ವಿಜಯನಗರ | ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

Date:

ವಿದ್ಯುತ್ ಖಾಸಗಿಕರಣ ವಿರೋಧಿಸಿ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಆಂಜನೇಯ ದೇವಸ್ಥಾನದಿಂದ ಶಾಸ್ತ್ರಿ ಸರ್ಕಲ್ ವರೆಗೆ ಬೃಹತ್ ಧರಣಿ ನಡೆಯಿತು.

- Advertisement -

ರೈತರ ಬೇಡಿಕೆಗಳೇನು?
1.ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಬೇಕು.
2.ದಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಿಗೆ ಅರ್ಜಿಯನ್ನು ತಕ್ಷಣ ತಿರಸ್ಕರಿಸಬೇಕು.
3.ವಿದ್ಯುತ್ ಇಲಾಖೆಯ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು.
4.ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಲೈನ್‌ಗಳ ದುರಸ್ತಿ ಕಾರ್ಯವನ್ನು ಶೀಘ್ರವಾಗಿ ಕೈಗೊಳ್ಳಬೇಕು.
5.ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಖಾಸಗೀಕರಣ ನೀತಿಗಳನ್ನು ಹಿಂಪಡೆಯಬೇಕು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ವಿದ್ಯುತ್ ಖಾಸಗಿ ಕಂಪನಿಯವರಿಗೆ ನೀಡುವುದನ್ನು ಕೈಬಿಡಬೇಕು. ಟಾಟಾ ಪವರ್ ಕಂಪನಿ ಲಿಮಿಟೆಡ್ ಸಲ್ಲಿಸಿರುವ ವಿದ್ಯುತ್ ವಿತರಣಾ ಪರವಾನಿಗೆ ಅರ್ಜಿಯನ್ನು ತಿರಸ್ಕರಿಸಬೇಕು ಮತ್ತು ರೈತರಿಗೆ 24*7 ವಿದ್ಯುತ್ ಪೂರೈಕೆ ಮಾಡಬೇಕು ಎಂದು ಆಗ್ರಹಿಸಿ ಹೂವಿನ ಹಡಗಲಿ ತಹಶೀಲ್ದಾರ್ ಬಳಿ ಮನವಿ ಸಲ್ಲಿಸಲಾಯಿತು.

WhatsApp Image 2026 06 22 at 5.19.41 PM

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ. ಗೋಣಿಬಸಪ್ಪ, ತಾಲೂಕು ಅಧ್ಯಕ್ಷ ಸಿದ್ದಪ್ಪ ಹೊಸಮನಿ, ತಾಲೂಕು ಗೌರವ ಅಧ್ಯಕ್ಷರ ಪಕ್ಕೀರಪ್ಪ, ಉಪಾಧ್ಯಕ್ಷರ ವಿಠ್ಠಲ್ ನಾಯ್ಕ್, ಹಗರಿಬೊಮ್ಮನಹಳ್ಳಿ ತಾಲ್ಲೂಕು ಅಧ್ಯಕ್ಷ ಬಿ ಬಸವನಗೌಡ ಮತ್ತು ಮಹಿಳಾ ಜಿಲ್ಲಾ ಅಧ್ಯಕ್ಷರ ವಿಜಯಲಕ್ಷ್ಮಿ, ಜಿಲ್ಲಾ ಉಪಾಧ್ಯಕ್ಷ ಗನಿ ಸಾಬ್, ಪ್ರಧಾನ ಕಾರ್ಯದರ್ಶಿ ಶಿವರಾಜ ಎಂ ಹೊಳಗುಂದಿ ಹಾಗೂ ಸಂಘಟನಾ ಕಾರ್ಯದರ್ಶಿ ಗಿರೀಶ್ ಕೆ ಕೆ ತಾಂಡ ಸೇರಿದಂತೆ ಹಲವರಿದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಚಿಂತಾಮಣಿ | ರೇಷ್ಮೆ ಕೃಷಿ ಕಾಲೇಜು ವಿದ್ಯಾರ್ಥಿಗಳಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಆಯೋಜನೆ

    ಶ್ರೀನಿವಾಸಪುರ ತಾಲ್ಲೂಕಿನ ಕಶೆಟ್ಟಿಪಲ್ಲಿ ಗ್ರಾಮದಲ್ಲಿ ಚಿಂತಾಮಣಿ ರೇಷ್ಮೆ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಂದ...

    ಚಿಕ್ಕಮಗಳೂರು | ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಶೀಘ್ರದಲ್ಲಿ ಆರಂಭ; ಕೋಟ ಶ್ರೀನಿವಾಸ್ ಪೂಜಾರಿ 

    ಮೂಗ್ತಿಹಳ್ಳಿ-ಮೂಡಿಗೆರೆ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆಯ ಮೊದಲ ಹಂತದ ಕಾಮಗಾರಿ ಇನ್ನೊಂದು...

    ಉತ್ತರ ಕನ್ನಡ | ಸೆ. 5ರಂದು ಪ್ರಜಾಸೇವೆ ಆಂದೋಲನ: ಜನರ ಬಳಿಗೆ ಆಡಳಿತ, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ

    ಉತ್ತರ ಕನ್ನಡ: ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ...

    ಹಾಸನ | ಫುಟ್‌ಪಾತ್ ಒತ್ತುವರಿಯನ್ನು ತೆರವುಗೊಳಿಸಿದ ಅಧಿಕಾರಿಗಳು 

    ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ತೇಜಸ್ವಿ ವೃತ್ತದಲ್ಲಿ ಸುಗಮ ಸಂಚಾರಕ್ಕೆ ಅಡಚಣೆಯಾಗಿದ್ದ...