ಅಖಿಲ ಭಾರತ ಬೆಂಬಲ ದಿನ |ಹೋರಾಟನಿರತ ಮಹಿಳಾ ಕುಸ್ತಿಪಟುಗಳೊಂದಿಗೆ ರಾಜ್ಯದ ವಿದ್ಯಾರ್ಥಿಗಳಿದ್ದೇವೆ: ಶಿಲ್ಪಾ ಬಿ ಕೆ

Date:

ದೆಹಲಿಯಲ್ಲಿ ಮಹಿಳಾ ಕ್ರೀಡಾಪಟುಗಳು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮೇ 3ರಂದು ದೆಹಲಿ ವಿಶ್ವವಿದ್ಯಾಲಯದ ಮುಂಭಾಗ ಎಐಡಿಎಸ್‌ಒ ಕಾರ್ಯಕರ್ತರು ಮತ್ತು ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಅವರ ಮೇಲೆ ಪೊಲೀಸ್ ಲಾಠಿ ಪ್ರಹಾರ ನಡೆಸಿದ್ದಾರೆ. ಅಲ್ಲದೆ, ಹೋರಾಟನಿರತ ಕುಸ್ತಿಪಟುಗಳಿಗೂ ಕಿರುಕುಳ ನೀಡಿದ್ದಾರೆ. ಇದು ದೆಹಲಿ ಸರ್ಕಾರದ ಅಪ್ರಜಾತಾಂತ್ರಿಕ ಹಾಗೂ ಅತ್ಯಂತ ಕ್ರೂರ ದಾಳಿ ಎಂದು ಎಐಡಿಎಸ್‌ಒ ಕಿಡಿಕಾರಿದೆ. ದೇಶಾದ್ಯಂತ ಶುಕ್ರವಾರ ಅಖಿಲ ಭಾರತ ಬೆಂಬಲ ದಿನ ಆಚರಿಸುತ್ತಿದೆ.

- Advertisement -

ದೇಶದ ಹೆಮ್ಮೆಯ ಮಹಿಳಾ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಮಗೆ ಬಿಜೆಪಿ ಸಂಸದ ಹಾಗೂ ಡಬ್ಲ್ಯೂಎಫ್‌ಐನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೋರಾಟಕ್ಕೆ ದೇಶದ ಹಲವು ಗಣ್ಯ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿ-ಯುವಜನರು ಬೆಂಬಲ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಹಲವು ದಿನಗಳಿಂದ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಗುರುವಾರ ತಡರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರತಿಭಟನೆಯ ಸ್ಥಳಕ್ಕೆ ಹಾಸಿಗೆಗಳನ್ನು ಸಾಗಿಸುವ ಸಮಯದಲ್ಲಿ, ಒಬ್ಬ ಕುಡುಕ ಪೊಲೀಸ್ ಪೇದೆ ಮಹಿಳಾ ಕುಸ್ತಿಪಟುಗಳನ್ನು ಅಡ್ಡಗಟ್ಟಿ, ಅಸಭ್ಯವಾಗಿ ವರ್ತಿಸಿ, ಅವರನ್ನು ನಿಂದಿಸಿದ್ದಾರೆ. ಈ ನಡತೆಯನ್ನು ಪ್ರತಿರೋಧಿಸಲು ಮುನ್ನುಗ್ಗಿದ ಇತರ ಹೋರಾಟನಿರತ ಕುಸ್ತಿಪಟುಗಳ ಮೇಲೆಯೂ ಪೊಲೀಸ್ ದೌರ್ಜನ್ಯ ನಡೆಸಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ” ಎಂದು ಎಐಡಿಎಸ್‌ಒ ಆರೋಪಿಸಿದೆ.

“ಈ ಎಲ್ಲ ನಡೆಗಳು ಅತ್ಯಂತ ಅಪ್ರಜಾತಾಂತ್ರಿಕ ಮತ್ತು ಹೋರಾಟವನ್ನು ಹತ್ತಿಕ್ಕಲು ನಡೆಸಿರುವ ಕ್ರೂರ ಪ್ರಯತ್ನ. ತಮ್ಮ ಘನತೆ ಹಾಗೂ ಗೌರವಕ್ಕಾಗಿ ಮಹಿಳಾ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟ ಅತ್ಯಂತ ನ್ಯಾಯಸಮ್ಮತವಾಗಿದೆ. ಅವರ ಮೇಲೆ ದೌರ್ಜನ್ಯ ಎಸಗಿರುವ ಎಲ್ಲರನ್ನೂ ಶಿಕ್ಷೆಗೆ ಒಳಪಡಿಸಬೇಕು” ಎಂದು ಸಂಘಟನೆ ಆಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಪ್ರತಿಭಟನಾ ನಿರತ ಕುಸ್ತಿಪಟುಗಳ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

“ಡಬ್ಲ್ಯೂಎಫ್‌ಐನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೂಡಲೇ ಅಧಿಕಾರದಿಂದ ವಜಾಗೊಳಿಸಿ, ಫೆಡರೇಶನ್‌ನಿಂದ ಉಚ್ಛಾಟನೆ ಮಾಡಬೇಕು. ಲೈಂಗಿಕ ಕಿರುಕುಳ ಘಟನೆಗಳಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೂ ಶಿಕ್ಷೆ ನೀಡಬೇಕು. ಮಹಿಳೆಯರಿಗೆ ಸೂಕ್ತ ಭದ್ರತೆಯನ್ನು ಖಾತ್ರಿ ಪಡಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬಣಕಲ್; ಸ.ಮಾ.ಹಿ ಪ್ರಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ 

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಸರ್ಕಾರಿ ಮಾದರಿ ಹಿರಿಯ...

ಬರಕ್ಕೆ ಮಾನದಂಡ ಮುಖ್ಯವೋ, ಬದುಕು ಮುಖ್ಯವೋ?: ಸಿ. ಬೈರೇಗೌಡರ ಪ್ರಶ್ನೆ ಇಂದಿಗೂ ಪ್ರಸ್ತುತ

ಬರ ಮೊದಲು ರೈತನ ಹೊಲದಲ್ಲಿ ಕಾಣಿಸುತ್ತದೆ. ನಂತರ ಅವನ ಸಾಲ, ಮನೆಯ...

ಚಿಕ್ಕಮಗಳೂರು | ಕಸ್ತೂರಿ ರಂಗನ್ ವಿರೋಧಿಸಿ ನಾಳೆ ಬಾಳೆಹೊನ್ನೂರು ಬಂದ್ 

ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡು ಭಾಗದಲ್ಲಿ ಸಮಸ್ಯೆ ಹಿನ್ನಲೆಯಲ್ಲಿ ಮಲೆನಾಡು...

ಗುಜರಾತ್‌ | ಕಲಬೆರಕೆ ಪಶು ಆಹಾರ ಮಾರಿದರೆ ಜೈಲು; ಕೋಳಿ, ಜಾನುವಾರು ಆಹಾರ ಉತ್ಪಾದನೆಗೆ ಲೈಸೆನ್ಸ್‌ ಕಡ್ಡಾಯ

ಜಾನುವಾರು ಮತ್ತು ಕೋಳಿಗಳಿಗೆ ನೀಡುವ ಆಹಾರದ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ...