ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

Date:

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಎಂಟು ಮಂದಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಕುಷ್ಟಗಿ ತಾಲ್ಲೂಕಿನ ಕಟಾಪುರ ಗ್ರಾಮದ ಭರಮಪ್ಪ ಕಂಡೇಕರ್ ಮತ್ತು ಐಹೊಳೆ ಗ್ರಾಮದ ರಾಮವ್ವ ಹೋಳಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

- Advertisement -

ಗಾಯಗೊಂಡವರ ಪೈಕಿ ಕಟಾಪುರ ಗ್ರಾಮದ ಮುತ್ತಪ್ಪ ಕಂಡೇಕರ್, ಜ್ಯೋತಿ ಕಂಡೇಕರ್, ಐಹೊಳೆ ಗ್ರಾಮದ ಜ್ಯೋತಿ ಕುರಿ (32) ಹಾಗೂ ರೇಣವ್ವ ಸುಟ್ಟನ್ನವರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟಾಪುರ ಗ್ರಾಮದ ನಾಗವ್ವ ಕಂಡೇಕರ್ ಹಾಗೂ ಸಾವಂತ್ರವ್ವ ಕಂಡೇಕರ್ ಅವರು ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ವೈದ್ಯರಿಂದ ಗಾಯಾಳುಗಳ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿ ಪಡೆದ ಅವರು, ಚಿಕಿತ್ಸೆಯಲ್ಲಿ ಯಾವುದೇ ಕೊರತೆಯಾಗದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ನಿರ್ದೇಶನ ನೀಡಿದರು.

ಸಿಡಿಲು ಬಡಿದ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮೃತಪಟ್ಟವರ ಕುಟುಂಬಸ್ಥರು ಹಾಗೂ ಗಾಯಾಳುಗಳ ಕುಟುಂಬಸ್ಥರಿಗೆ ಅಧಿಕಾರಿಗಳು ಅಗತ್ಯ ನೆರವು ಒದಗಿಸುವ ಕ್ರಮ ಕೈಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತದಾರರ ಬೇಟೆ ಬಿಡಿ, ವಿಶೇಷವಾಗಿ ಬಿಜೆಪಿಗೆ ಹಣದ ಹೊಳೆ ಹೇಗೆ ಹರಿಯಿತೆಂದು ನೋಡುವ ಧೈರ್ಯ ಮಾಡಿ- ಗ್ಯಾನೇಶ್’ಗೆ ಲವಾಸ ಸವಾಲು

ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ಹೆಸರಿನಲ್ಲಿ ನೈಜ ಮತದಾರರನ್ನು ಬೇಟೆಯಾಡುವುದನ್ನು ಕೈಬಿಟ್ಟು, ರಾಜಕೀಯ...

ರಾಜ್ಯದ ರೈತರ ಸಾಲ ಮನ್ನಾ ಮಾಡಲು ಬಿಜೆಪಿ ಆಗ್ರಹ; ಎಷ್ಟಿದೆ ಸಾಲ?

ಕರ್ನಾಟಕದಲ್ಲಿ ತೀವ್ರ ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರ ₹5 ಲಕ್ಷದವರೆಗಿನ...

ಕೌಟುಂಬಿಕ ದ್ವೇಷಕ್ಕೆ ಪೋಕ್ಸೊ ಅಸ್ತ್ರವಲ್ಲ: ಸುಳ್ಳು ದೂರುಗಳ ತಡೆಗೆ ಸುಪ್ರೀಂ ದಿಟ್ಟ ಹೆಜ್ಜೆ

ವೈವಾಹಿಕ ವ್ಯಾಜ್ಯಗಳು ಮತ್ತು ಮಕ್ಕಳ ಕಸ್ಟಡಿ (ವಶ) ಪಡೆಯುವ ಕಾನೂನು ಹೋರಾಟಗಳಲ್ಲಿ...