ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

Date:

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ ಹಾಗೂ ಸವಲತ್ತುಗಳು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪುವಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

- Advertisement -

ಬಿಜೂರು ಗ್ರಾಮದ ಮುರ್ಗೋಳಿಹಕ್ಲು ನಂದಿಕೇಶ್ವರ ಸಭಾಭವನದಲ್ಲಿ ನಡೆದ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಪ್ರಜಾಸೇವಾ ಆಂದೋಲನ ಸರಕಾರದ ಉತ್ತಮ ಕಲ್ಪನೆಯಾಗಿದ್ದು, ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಸಭೆಯಲ್ಲಿ ಸ್ವೀಕರಿಸುವ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿ, ಪರಿಣಾಮಕಾರಿ ಹಾಗೂ ಶಾಶ್ವತ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಅವರು ಹೇಳಿದರು.

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರಿರುವಲ್ಲಿಗೆ ತೆರಳಬೇಕು. ಸಭೆಗಳಲ್ಲಿ ಸಲ್ಲಿಕೆಯಾಗುವ ಅಹವಾಲುಗಳ ನಿರಂತರ ಫಾಲೋಅಪ್ ನಡೆಸಿ, ಜನರ ಸೇವೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಸಮಸ್ಯೆಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಈ ಕಾರ್ಯಕ್ರಮ ಸಮರ್ಪಕವಾಗಿ ಜನರಿಗೆ ತಲುಪಿದಾಗ ಮಾತ್ರ ಯಶಸ್ವಿಯಾಗಲಿದೆ ಎಂದರು.

PRAJASEVE ANDOLANA SABHE 2

ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಸರಕಾರಿ ಸೌಲಭ್ಯಗಳನ್ನು ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರಕಾರವೇ ಜನರ ಮನೆ ಬಾಗಿಲಿಗೆ ತೆರಳಿ, ಕಾಲಮಿತಿಯೊಳಗೆ ಅಹವಾಲುಗಳಿಗೆ ಗುಣಾತ್ಮಕ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಜಾರಿಗೊಳಿಸಿದೆ ಎಂದರು.

ಪ್ರತಿ ಶನಿವಾರ ಪ್ರಜಾಸೇವಾ ಆಂದೋಲನ ಸಭೆಗಳು ನಡೆಯುತ್ತಿದ್ದು, ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿ ಹಾಗೂ ಎರಡನೇ ಮತ್ತು ನಾಲ್ಕನೇ ಶನಿವಾರ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಜನರಿರುವ ಸ್ಥಳಕ್ಕೆ ತೆರಳಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ಬೈಂದೂರು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಮಾತನಾಡಿ, ಸರಕಾರ ಜನರ ಬಳಿಗೆ ತೆರಳಿ ಅವರ ಅಹವಾಲುಗಳನ್ನು ಸಾಧ್ಯವಾದಷ್ಟು ಸ್ಥಳದಲ್ಲಿಯೇ ವಿಲೇವಾರಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಕಾರ್ಯಕ್ರಮದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು 54 ಅರ್ಜಿಗಳು ಸಲ್ಲಿಕೆಯಾಗಿದ್ದವು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೊಳ್ಳಿ, ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್, ನಂದಿಕೇಶ್ವರ ಯುವಕ ಸಮಾಜದ ಅಧ್ಯಕ್ಷ ಶ್ರೀನಿವಾಸ ದೇವಾಡಿಗ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಬೈಂದೂರು ಬಿಇಒ ಗಣೇಶ್ ನಾಯ್ಕ್ ಸ್ವಾಗತಿಸಿದರು. ಉಪ್ಪುಂದ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಶಿಕ್ಷಕ ಕೇಶವ ನಾಯಕ್ ನಿರೂಪಿಸಿದರು. ಬೈಂದೂರು ತಹಶೀಲ್ದಾರ್ ರಾಮಚಂದ್ರಪ್ಪ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊನ್ನಾವರ | ಬಂಗಾರಮಕ್ಕಿಯಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ದರ್ಶನ ಪಡೆದ ಸ್ಮೃತಿ ಮಂಧಾನ

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

ಶಿವಮೊಗ್ಗ | ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರಿ...