ಜ್ಞಾನವಾಪಿ ಮಸೀದಿ ಆವರಣವನ್ನು ಸಮೀಕ್ಷೆ ಮಾಡುವಂತೆ ಕೋರಿ ಹಿಂದೂ ಮಹಿಳಾ ಭಕ್ತರು ಸಲ್ಲಿಸಿದ್ದ ಅರ್ಜಿಗೆ ಒಪ್ಪಿಗೆ ಸೂಚಿಸಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯವು, ವೈಜ್ಞಾನಿಕ ಸಮೀಕ್ಷೆ ಮಾಡಲು ಅನುಮತಿಸಿದೆ.
ಈಗಾಗಲೇ ಮೊಹರು ಮಾಡಲಾಗಿರುವ ವುಜುಖಾನಾ ಹೊರತುಪಡಿಸಿ ಸಂಪೂರ್ಣ ಜ್ಞಾನವಾಪಿ ಮಸೀದಿ ಆವರಣವನ್ನು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆ ಮಾಡುವಂತೆ ನ್ಯಾಯಾಲಯವು ಸೂಚಿಸಿದೆ.
ಪೂರ್ವದಲ್ಲಿ ಅಸ್ತಿತ್ವದಲ್ಲಿದ್ದ ಹಿಂದೂ ದೇವಾಲಯದ ರಚನೆಯ ಮೇಲೆ ಮಸೀದಿಯನ್ನು ನಿರ್ಮಿಸಲಾಗಿದೆಯೇ ಎಂದು ಕಂಡುಹಿಡಿಯಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಇಡೀ ಜ್ಞಾನವಾಪಿ ಮಸೀದಿ ಆವರಣದ (ವುಜುಖಾನಾ ಹೊರತುಪಡಿಸಿ) ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ ನಾಲ್ವರು ಹಿಂದೂ ಮಹಿಳಾ ಆರಾಧಕರು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಆದೇಶ ಪ್ರಕಟಿಸಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ವೈಜ್ಞಾನಿಕ ಸಮೀಕ್ಷೆಯು ಬೆಳಗ್ಗೆ 8ರಿಂದ 12 ಗಂಟೆಯ ನಡುವೆ ನಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದ್ದಾರೆ.
ಮಸೀದಿಯಲ್ಲಿ ನಮಾಝ್ ನಿರ್ವಹಿಸಲು ಯಾವುದೇ ನಿರ್ಬಂಧಗಳಿಲ್ಲ ಮತ್ತು ಮಸೀದಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ವೈಜ್ಞಾನಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಅಧ್ಯಯನ ವರದಿಯನ್ನು ಆಗಸ್ಟ್ 4ರೊಳಗೆ ನ್ಯಾಯಾಲಯದ ಮುಂದೆ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳಿಗೆ ವಾರಣಾಸಿ ಕೋರ್ಟ್ ನಿರ್ದೇಶನ ನೀಡಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್, ‘ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ನನ್ನ ಅರ್ಜಿಯನ್ನು ಅನುಮೋದಿಸಲಾಗಿದೆ ಎಂದು ನನಗೆ ತಿಳಿಸಲಾಗಿದೆ. ನ್ಯಾಯಾಲಯವು ಜ್ಞಾನವಾಪಿ ಮಸೀದಿ ಸಂಕೀರ್ಣದ ವುಝೂ ಟ್ಯಾಂಕ್ ಅನ್ನು ಹೊರತುಪಡಿಸಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಸಮೀಕ್ಷೆಯನ್ನು ನಡೆಸುವಂತೆ ಸೂಚಿಸಿದೆ’ ಎಂದು ಹೇಳಿಕೆ ನೀಡಿದ್ದಾರೆ.
ಇಂತಹ ಸುದ್ದಿ ಬಗ್ಗೆ ಮಾಧ್ಯಮಗಳು ಹಾಗೂ ಕೇಂದ್ರ ಸರ್ಕಾರ ಬಹುವಾಗಿ ಮಾತನಾಡುತ್ತಾರೆ ಆದರೆ ಮಣಿಪುರದ ಬುಡಕಟ್ಟು ಜನಾಂಗದ ಮೇಲೆ ನೆಡೆಯುತ್ತಿರುವ ಕೊಲೆ ದುಂಬಿ ಬಗ್ಗೆ ನಿರ್ಲಕ್ಷ್ಯ.