ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ ಬಡ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಸಮರ್ಪಕ ಕೂಲಿ ಪಾವತಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಶಹಾಪುರ ತಾಲೂಕು ಸಮಿತಿ ವತಿಯಿಂದ ಗುರುವಾರ ರಸ್ತಾಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.

- Advertisement -

ಧರಣಿ ವೇಳೆ ಮಾತನಾಡಿ ಸಂಘದ ಮುಖಂಡರು, ರಸ್ತಾಪುರ, ವಿಭೂತಹಳ್ಳಿ, ಗೋಲಗೇರಾ ಹಾಗೂ ಶಾರದಹಳ್ಳಿ ಗ್ರಾಮಗಳ ನೂರಾರು ಕೂಲಿ ಕಾರ್ಮಿಕರು ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿದ್ದು, ಕೆಲವರಿಗೆ ದುಡಿಮೆಗೆ ಅನುಗುಣವಾಗಿ ಕೂಲಿ ಪಾವತಿಯಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಗ್ರಾಮೀಣ ಪ್ರದೇಶದಲ್ಲಿ ದಿನಗೂಲಿ ₹250ರಿಂದ ₹300ರವರೆಗೆ ಇದ್ದರೆ, ಉದ್ಯೋಗ ಖಾತರಿ ಯೋಜನೆಯಡಿ ನಿಗದಿಯಾಗಿರುವ ಕೂಲಿ ಮೊತ್ತಕ್ಕೆ ಅನುಗುಣವಾಗಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಉದ್ಯೋಗ ಖಾತರಿ ಯೋಜನೆಯಡಿ ಬಾಕಿ ಇರುವ ಕೂಲಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರು ಹಾಗೂ ಟೆಂಟ್ ವ್ಯವಸ್ಥೆ ಕಲ್ಪಿಸಬೇಕು. ಗ್ರಾಮ ಪಂಚಾಯಿತಿಯಿಂದ ಐದು ಕಿ.ಮೀ. ದೂರದಲ್ಲಿ ಕೆಲಸ ನೀಡಿದರೆ ಸಂಚಾರ ವೆಚ್ಚವನ್ನು ಪಾವತಿಸಬೇಕು. ಕೆಲಸಕ್ಕಾಗಿ ಅರ್ಜಿ ಸಲ್ಲಿಸಲು ಬರುವ ಕಾರ್ಮಿಕರಿಂದ ಅರ್ಜಿ ಸ್ವೀಕರಿಸಿ ರಸೀದಿ ನೀಡಬೇಕು. ಎನ್‌ಎಂಆರ್‌ ಜಾರಿಯಾದ ಕೂಡಲೇ ಕೆಲಸ ಹಾಗೂ ಅಳತೆ ಕಾರ್ಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಸ್ತಾಪುರ ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು, ಸಿಸಿ ರಸ್ತೆ, ಒಳಚರಂಡಿ ಹಾಗೂ ಸಾಮೂಹಿಕ ಶೌಚಾಲಯ ಸೇರಿದಂತೆ ಮೂಲಸೌಕರ್ಯ ಕಲ್ಪಿಸಬೇಕು. ಗ್ರಾಮ ಪಂಚಾಯಿತಿ ಕಚೇರಿಗೆ ವಿದ್ಯುತ್ ಸಂಪರ್ಕ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬಡ ರೈತರು ಹಾಗೂ ಕೂಲಿ ಕಾರ್ಮಿಕರಿಗೆ ನಿವೇಶನ ಹಕ್ಕುಪತ್ರ ನೀಡುವಲ್ಲಿ ಹಣದ ಬೇಡಿಕೆ ಇದ್ದರೆ ಅದನ್ನು ತಡೆಯಬೇಕು ಮತ್ತು ಉಚಿತವಾಗಿ ಹಕ್ಕುಪತ್ರ ಒದಗಿಸಬೇಕು ಎಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿಗೆ ನೂತನವಾಗಿ ಆಗಮಿಸಿರುವ ಪವನ್ ಕಟ್ಟಿಮನಿ ಅವರನ್ನು ವರ್ಗಾವಣೆ ಮಾಡಬೇಕು ಎಂಬ ಬೇಡಿಕೆಯನ್ನೂ ಸಂಘ ಮುಂದಿಟ್ಟಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ: ತಂದೆ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ್ಯದರ್ಶಿ ಭೀಮಣ್ಣ ತಪ್ಪೆದಾರ, ಭಾಗಣ್ಣ ಪೂಜಾರಿ, ಶರಬಣ್ಣ ಗೋಲಗೇರಾ, ಮರಿಯಪ್ಪ ಗೋಲಗೇರ, ಅಯ್ಯಪ್ಪ ವಿಭೂತಹಳ್ಳಿ, ಅಯ್ಯಪ್ಪ ಕೊಂಬಿನ್, ಶಿವಪ್ಪ ವಿಭೂತಹಳ್ಳಿ, ಶಿವಾನಂದ ಪೂಜಾರಿ, ಶ್ರೀನಾಥ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗುಡ್ಡಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಲು ಉಪಲೋಕಾಯುಕ್ತರ ಸೂಚನೆ

ಕಾರವಾರ: ನಗರಸಭಾ ವ್ಯಾಪ್ತಿಯಲ್ಲಿದ್ದರೂ ಅಗತ್ಯ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿರುವ ಗುಡ್ಡಳ್ಳಿ ಗ್ರಾಮದ...

ದಾವಣಗೆರೆ | ಬಿಸಿಯೂಟ ಸೇವಿಸಿದ 13ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 13ಕ್ಕೂ ಹೆಚ್ಚು ಮಕ್ಕಳು...

ಧಾರವಾಡ | ಜೇನು ಸಾಕಾಣಿಕೆ ಯೋಜನೆಯಡಿ ತರಬೇತಿಗೆ ನೋಂದಣಿ ಆರಂಭ

"ರೈತರ ಸರ್ವತ್ತೋಮುಖ ಅಭಿವೃದ್ಧಿಗಾಗಿ ತೋಟಗಾರಿಕೆ ಇಲಾಖೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ಮಧುವನ...

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ...