬಿಟ್ಟುಹೋಗಿರುವ ಪರಂಪರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದರು.

- Advertisement -

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿರುವ 11 ದಿನಗಳ ತುಮಕೂರು ದಸರಾ ಉತ್ಸವಕ್ಕೆ ಭಾನುವಾರ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕಳೆದ ಎರಡು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ತುಮಕೂರು ದಸರಾ ಉತ್ಸವ ಯಶಸ್ವಿಯಾಗಲು ಜಿಲ್ಲೆಯ ಜನತೆ, ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಸಹಕಾರವೇ ಕಾರಣ. ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉತ್ಸವದ ಸಿದ್ಧತೆಗಾಗಿ ಶ್ರಮಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

1004169882

ಟೀಕೆಗಳಿಗೆ ಕಿವಿಗೊಟ್ಟು ದಸರಾ ಮುಂದುವರಿಕೆ

ಬರಗಾಲದ ಸಂದರ್ಭದಲ್ಲಿ ದಸರಾ ಆಚರಣೆ ಏಕೆ ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ಆದರೆ, ನಾಡಿನಲ್ಲಿ ಉಂಟಾಗಿರುವ ಅನಾವೃಷ್ಟಿ ದೂರವಾಗಿ ಮಳೆ-ಬೆಳೆ ಪರಿಸ್ಥಿತಿ ಸುಧಾರಿಸಲಿ ಎಂಬ ಆಶಯದಿಂದಲೇ ನವರಾತ್ರಿಯಲ್ಲಿ ದೇವಿಯ ಆರಾಧನೆ ಮಾಡಲಾಗುತ್ತದೆ. ಹಿರಿಯರು ಬೆಳೆಸಿದ ಪರಂಪರೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳ ದಸರಾ ಆಚರಣೆ ಕುರಿತು ವ್ಯಕ್ತವಾದ ಟೀಕೆ-ಟಿಪ್ಪಣಿಗಳನ್ನು ಸ್ವೀಕರಿಸಿದ್ದು, ಲೋಪಗಳಿದ್ದರೆ ಅವುಗಳನ್ನು ಸರಿಪಡಿಸಿಕೊಂಡು ಉತ್ಸವವನ್ನು ಮುಂದುವರಿಸಲಾಗುತ್ತಿದೆ ಎಂದರು.

ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ಆರಂಭವಾದ ದಸರಾ ಆಚರಣೆ, ಸಾಮ್ರಾಜ್ಯದ ಪತನದ ನಂತರ ಮೈಸೂರು ಸಂಸ್ಥಾನದಲ್ಲಿ ಮುಂದುವರಿಯಿತು. ಅಧರ್ಮದ ವಿರುದ್ಧ ಧರ್ಮಕ್ಕೆ ಜಯ ಸಿಗಬೇಕು ಎಂಬ ಆಶಯದೊಂದಿಗೆ ಆರಂಭವಾದ ಮೈಸೂರು ದಸರಾ ಇಂದು ವಿಶ್ವಪ್ರಸಿದ್ಧವಾಗಿದೆ. ಮೈಸೂರು ದಸರಾ ಉತ್ಸವವನ್ನು ವೀಕ್ಷಿಸಲು ಸಾಧ್ಯವಾಗದವರು ತುಮಕೂರಿನಲ್ಲಿಯೇ ಅದರ ಸಂಭ್ರಮವನ್ನು ಕಣ್ತುಂಬಿಕೊಳ್ಳಲಿ ಎಂಬ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ದಸರಾ ಆಚರಣೆ ಆರಂಭಿಸಲಾಗಿದೆ ಎಂದು ವಿವರಿಸಿದರು.

ಯುವಜನರಿಗೆ ಜಿಲ್ಲೆಯ ಸಾಂಸ್ಕೃತಿಕ ಹಿರಿಮೆ ಪರಿಚಯವಾಗಲಿ

ಸಾಹಿತಿ ಬೆಳ್ಳಾವೆ ನರಹರಿಶಾಸ್ತ್ರಿ, ನಾಟಕರತ್ನ ಡಾ. ಗುಬ್ಬಿ ವೀರಣ್ಣ, ಅಮರಶಿಲ್ಪಿ ಜಕಣಾಚಾರಿ ಸೇರಿದಂತೆ ಅನೇಕ ಗಣ್ಯರು ತುಮಕೂರು ಜಿಲ್ಲೆಯ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಶ್ರೀಮಂತಗೊಳಿಸಿದ್ದಾರೆ. ಇಂದಿನ ಯುವಜನರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಅರಿತುಕೊಳ್ಳಬೇಕು ಎಂದು ಡಿಸಿಎಂ ಕರೆ ನೀಡಿದರು.

ಜಿಲ್ಲೆಯ ಮಕ್ಕಳ ಭವಿಷ್ಯ ಉತ್ತಮವಾಗಬೇಕು. ತುಮಕೂರನ್ನು ಕೈಗಾರಿಕಾ ಕ್ಷೇತ್ರದಲ್ಲಿ ಅಗ್ರಸ್ಥಾನಕ್ಕೆ ಕೊಂಡೊಯ್ಯುವ ಆಶಯ ಹೊಂದಿದ್ದೇವೆ ಎಂದು ತಿಳಿಸಿದ ಅವರು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮೀಜಿ ಧಾರ್ಮಿಕ ಮಹಾಮಂಟಪದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ದೇವಿಯ ಕೃಪೆಗೆ ಪಾತ್ರರಾಗುವಂತೆ ಜಿಲ್ಲೆಯ ಜನತೆಗೆ ಮನವಿ ಮಾಡಿದರು.

ಅಂತರಂಗದ ಶುದ್ಧಿಗೆ ಹಬ್ಬಗಳ ಆಚರಣೆ ಅಗತ್ಯ

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ಮಾತನಾಡಿ, ಮನುಷ್ಯನ ಅಂತರಂಗ ಮತ್ತು ಬಹಿರಂಗದ ಶುದ್ಧಿಗಾಗಿ ಇಂತಹ ಹಬ್ಬಗಳ ಆಚರಣೆ ಅತ್ಯವಶ್ಯಕ. ಶಕ್ತಿರೂಪಿಣಿ ಚಾಮುಂಡೇಶ್ವರಿಯ ಆಶೀರ್ವಾದ ಜಿಲ್ಲೆಯ ಜನತೆಗೆ ದೊರೆಯಲಿ ಎಂದು ಹಾರೈಸಿದರು.

ಎಲೆರಾಂಪುರದ ಶ್ರೀ ಕುಂಚಿಟಿಗರ ಮಹಾಸಂಸ್ಥಾನ ಮಠದ ಡಾ. ಹನುಮಂತನಾಥ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ತುಮಕೂರು ದಸರಾವನ್ನು ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡೆಗಳ ಸಮ್ಮಿಲನದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಮೈಸೂರು ದಸರಾ ಬಳಿಕ ತುಮಕೂರು ದಸರಾ ತನ್ನದೇ ಆದ ವೈಶಿಷ್ಟ್ಯದಿಂದ ಗಮನ ಸೆಳೆಯುತ್ತಿದೆ ಎಂದರು.

ಸಿದ್ದರಬೆಟ್ಟದ ಬಾಳೆಹೊನ್ನೂರು ಮಠದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದುಷ್ಟಶಕ್ತಿಗಳನ್ನು ಸಂಹರಿಸಿದ ಚಾಮುಂಡೇಶ್ವರಿಯ ಆರಾಧನೆಯ ಹಿಂದಿನ ಆಶಯ ನಮ್ಮೊಳಗಿನ ಕಾಮ, ಕ್ರೋಧ, ಮದ ಮತ್ತು ಮತ್ಸರದಂತಹ ದುರ್ಗುಣಗಳನ್ನು ತೊಡೆದುಹಾಕುವುದಾಗಿದೆ ಎಂದು ಹೇಳಿದರು.

ಬೆಳ್ಳಾವಿ ಶ್ರೀ ಕಾರದೇಶ್ವರ ಮಠದ ಶ್ರೀ ಕಾರದ ವೀರಬಸವ ಮಹಾಸ್ವಾಮೀಜಿ ಮಾತನಾಡಿ, ಬರಗಾಲದ ನಡುವೆಯೂ ದಸರಾ ಆಚರಿಸಿ, ನಾಡಿನ ಬರಪರಿಸ್ಥಿತಿ ದೂರವಾಗಲಿ ಎಂದು ದೇವಿಯಲ್ಲಿ ಪ್ರಾರ್ಥಿಸುವುದರಲ್ಲಿ ತಪ್ಪಿಲ್ಲ ಎಂದರು.

1004169881

ಧಾರ್ಮಿಕ ಮಂಟಪದಲ್ಲಿ ಅರಮನೆಯ ವೈಭವ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಚಾಮುಂಡೇಶ್ವರಿ ದೇವಿಯ ಪ್ರತಿಷ್ಠಾಪನೆಗಾಗಿ ನಿರ್ಮಿಸಿರುವ ಧಾರ್ಮಿಕ ಮಂಟಪವು ಅರಮನೆ ಪ್ರವೇಶಿಸಿದ ಅನುಭವ ನೀಡುತ್ತದೆ. ದೇವಿಯ ಅಲಂಕಾರ ಭಕ್ತಿಭಾವ ಮೂಡಿಸುವಂತಿದೆ. ದಸರಾ ಉತ್ಸವ ಧಾರ್ಮಿಕ ಭಾವನೆಗಳನ್ನು ಬೆಳೆಸುವುದರ ಜೊತೆಗೆ ಇಲ್ಲಿ ಆಯೋಜಿಸಿರುವ ವಸ್ತುಪ್ರದರ್ಶನ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆಗೂ ನೆರವಾಗಲಿದೆ ಎಂದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸ್ವಾಗತಿಸಿದರು. ರಾಣಿ ಸತೀಶ್ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕುಮಿರ್ಜಿ ವಂದಿಸಿದರು.

ಕಾರ್ಯಕ್ರಮದಲ್ಲಿ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ, ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಎ.ಎನ್. ನಟರಾಜ್ ಗೌಡ, ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಮಹೇಶ್, ಶಾಸಕ ಷಡಕ್ಷರಿ, ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಎಚ್.ವಿ. ವೆಂಕಟೇಶ್, ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಿ. ಚಂದ್ರಶೇಖರ್ ಗೌಡ, ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ, ಮಹಾನಗರ ಪಾಲಿಕೆ ಆಯುಕ್ತೆ ಶುಭ, ತಹಶೀಲ್ದಾರ್ ರಾಜೇಶ್ವರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಧಾರ್ಮಿಕ ವಿಧಿವಿಧಾನಗಳೊಂದಿಗೆ ಉತ್ಸವಕ್ಕೆ ಚಾಲನೆ

ದಸರಾ ಉತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಯ ಶೈಲಪುತ್ರಿ ಅಲಂಕಾರ ಭಕ್ತರ ಗಮನ ಸೆಳೆಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಮತ್ತು ಅವರ ಪತ್ನಿ ಕನ್ನಿಕಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಗಣಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಶ್ರೀ ದುರ್ಗಾ ಹೋಮ ಹಾಗೂ ಪೂರ್ಣಾಹುತಿಯಲ್ಲಿ ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.

ದಸರಾ ಉತ್ಸವದ ಧ್ವಜಾರೋಹಣಕ್ಕೂ ಮುನ್ನ ಹಸಿರು ಸೀರೆಯುಟ್ಟ ಮಹಿಳೆಯರು ಪೂರ್ಣಕುಂಭದೊಂದಿಗೆ ಉಪಮುಖ್ಯಮಂತ್ರಿ ದಂಪತಿ ಹಾಗೂ ಗಣ್ಯರನ್ನು ಸ್ವಾಗತಿಸಿದರು. ನಂದಿಧ್ವಜ ಪೂಜೆ ನೆರವೇರಿಸುವ ಮೂಲಕ ಧಾರ್ಮಿಕ ವಿಧಿವಿಧಾನಗಳಿಗೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಾಯಿತು.

ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ತುಮಕೂರು ದಸರಾ ಉತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ, ನಾಟಕ, ವಸ್ತುಪ್ರದರ್ಶನ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕನಾಯಕನಹಳ್ಳಿ | ಮನೆ ಕುಸಿಯುವ ಮುನ್ನ ತಹಸೀಲ್ದಾರ್ ನೆರವಿನ ಹಸ್ತ ಚಾಚಲಿ

ಒಂದು ಕಡೆ ತಂದೆಯನ್ನು ಕಳೆದುಕೊಂಡ ಅಪ್ರಾಪ್ತ ಮಗಳ ಭವಿಷ್ಯದ ಚಿಂತೆ… ಮತ್ತೊಂದೆಡೆ...

ಶಿರಾ | ಭದ್ರಾ ನೀರಿಗಾಗಿ ಬೃಹತ್ ಹೋರಾಟಕ್ಕೆ ಸಿದ್ಧತೆ: ರೈತರು ಒಗ್ಗಟ್ಟಾಗಲು ಕರೆ

ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ...

ತುಮಕೂರು | ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಜನಪ್ರತಿನಿಧಿಗಳ ಸಹಕಾರ ಅಗತ್ಯ : ಆರೋಗ್ಯ ಸಚಿವ ಯು.ಟಿ. ಖದರ್

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ.95ರಷ್ಟು ಅಗತ್ಯ ಸವಲತ್ತುಗಳು ಲಭ್ಯವಿದ್ದು, ಯಾವುದೇ ಕೊರತೆಗಳಿದ್ದರೆ...

ತುಮಕೂರು | ರೇಡಿಯೋದಿಂದ ಕ್ಯಾಮೆರಾವರೆಗೆ : ವಿದ್ಯಾರ್ಥಿಗಳ ಕೈಗೆ ಬಂದ ಮಾಧ್ಯಮದ ನೈಜ ಅನುಭವ

ಮೂರು ದಿನಗಳ ಮಾಧ್ಯಮ ಕಾರ್ಯಾಗಾರದಲ್ಲಿ ಸಂದರ್ಶನ, ರೇಡಿಯೋ ಕಾರ್ಯಕ್ರಮ ನಿರ್ಮಾಣ ಹಾಗೂ...