ವಿಜಯಪುರ | ಹೊಸ ಆಧಾರ್ ಸೇವಾ ಕೇಂದ್ರ ಆರಂಭ

Date:

ವಿಜಯಪುರ ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್ ಡಿಇ 2ನೇ ಗೇಟ್ ಎದುರಿಗಿರುವ ಬಜಾಜ್ ಶೋ‌ ರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು, ನಿವಾಸಿಗಳಿಗೆ ತಡೆರಹಿತ ಆಧಾರ್ ಸಂಬಂಧಿತ ಸೇವೆ ಒದಗಿಸಲೆಂದು ಕಾರ್ಯಾಚರಣಾ ಕಿಟ್ಗಳನ್ನು ಈ ಕೇಂದ್ರದಲ್ಲಿ ಅಳವಡಿಸಲಾಗಿದೆ. ಈ ಆಧಾರ್ ಸೇವಾ ಕೇಂದ್ರವು ಆಧಾರ್ ನೋಂದಣಿ, ಬಯೋಮೆಟ್ರಿಕ್ ನವೀಕರಣಗಳು, ದೋಷ ತಿದ್ದುಪಡಿ ಮತ್ತು ಕುಂದು ಕೊರತೆ ನಿವಾರಣಾ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುತ್ತದೆ. ಈ ಕೇಂದ್ರವು ವಾರದ ಎಲ್ಲ ದಿನಗಳಲ್ಲಿ ಕಾರ್ಯನಿರ್ವಹಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಈ ಆಧಾರ್ ಸೇವಾ ಕೇಂದ್ರವು ನೇರವಾಗಿ ಯುಐಡಿಎಐ ನಡಿ ಕಾರ್ಯನಿರ್ವಹಿಸುತ್ತದೆ. ಈ ಕೇಂದ್ರವನ್ನು ಸಂಪೂರ್ಣವಾಗಿ ಅಂತರ್ಗತ ಮತ್ತು ಜನಸ್ನೇಹಿಯಾಗಿ ವಿನ್ಯಾಸಗೊಳಿಸಲಾಗಿದೆ. ಇಲ್ಲಿ ಗಾಲಿಕುರ್ಚಿ, ಪ್ರವೇಶದ ಸೌಕರ್ಯ, ಸುಲಭವಾಗಿ ಬಳಸಬಹುದಾದ ಶೌಚಾಲಯಗಳು ಮತ್ತು ಪ್ರತ್ಯೇಕ ಕುಂದುಕೊರತೆ ನಿವಾರಣಾ ವ್ಯವಸ್ಥೆಗಳಿವೆ. ಪ್ರತಿಯೊಂದು ಆಧಾರ್ ಸೇವಾ ಕೇಂದ್ರವನ್ನು ಒಬ್ಬ ವ್ಯವಸ್ಥಾಪಕ ನಿರ್ವಹಿಸುತ್ತಾರೆ.

ಇವರು ನಿವಾಸಿಗಳಿಂದ ಕುಂದುಕೊರತೆಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸಕಾಲಕ್ಕೆ ಪರಿಹಾರ ಕಲ್ಪಿಸುತ್ತಾರೆ. ನಿವಾಸಿಗಳು ಆನ್ ಲೈನ್‌ನಲ್ಲಿ ಯುಐಡಿಎಐ ಆಧಾರ್ ಅಪಾಯಿಂಟ್‌ಮೆಂಟ್ ಪೋರ್ಟಲ್ಗೆ ಭೇಟಿ ನೀಡುವ ಮೂಲಕ ಆಧಾರ್ ಸೇವೆಗಳಿಗಾಗಿ ಮುಂಚಿತವಾಗಿಯೇ ಅಪಾಯಿಂಟ್ಮೆಂಟ್ ಕಾಯ್ದಿರಿಸಬಹುದಾಗಿದೆ. ಜಿಲ್ಲೆಯ 5 ರಿಂದ 17 ವರ್ಷದ ಒಟ್ಟು 68,000 ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪಡೇಟ್ ಸೌಲಭ್ಯವನ್ನು ಸೆಪ್ಟೆಂಬರ್ 30ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ.

ಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ. ಜಿಲ್ಲೆಯ ಎಲ್ಲಾ ಪೋಷಕರು 5 ರಿಂದ 17ರ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ ಅಳವಡಿಕೆ ಪ್ರಕ್ರಿಯೆಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೇಂದ್ರದ ಲಾಭ ಪಡೆದುಕೊಳ್ಳಬಹುದಾಗಿದೆ” ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಅ.2ರಂದು ಬೃಹತ್ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಪಟ್ಟಿಯಿಂದ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಉಡುಪಿ | ಶಾರ್ಜಾದಲ್ಲಿ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್‌ಗೆ ಹುಟ್ಟೂರಿನಲ್ಲಿ ಅಂತಿಮ ನಮನ

ಶಾರ್ಜಾದಲ್ಲಿ ಕಳೆದ ಜುಲೈನಲ್ಲಿ ನಿಗೂಢವಾಗಿ ಹತ್ಯೆಗೀಡಾದ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ...