ಉಡುಪಿ | ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

Advertisements

ಉಡುಪಿ ಜಿಲ್ಲೆ ಪ್ರವಾಸೋದ್ಯಮಕ್ಕೆ ಯೋಗ್ಯವಾದ ಜಿಲ್ಲೆ. ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಗೆ ಸರ್ವ ರೀತಿಯಿಂದಲೂ ಶ್ರಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು.

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಅವರ ‘ಯುವ ಮನೀಶ್’ ನೂತನ ಹೋಟೆಲ್‌ನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಕರಾವಳಿ ಜನ ದೈವ ಭಕ್ತರು. ಅವರಿಗೆ ಸದಾ ದೇವರ ಆಶೀರ್ವಾದ ಇರುತ್ತದೆ. ಹೀಗಾಗಿಯೇ ಅವರು ದೇಶಾದ್ಯಂತ ಉದ್ಯಮಗಳನ್ನು ಸ್ಥಾಪಿಸಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾದ ಬಳಿಕ ಜಿಲ್ಲೆಯ ಬಹುತೇಕ ದೇವಸ್ಥಾನಗಳಿಗೆ ಭೇಟಿ ನೀಡಿರುವೆ. ಇದೊಂದು ಪವಿತ್ರವಾದ ಸ್ಥಳ” ಎಂದು ಸಚಿವರು ಹೇಳಿದರು.

Advertisements

“ಉಡುಪಿ-ಮಂಗಳೂರು-ಬೆಂಗಳೂರು ನಡುವೆ ಕಾರಿಡಾರ್ ರಸ್ತೆ ನಿರ್ಮಾಣಕ್ಕೆ ರೂಪುರೇಷೆ ಸಿದ್ಧಪಡಿಸಲಾಗುವುದು. ಇದರಿಂದ ಜಿಲ್ಲೆಯ ಹೋಟೆಲ್ ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೂ ಹೆಚ್ಚು ಅನುಕೂಲವಾಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಜತೆಗೆ ಉದ್ಯಮಿಗಳಿಗೆ ಹೆಚ್ಚು ಅವಕಾಶ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ‘ಸಂವಿಧಾನ ಜಾಗೃತಿ ಜಾಥಾʼ ಸ್ತಬ್ಧಚಿತ್ರ ವಾಹನಕ್ಕೆ ಚಾಲನೆ

ಸಮಾರಂಭದಲ್ಲಿ ಘಟಪ್ರಭಾದ ಗುಬ್ಬಲಗುಡ್ಡ ಕೆಂಪಯ್ಯ ಸ್ವಾಮಿ ಮಠದ ಡಾ.ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಸೇರಿದಂತೆ ಹಲವು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X