ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

Date:

ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಸೆಪ್ಟೆಂಬರ್ 5ರಂದು ಬೆಳಗ್ಗೆ 10.30 ಗಂಟೆಗೆ ಆಯೋಜಿಸಲಾಗಿದೆ.

- Advertisement -

ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪಾಧ್ಯಕ್ಷ ಮಂಕಾಳ ಎಸ್. ವೈದ್ಯ ಅವರ ನೇತೃತ್ವದಲ್ಲಿ ಭಟ್ಕಳ ತಾಲೂಕಿನ ಮಾವಳ್ಳಿ ಹೋಬಳಿಯ ಮುರ್ಡೇಶ್ವರದ ಆರ್.ಎನ್.ಎಸ್. ಸಭಾಭವನದಲ್ಲಿ ಸಭೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಹಳಿಯಾಳ-ದಾಂಡೇಲಿ-ಜೋಯಿಡಾ ಕ್ಷೇತ್ರದ ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಹಳಿಯಾಳ ತಾಲೂಕಿನ ಸಂಬ್ರಾಣಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ನೇತೃತ್ವದಲ್ಲಿ ಸಂಪಖಂಡ ಹೋಬಳಿಯ ಜಾನ್ಮನೆ ಗಜಾನನ ಪ್ರೌಢಶಾಲೆ ಸಭಾಭವನದಲ್ಲಿ, ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ಮಂಚಿಕೇರಿ ಹೋಬಳಿಯ ರಾಜರಾಜೇಶ್ವರಿ ಸಮಾಜ ಮಂದಿರದಲ್ಲಿ ಸಭೆಗಳು ನಡೆಯಲಿವೆ.

ಇದೇ ವೇಳೆ ಕುಮಟಾ-ಹೊನ್ನಾವರ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಕುಮಟಾ ತಾಲೂಕಿನ ಕೂಜಳ್ಳಿಯ ಶಾಂತಿಕಾ ಪರಮೇಶ್ವರಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗಳಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವಂತೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಅರ್ಜಿ ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಸಿಗಾಗಿ ಹುದ್ದೆ ಮಾರಾಟ: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ ಇಡಿ ವಶಕ್ಕೆ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಸಿಸಿ) ನಡೆದಿದೆ ಎನ್ನಲಾದ ಬೃಹತ್ ನೇಮಕಾತಿ ಅಕ್ರಮ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಗದಗ | ಕಳಸಾಪೂರ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವ ಕಾರ್ಯಕ್ರಮ

ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದಲ್ಲಿ 1633ನೇ ವಾರದ ಶಿವಾನುಭವದಲ್ಲಿ...

ವಿಜಯಪುರ | ಸದೃಢ ಸಮಾಜ ನಿರ್ಮಾಣಕ್ಕೆ ಹಿರಿಯರ ಮಾರ್ಗದರ್ಶನ ಅಗತ್ಯ: ಅರವಿಂದ ಹಾಗರಗಿ

ವಯಸ್ಸು ಬದುಕಿನ ಅಂತ್ಯವಲ್ಲ; ಅದು ಅನುಭವ, ಜ್ಞಾನ ಮತ್ತು ಬದುಕಿನ ಪಾಠಗಳ...