ವೇಗವಾಗಿ ಬಂದ ಕೆಎಸ್ಆರ್ಟಿಸಿ ವೋಲ್ವೋ ಬಸ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿಯ ನಿಟ್ಟೂರು ಸಮೀಪ ಬೈಕ್ನಲ್ಲಿ ಸಂಚರಿಸುತ್ತಿದ್ದ ವಿಶು ಶೆಟ್ಟಿ ಅವರ ಬೈಕ್ಗೆ ವೇಗವಾಗಿ ಬಂದ ಕೆಎಸ್ಆರ್ಟಿಸಿ ವೋಲ್ವೋ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಬಸ್ ನಿಲ್ಲಿಸದೆ ಚಾಲಕ ವಾಹನವನ್ನು ಚಲಾಯಿಸಿಕೊಂಡು ತೆರಳಿದ್ದಾನೆ ಎನ್ನಲಾಗಿದೆ.
ಅದೇ ರಸ್ತೆಯಲ್ಲಿ ಬರುತ್ತಿದ್ದ ಅಂಬಲಪಾಡಿಯ ಪಡುಮನೆ ಸುರೇಶ್ ಅವರು ಗಾಯಗೊಂಡಿದ್ದ ವಿಶು ಶೆಟ್ಟಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಅಪಘಾತದಲ್ಲಿ ವಿಶು ಶೆಟ್ಟಿ ಅವರ ಕೈ ಹಾಗೂ ಕಾಲಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೈದ್ಯರು ಅವರಿಗೆ ಸುಮಾರು 20 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದಾರೆ.
ಘಟನೆ ಕುರಿತು ಸಂಚಾರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮದ ನಿರೀಕ್ಷೆಯಿದೆ.







