ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

Date:

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶುಕ್ರವಾರ ಹುಟ್ಟೂರಿಗೆ ಆಗಮಿಸಿತು. ಬಳಿಕ ಕುಂದಾಪುರ ಶಾಸ್ತ್ರೀ ವೃತ್ತದ ಬಳಿಯ ಸಿ.ಎಸ್.ಐ. ಕೃಪಾ ಚರ್ಚ್‌ನ ಸಮಾಧಿ ಸ್ಥಳದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

- Advertisement -

ಶಾರ್ಜಾದಿಂದ ಪಾರ್ಥಿವ ಶರೀರ ಸೆ.24ರ ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿತು. ರಾತ್ರಿ ಸುಮಾರು 8.45ಕ್ಕೆ ಮಂಗಳೂರಿನಿಂದ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಹೊನ್ನನಕೇರಿಯಲ್ಲಿರುವ ಅಲ್ವಿನ್ ಅವರ ನಿವಾಸಕ್ಕೆ ತರಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಪಾರ್ಥಿವ ಶರೀರ ಮನೆಗೆ ಬರುತ್ತಿದ್ದಂತೆಯೇ ಮೃತರ ಹಿರಿಯ ಸಹೋದರಿ ಅನಿತಾ ಸೇರಿದಂತೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಹಿತೈಷಿಗಳ ಆಕ್ರಂದನ ಮುಗಿಲುಮುಟ್ಟಿತು. ಮಳೆಯ ನಡುವೆಯೂ ನೂರಾರು ಮಂದಿ ಆಗಮಿಸಿ ಅಲ್ವಿನ್ ಅವರಿಗೆ ಅಂತಿಮ ನಮನ ಸಲ್ಲಿಸಿದರು. ನಿವಾಸದಲ್ಲಿ ಹಲವು ಗಂಟೆಗಳ ಕಾಲ ಅಂತಿಮ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ಬಳಿಕ ಪಾರ್ಥಿವ ಶರೀರವನ್ನು ಚರ್ಚ್‌ಗೆ ಕೊಂಡೊಯ್ಯಲಾಯಿತು.

ಶುಕ್ರವಾರ ಬೆಳಿಗ್ಗೆ 10ರಿಂದ 11.30ರ ಅವಧಿಯಲ್ಲಿ ಕುಂದಾಪುರ ಶಾಸ್ತ್ರೀ ವೃತ್ತದ ಬಳಿಯ ಸಿ.ಎಸ್.ಐ. ಕೃಪಾ ಚರ್ಚ್‌ನ ಸಮಾಧಿ ಸ್ಥಳದಲ್ಲಿ ಅಲ್ವಿನ್ ಅವರ ತಂದೆ-ತಾಯಿಯ ಸಮಾಧಿಯ ಪಕ್ಕದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಸಿ.ಎಸ್.ಐ. ಕೃಪಾ ಚರ್ಚ್ ಧರ್ಮಗುರು ರೆ. ಫಾ. ಇಮಾನ್ಯುವಲ್ ಜಯಕರ್ ಅವರ ನೇತೃತ್ವದಲ್ಲಿ ಏರಿಯಾ ಅಧ್ಯಕ್ಷ ರೆ. ಕಿಶೋರ್ ಕುಮಾರ್, ರೆ. ಎಡ್ವಿನ್ ಜೋಸೆಫ್, ಸಿ.ಎಸ್.ಐ. ಡಯಾಸಿಸ್ ಕೋಶಾಧಿಕಾರಿ ಐವಾನ್ ಸೋನ್ಸ್, ರೆ. ಪ್ರವೀಣ್ ಮಾಬೆನ್, ಬಸ್ರೂರು ಎಲಿಜಬೆತ್ ಚರ್ಚ್‌ನ ರೆ. ಫಾ. ರವಿ ಶಶಿಕಲಾ ಹಾಗೂ ರೆ. ಸ್ಟೀವನ್ ಸರ್ವೋತ್ತಮ್ ಸೇರಿದಂತೆ ಧರ್ಮಗುರುಗಳು ಮನೆ ಮತ್ತು ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ಪುರಸಭೆ ಮಾಜಿ ಸದಸ್ಯರಾದ ವಿ. ಪ್ರಭಾಕರ್, ಎಚ್. ನರಸಿಂಹ, ರಾಜೇಶ ಕಾವೇರಿ, ರತ್ನಾಕರ ಸೇರಿದಂತೆ ದಿನೇಶ್ ಹೆಗ್ಡೆ ಮೊಳಹಳ್ಳಿ, ವಿಕಾಸ ಹೆಗ್ಡೆ, ವಿಜಯ್ ಎಸ್. ಪೂಜಾರಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

Screenshot 2026 09 25 223443

ಶುಕ್ರವಾರ ಮುಂಜಾನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್ ಅವರು, ಪಾರ್ಥಿವ ಶರೀರವನ್ನು ಕಾನೂನುಬದ್ಧವಾಗಿ ಸ್ವೀಕರಿಸುವ ಪ್ರಕ್ರಿಯೆ ವಿಳಂಬವಾಗದಂತೆ ಮೃತರ ಕುಟುಂಬಕ್ಕೆ ನೆರವಾದರು.

ಮೃತರ ಸಹೋದರ ಅನಿಲ್ ಪ್ರಶಾಂತ್ ಕುಂದರ್, ಆಪ್ತರಾದ ಆಕಾಶ್, ಉದಯ್ ಕುಮಾರ್ ಹಾಗೂ ಕೋಟೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರಮೀಳಾ ಜತ್ತನ್ ಅವರೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳಿದ ಗಫೂರ್ ಅವರು, ಪಾರ್ಥಿವ ಶರೀರ ಹಸ್ತಾಂತರದ ಪ್ರಕ್ರಿಯೆ ಸುಗಮವಾಗಿ ನಡೆಯುವಂತೆ ನೋಡಿಕೊಂಡರು.

ಬಳಿಕ ಪಾರ್ಥಿವ ಶರೀರದೊಂದಿಗೆ ಹೊನ್ನನಕೇರಿಯ ಅಲ್ವಿನ್ ಅವರ ನಿವಾಸಕ್ಕೂ ಆಗಮಿಸಿದ ಅವರು, ಅಂತಿಮ ವಿಧಿವಿಧಾನಗಳು ಪೂರ್ಣಗೊಳ್ಳುವವರೆಗೂ ಕುಟುಂಬದೊಂದಿಗೆ ಇದ್ದು ಧೈರ್ಯ ಹಾಗೂ ಸಾಂತ್ವನ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...

ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...