ಉಡುಪಿ | ಜೈಂಟ್ಸ್ ಗ್ರೂಪ್ ವತಿಯಿಂದ ಒಂದು ವಾರದ ಸಮಾಜಮುಖಿ ಸೇವಾ ಕಾರ್ಯಕ್ರಮಗಳು ಯಶಸ್ವಿ

Date:

ದಾನಧರ್ಮ ಹಾಗೂ ಸಮಾಜಮುಖಿ ಸೇವಾ ಚಟುವಟಿಕೆಗಳಿಗೆ ಸದಾ ಆದ್ಯತೆ ನೀಡುತ್ತಿರುವ ಜೈಂಟ್ಸ್ ಗ್ರೂಪ್ ಉಡುಪಿ ವತಿಯಿಂದ ಒಂದು ವಾರದ ಅವಧಿಯಲ್ಲಿ ವಿವಿಧ ಸಮಾಜಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು.

- Advertisement -

ಒಂದು ವಾರದ ಸೇವಾ ಕಾರ್ಯಕ್ರಮಗಳ ಅಂಗವಾಗಿ ರಕ್ತದಾನ ಶಿಬಿರ, ಗೋಶಾಲೆಗೆ ಜಾನುವಾರುಗಳ ಮೇವಿನ ವಿತರಣೆ, ವೃದ್ಧಾಶ್ರಮದ ಸಿಬ್ಬಂದಿಗೆ ಕೈಗವಸುಗಳ ವಿತರಣೆ, ವೃದ್ಧಾಶ್ರಮಗಳಲ್ಲಿ ಹಣ್ಣುಗಳ ವಿತರಣೆ, ವಯಸ್ಕರ ಬಳಕೆಯ ಪ್ಯಾಡ್‌ಗಳ ವಿತರಣೆ, ಆಹಾರ ಸಾಮಗ್ರಿಗಳ ವಿತರಣೆ, ವೀಲ್‌ಚೇರ್ ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಸಮವಸ್ತ್ರಗಳ ವಿತರಣೆ ಸೇರಿದಂತೆ ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಇದರ ಜೊತೆಗೆ ರಸ್ತೆ ಉಬ್ಬುಗಳಿಗೆ ಬಣ್ಣ ಬಳಿಯುವ ಕಾರ್ಯವನ್ನೂ ಕೈಗೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಈ ಸೇವಾ ಕಾರ್ಯಕ್ರಮಗಳಲ್ಲಿ ಜೈಂಟ್ಸ್ ಕೇಂದ್ರ ಸಮಿತಿ ಸದಸ್ಯರಾದ ಜಿ. ದಿನಕರ ಅಮೀನ್, ಜೈಂಟ್ಸ್ ಗ್ರೂಪ್ ಉಡುಪಿ ಅಧ್ಯಕ್ಷರಾದ ಜಿ. ವಿನಯ್ ಕುಮಾರ್ ಪೂಜಾರಿ, ಉಪಾಧ್ಯಕ್ಷರಾದ ಜಿ. ದಯಾನಂದ ಶೆಟ್ಟಿ, ಕಾರ್ಯದರ್ಶಿ ದಿವಾಕರ್ ಪೂಜಾರಿ, ನಿರ್ದೇಶಕರಾದ ವಾದಿರಾಜ್ ಸಾಲ್ಯಾನ್, ಡಯಾನಾ ಸುಪ್ರಿಯಾ, ಟೀನಾ, ಸಮೀತ್ ಶೆಟ್ಟಿ ಹಾಗೂ ರೇಖಾ ಪೈ ಸಕ್ರಿಯವಾಗಿ ಭಾಗವಹಿಸಿದರು.

ಇವರೊಂದಿಗೆ ಮಾಜಿ ಅಧ್ಯಕ್ಷರಾದ ಎಂ. ಇಕ್ಬಾಲ್ ಮನ್ನಾ, ಜಗದೀಶ್ ಅಮೀನ್, ರಾಜೇಶ್ ಶೆಟ್ಟಿ ಹಾಗೂ ಚಿದಾನಂದ ಪೈ ಸೇರಿದಂತೆ ಹಲವಾರು ಜೈಂಟ್ಸ್ ಸದಸ್ಯರು ಸೇವಾ ಕಾರ್ಯಗಳಲ್ಲಿ ಪಾಲ್ಗೊಂಡರು.

ಜೈಂಟ್ಸ್ ಗ್ರೂಪ್ ಉಡುಪಿ ವತಿಯಿಂದ ಆಯೋಜಿಸಲಾದ ಈ ಒಂದು ವಾರದ ಸೇವಾ ಕಾರ್ಯಕ್ರಮಗಳು ಸಮಾಜದ ವಿವಿಧ ವರ್ಗಗಳ ಜನರಿಗೆ ನೆರವಾಗುವ ಮೂಲಕ ಮಾನವೀಯತೆ, ಕರುಣೆ, ಸಹಕಾರ ಹಾಗೂ ಸಮಾಜಸೇವೆಯ ಮಹತ್ವವನ್ನು ಸಾರಿದವು.

ಸಮಾಜದ ಒಳಿತಿಗಾಗಿ ನಿರಂತರವಾಗಿ ವಿವಿಧ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಜೈಂಟ್ಸ್ ಗ್ರೂಪ್ ಉಡುಪಿಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಅಂಗನವಾಡಿ, ಶಾಲೆ, ಆಸ್ಪತ್ರೆಗಳಿಗೆ ಆದ್ಯತೆಯ ಮೇರೆಗೆ ಕುಡಿಯುವ ನೀರು: ಸಿಇಒ ಡಾ. ದಿಲೀಷ್ ಶಶಿ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಅಂಗನವಾಡಿ, ಶಾಲೆ...

ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ...