ಉತ್ತರಾಖಂಡ್‌ನ ಸೇತುವೆಯೊಂದರಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡ ಪರಿಣಾಮ ಓರ್ವ ಪೊಲೀಸ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯ ಅಲಕನಂದಾ ನದಿಯ ಸಮೀಪ ಈ ಘಟನೆ ನಡೆದಿದೆ. ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಬಳಿಕ ಸೇತುವೆಯೊಂದಕ್ಕೆ ವಿದ್ಯುತ್ ಪ್ರವಹಿಸಿದ ಪರಿಣಾಮ ಈ ದುರ್ಘಟನೆ ನಡೆದಿರುವುದಾಗಿ ವರದಿಯಾಗಿದೆ.
“ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಮೂವರು ಗೃಹ ರಕ್ಷಕರು ಸೇರಿದಂತೆ 15 ಜನರು ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ್ದಾರೆ. ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.