ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

Date:

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಮಾಡಬೇಕು ಹಾಗೂ ಕಬ್ಬಿಗೆ ಪ್ರತಿ ಟನ್‌ಗೆ ಕನಿಷ್ಠ ₹6,000 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯನ್ನೇ ಅವಲಂಬಿಸಿ ಕೃಷಿ ಮಾಡಿರುವ ರೈತರು ಬಿತ್ತನೆ ಮಾಡಿದ ತೊಗರಿ, ಹತ್ತಿ, ಮೆಕ್ಕೆಜೋಳ ಹಾಗೂ ಸಜ್ಜೆ ಸೇರಿದಂತೆ ಹಲವು ಬೆಳೆಗಳು ಮಳೆ ಕೊರತೆಯಿಂದ ಒಣಗಿ ನಾಶವಾಗಿವೆ. ಪರಿಣಾಮ ರೈತರು ಮಾತ್ರವಲ್ಲದೆ ಕೃಷಿ ಕೂಲಿ ಕಾರ್ಮಿಕರೂ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ರೈತ ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರೈತ ಮುಖಂಡ ಸಿದ್ದನಗೌಡ ಪಾಟೀಲ ಮಾತನಾಡಿ, “ಬರದಿಂದ ಬೆಳೆ ಕಳೆದುಕೊಂಡ ರೈತರಿಗೆ ಸರ್ಕಾರ ಘೋಷಿಸಿರುವ ಪ್ರತಿ ಎಕರೆಗೆ ₹2,500 ಪರಿಹಾರವು ವಾಸ್ತವಿಕ ನಷ್ಟಕ್ಕೆ ಹೋಲಿಸಿದರೆ ಅತ್ಯಲ್ಪವಾಗಿದೆ. ಕೃಷಿ ವೆಚ್ಚ, ಬಿತ್ತನೆ, ಗೊಬ್ಬರ, ಔಷಧಿ ಹಾಗೂ ಕಾರ್ಮಿಕರ ಕೂಲಿ ಸೇರಿದಂತೆ ರೈತರು ಮಾಡಿರುವ ಖರ್ಚನ್ನು ಪರಿಗಣಿಸಿ ಪ್ರತಿ ಎಕರೆಗೆ ಕನಿಷ್ಠ ₹25,000 ಬೆಳೆ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರೂ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಬರದ ಪರಿಣಾಮ ಕಬ್ಬಿನ ಇಳುವರಿ ಕುಸಿದಿದ್ದು, ರೈತರು ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವ ಮೂಲಕ ಪ್ರತಿ ಟನ್‌ಗೆ ಕನಿಷ್ಠ ₹6,000 ಬೆಂಬಲ ಬೆಲೆ ಘೋಷಿಸಬೇಕು ಎಂದು ಅವರು ಆಗ್ರಹಿಸಿದರು.

Advertisements

ಇದರ ಜೊತೆಗೆ, ಬರ ಮತ್ತು ಬೆಳೆ ನಷ್ಟದಿಂದ ಸಾಲದ ಹೊರೆ ಹೆಚ್ಚಿಸಿಕೊಂಡಿರುವ ರೈತರ ಸಾಲಗಳನ್ನು ಮನ್ನಾ ಮಾಡಿ, ಸಂಕಷ್ಟದಲ್ಲಿರುವ ಕೃಷಿಕ ಕುಟುಂಬಗಳಿಗೆ ತಕ್ಷಣ ಆರ್ಥಿಕ ನೆರವು ಒದಗಿಸಬೇಕು ಎಂದು ರೈತ ಸಂಘ ಒತ್ತಾಯಿಸಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ರೈತ ಮುಖಂಡರಾದ ಪುಟ್ಟು ಗಡದನ್ನವರ, ಲಾಯಪ್ಪ ಇಂಗಳೆ, ವಿನೋದ ಖೇಡ, ಬಸನಗೌಡ ಧರ್ಮಗೊಂಡ, ಅನೀಲ ಇಕಡೆ, ಸಂಗಾರೆಡ್ಡಿ, ತೆಗ್ಗಿನಮನಿ, ಶಿವಶರಣರಡ್ಡಿ ಅವರಾದಿ, ಬಸವರಾಜ ಸುತಗುಂಡಿ, ಧರ್ಮ ಗಬಸಾವಳಗಿ, ಮಹಾದೇವಪ್ಪ ತೇಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಬಿಡುಗಡೆ ಮರುಪರಿಶೀಲನೆಗೆ ಸುಪ್ರೀಂ ಕೋರ್ಟ್ ನಕಾರ

ತೀವ್ರ ಕುತೂಹಲ ಕೆರಳಿಸಿರುವ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...