ಮಣಿಪುರ ಮಹಿಳೆಯರ ನಗ್ನ ಮೆರವಣಿಗೆ : ವಿಡಿಯೋ ಪ್ರಸಾರ ಮಾಡದಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರ ನಿರ್ದೇಶನ

Date:

  • ಕಳೆದ ಮೇ 4ರಂದು ನಡೆದಿದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್
  • ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿದ ಘಟನೆಗೆ ಸಂಬಂಧಿಸಿ ಹರಿದಾಡುತ್ತಿರುವ ವಿಡಿಯೋವನ್ನು ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರವು ಟ್ವಿಟರ್ ಸಹಿತ ಇತರೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿರ್ದೇಶನ ನೀಡಿರುವುದಾಗಿ ವರದಿಯಾಗಿದೆ.

ಈ ಬಗ್ಗೆ ಸರ್ಕಾರದ ಮೂಲವನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಸುದ್ದಿ ಸಂಸ್ಥೆ ಎಎನ್‌ಐ, ಮಣಿಪುರದ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿರುವ ವಿಡಿಯೋವನ್ನು ಶೇರ್ ಮಾಡದಂತೆ ಸರ್ಕಾರವು ಟ್ವಿಟರ್ ಮತ್ತು ಇತರ ಸಾಮಾಜಿಕ ಜಾಲತಾಣಗಳಿಗೆ ಆದೇಶಿಸಿದೆ. ಈ ವಿಷಯವು ಪ್ರಸ್ತುತ ತನಿಖೆಯಲ್ಲಿರುವುದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದು ದೇಶದ ಕಾನೂನುಗಳಿಗೆ ವಿರುದ್ಧವಾಗಿದೆ. ಹಾಗಾಗಿ, ಪ್ರಸಾರ ಮಾಡದಂತೆ ಸೂಚಿಸಿದೆ ಎಂದು ತಿಳಿಸಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಮಹಿಳೆಯರನ್ನು ಬೆತ್ತಲೆಗೊಳಿಸಿ ವಿಕೃತಿ ಮೆರೆದ ದುಷ್ಟರ ಗುಂಪು; ದೇಶಾದ್ಯಂತ ಆಕ್ರೋಶ

ಈ ಘಟನೆಯ ಬಗ್ಗೆ ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕಂಡು ಆಘಾತಕ್ಕೊಳಗಾಗಿದ್ದೇನೆ. ಮಣಿಪುರದ ಹೆಣ್ಣು ಮಕ್ಕಳಿಗೆ ಏನಾಗಿದೆಯೋ ಅದನ್ನು ಕ್ಷಮಿಸಲು ಸಾಧ್ಯವಿಲ್ಲ.ಆರೋಪಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಾನು ಭಾರತದ ಜನರಿಗೆ ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಘಟನೆಯ ಹಿನ್ನೆಲೆ

ವಿಕೃತ ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಅಮಾನವೀಯವಾಗಿ ಮೆರವಣೆಗೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕಳೆದ ಮೇ ತಿಂಗಳಲ್ಲಿ ನಡೆದಿತ್ತು.

ಮೇ 4ರಂದು ಕಾಂಗ್‌ಪೊಕ್ಪಿ ಜಿಲ್ಲೆಯ ಬಿ ಫೈನೋಮ್ ಎಂಬ ಹಳ್ಳಿಯ ಬಳಿ ಮೇತೀ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ ​ಈ ಘಟನೆ ನಡೆದಿತ್ತು.

ಸಂತ್ರಸ್ತ ಮಹಿಳೆಯರು ಕುಕಿ-ಜೋ ಬುಡಕಟ್ಟಿಗೆ ಸೇರಿದವರಾಗಿದ್ದು, ವಿಕೃತ ಮನಸ್ಸಿನ ಪುರುಷರ ಗುಂಪು ಅವರ ಮೇಲೆ ದೌರ್ಜನ್ಯ ಎಸಗಿ, ವಿಡಿಯೋವನ್ನು ಹರಿಬಿಟ್ಟಿದೆ. ವಿಡಿಯೋದಲ್ಲಿ ಮಹಿಳೆಯರು ಅಸಹಾಯತೆಯಿಂದ ಅಂಗಲಾಚುತ್ತಿದ್ದರೂ, ಅವರನ್ನು ಆ ದುರುಳರು ಎಳೆದೊಯ್ಯುತ್ತಿರುವುದು ಕಂಡುಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸಮೀಕ್ಷೆ ನಡೆಸಿ ಪುನರ್ವಸತಿ ಕಲ್ಪಿಸುವಂತೆ ಸ್ಲಂ ಸಮಿತಿ ಒತ್ತಾಯ

ಹೊಸದಾಗಿ ಸಮೀಕ್ಷೆ ನಡೆಸಿ ನೖಜ ಫಲಾನುಭವಿಗಳಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು...

‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ...

ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಪ್ರವೇಶಕ್ಕೆ ತಡೆಯಾಜ್ಞೆ ವಿಧಿಸಿದ್ದ ಜಿಲ್ಲಾಡಳಿತ: ತೆರವುಗೊಳಿಸಿದ ಹೈಕೋರ್ಟ್‌

ಸಂಘಪರಿವಾರದ ಮುಖಂಡ, ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಕಲಬುರಗಿ ಪ್ರವೇಶಕ್ಕೆ...

1993ರ ಸರಣಿ ಸ್ಪೋಟದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಿದ ಟಾಡಾ ಕೋರ್ಟ್

1993ರ ಸರಣಿ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ಕರೀಮ್‌ ತುಂಡಾನನ್ನು...