ಉತ್ತರ ಕನ್ನಡ | ಜಿಲ್ಲೆಯಲ್ಲಿ ಸಮೀಕ್ಷೆ ಚುರುಕು: ರಾಜ್ಯದಲ್ಲಿ 6ನೇ ಸ್ಥಾನ ಪಡೆದ ಜಿಲ್ಲೆ

Date:

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಚುರುಕು ಪಡೆದುಕೊಂಡಿದೆ. ಜಿಲ್ಲೆ ಪ್ರಸ್ತುತ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ.

- Advertisement -

ಸೆಪ್ಟೆಂಬರ್ 22 ರಂದು ಸಮೀಕ್ಷೆಗೆ ಚಾಲನೆ ದೊರೆತಿದ್ದರೂ ಮೊದಲ ದಿನದಲ್ಲಿ ಕೇವಲ 134 ಮನೆಗಳ ಸಮೀಕ್ಷೆ ನಡೆದಿತ್ತು. ಮೊದಲ ಮೂರು ದಿನ ಶಿಕ್ಷಕರ ಪ್ರತಿಭಟನೆ, ತಾಂತ್ರಿಕ ಅಡಚಣೆ ಮತ್ತು ನಿಯೋಜನೆ ಸಂಬಂಧಿತ ಗೊಂದಲಗಳಿಂದ ಕಾರ್ಯ ನಿರೀಕ್ಷಿತ ಪ್ರಗತಿ ಕಾಣಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಆದರೆ ಕಳೆದ ಕೆಲವು ದಿನಗಳಿಂದ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಇವತ್ತಿನವರೆಗೆ ಜಿಲ್ಲೆಯಲ್ಲಿ 1,68,046 ಮನೆಗಳ ಸಮೀಕ್ಷೆ ಪೂರ್ಣಗೊಳಿಸಲಾಗಿದೆ. ಜಿಲ್ಲೆಯಲ್ಲಿ ದಿನಕ್ಕೆ ಸರಾಸರಿ 12 ರಿಂದ 15 ಸಾವಿರ ಮನೆಗಳ ಸಮೀಕ್ಷೆ ನಡೆಯುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಕ್ಕ ಮಾದರ ತಿಳಿಸಿದ್ದಾರೆ.

ಒಟ್ಟು 3,26,860 ಮನೆಗಳ ಸಮೀಕ್ಷೆಯ ಗುರಿ ಹೊಂದಲಾಗಿದ್ದು, ಇದುವರೆಗೆ 51 ಪ್ರತಿಶತ ಕಾರ್ಯ ಮುಗಿದಿದೆ. ಈ ಕಾರ್ಯಕ್ಕಾಗಿ 2,916 ಬ್ಲಾಕ್‌ಗಳು ರಚಿಸಲ್ಪಟ್ಟಿದ್ದು, 3,923 ಗಣತಿದಾರರು ನಿಯೋಜಿಸಲ್ಪಟ್ಟಿದ್ದಾರೆ. ಸಮೀಕ್ಷೆ ಪ್ರಕ್ರಿಯೆಗೆ ಆರಂಭದಲ್ಲಿ ಅನೇಕ ಅಡಚಣೆಗಳಿದ್ದರೂ, ಅವು ಬಹುತೇಕ ಬಗೆಹರಿದು ಕಾರ್ಯಸುಗಮವಾಗಿದೆ. ಆದರೆ ಸಮೀಕ್ಷೆ ವೇಳೆ ಮನೆ ಮಾಲೀಕರು ಅಗತ್ಯ ದಾಖಲೆಗಳನ್ನು ಹುಡುಕುವಲ್ಲಿ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ.

ಇದರ ಪರಿಣಾಮವಾಗಿ, ಒಂದೇ ಮನೆಗೆ ಸಮೀಕ್ಷೆ ಪೂರ್ಣಗೊಳಿಸಲು ಗಂಟೆಗಳ ಕಾಲ ಬೇಕಾಗುತ್ತಿದೆ. ಸರ್ಕಾರ ಸಮೀಕ್ಷಾ ಅವಧಿಗೆ ವಿಸ್ತರಣೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವುದರಿಂದ, ಶಿಕ್ಷಕರು ತಮ್ಮ ರಜೆ ಮುಗಿಯುವ ಮೊದಲು ಸಮೀಕ್ಷೆ ಮುಗಿಸಲು ಹೆಚ್ಚಿನ ಶ್ರಮವಹಿಸುತ್ತಿದ್ದಾರೆ. ಸಮೀಕ್ಷೆಗೆ ನಿಯೋಜನಾ ಆದೇಶ ಪಡೆದಿರುವ ಶಿಕ್ಷಕರು ಮತ್ತು ಇತರ ಇಲಾಖೆಯ ಗಣತಿದಾರರು ಕಾರ್ಯದಲ್ಲಿನ ಲೋಪದೋಷಗಳ ಕುರಿತು ಬಹಿರಂಗವಾಗಿ ಹೇಳಿಕೆ ನೀಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶ ಜಾರಿಯಲ್ಲಿದೆ. ಪ್ರತಿಭಟನೆ ನಡೆಸುವುದು ಅಥವಾ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ಕಾರ್ಯವನ್ನು ಸಹ ಅನುಮತಿಸಿಲ್ಲ ಎಂದು ಸಮೀಕ್ಷೆಗೆ ನಿಯೋಜಿಸಲಾಗಿರುವ ಶಿಕ್ಷಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡದ ಮುಂಗಾರು ವರದಿ: ಕೋಟ್ಯಂತರ ಮೌಲ್ಯದ ಸಾರ್ವಜನಿಕ ಆಸ್ತಿಗೆ ಹಾನಿ!

ಗೋವಾ ರಾಜ್ಯದಲ್ಲಿ ಸಮೀಕ್ಷೆ.

ರಾಜ್ಯದ ಕೊನೆಯ ಹಳ್ಳಿಯಾದ ಕಾರವಾರ ತಾಲ್ಲೂಕಿನ ಕಮ್ಮರ್‌ಗಾಂವ್‌ನಲ್ಲಿ ರಸ್ತೆ, ಪಡಿತರ ಹಾಗೂ ಸಮರ್ಪಕ ವಿದ್ಯುತ್‌ ಸೌಲಭ್ಯಗಳ ಕೊರತೆಯಿದ್ದರೂ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಸ್ವತಃ ಆಸಕ್ತಿ ತೋರಿದ್ದು, ಅಲ್ಲಿಗೂ ಸಹ ಅಧಿಕಾರಿಗಳು ಭೇಟಿ ನೀಡಿ ನೇಟ್ವರ್ಕ ಸಿಗುವ ಜಾಗಕ್ಕೆ ವಾಹನದ ವ್ಯವಸ್ಥೆ ಮಾಡಿ ಸಮೀಕ್ಷೆ ಕಾರ್ಯವನ್ನು ನೀಡಿ ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...