ಯಮುನಾ ನದಿಯ ಅಬ್ಬರಕ್ಕೆ ತತ್ತರಿಸಿದ ದೆಹಲಿ; ಸಿಎಂ ಮನೆಯ ಹತ್ತಿರ ತಲುಪಿದ ಪ್ರವಾಹದ ನೀರು

Date:

Advertisements
  • ಅಗತ್ಯ ಸೇವೆ ಹೊರತುಪಡಿಸಿ ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ‘ವರ್ಕ್ ಫ್ರಂ ಹೋಮ್’
  • ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿರುವ ಯಮುನಾ; 208.62 ಮೀಟರ್ ಮಟ್ಟಕ್ಕೆ ನೀರು

ದೆಹಲಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಯಮುನಾ ನದಿಯ ನೀರಿನ ಮಟ್ಟವು ಮತ್ತಷ್ಟು ಏರಿಕೆಯಾಗಿದೆ.

ಇದರಿಂದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸದ ಬಳಿಯೂ ಪ್ರವಾಹದ ನೀರು ಹರಿಯುತ್ತಿದ್ದು, ತಗ್ಗು ಪ್ರದೇಶದಲ್ಲಿರುವ ಮನೆ ಮತ್ತು ರಸ್ತೆಗಳು ಜಲಾವೃತಗೊಂಡಿದೆ.

ಹರಿಯಾಣದ ಹತ್ನಿಕುಂಡ್ ಬ್ಯಾರೇಜ್‌ನಿಂದ ಯಮುನಾ ನದಿಗೆ ನೀರನ್ನು ಹರಿಬಿಡುತ್ತಿರುವುದರಿಂದ ಮಧ್ಯಾಹ್ನ 1 ಗಂಟೆಯ ಸುಮಾರಿಗೆ ನೀರಿನ ಮಟ್ಟ 208.62 ಮೀಟರ್ ಆಗಿತ್ತು. ಪ್ರಸ್ತುತ ನೀರಿನ ಮಟ್ಟವು ಅಪಾಯದ ಮಟ್ಟಕ್ಕಿಂತ ಮೂರು ಮೀಟರ್‌ಗಳಷ್ಟು ಹೆಚ್ಚಿದೆ.

Advertisements

ಸಾರ್ವಜನಿಕ ಸಾರಿಗೆಯ ಮೇಲೆ ಪರಿಣಾಮ ಬೀರಿದ್ದು, ಹಲವೆಡೆ ವಿಪರೀತ ಟ್ರಾಫಿಕ್ ಜಾಮ್‌ಗೆ ಸಿಲುಕಿ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ. ಅಲ್ಲದೇ, ಹಲವಾರು ಗಣ್ಯರ ಸಮಾಧಿ ಇದ್ದ ಸ್ಥಳ ಕೂಡ ನೀರಿನಿಂದ ಆವೃತವಾಗಿದೆ.

ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ ಬಳಿಕ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, “ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಶಾಲೆ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳು ಭಾನುವಾರದವರೆಗೆ ಮುಚ್ಚಲ್ಪಡುತ್ತವೆ. ಅಗತ್ಯ ಸೇವೆಗಳನ್ನು ಒದಗಿಸುವ ಹೊರತುಪಡಿಸಿ ಉಳಿದ ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ‘ವರ್ಕ್ ಫ್ರಂ ಹೋಮ್’ ಮಾಡುವಂತೆ ಸೂಚನೆ ನೀಡಲಾಗಿದೆ. ಮೂರು ನೀರು ಸಂಸ್ಕರಣಾ ಘಟಕಗಳು ಮುಚ್ಚಿರುವುದರಿಂದ ಈಗ ಶೇ.50ರಷ್ಟು ಮಾತ್ರ ನೀರಿನ ಶೇಖರಣೆ ಲಭ್ಯವಿದೆ. ಒಂದು ಅಥವಾ ಎರಡು ದಿನಗಳವರೆಗೆ ನೀರಿನ ಸಮಸ್ಯೆ ಎದುರಿಸಬೇಕಾಗಬಹುದು. ಈಗಾಗಲೇ ಆರಂಭಿಸಿರುವ ಶಿಬಿರಗಳಲ್ಲಿ ಶೌಚಾಲಯ ಮತ್ತು ಸ್ನಾನಗೃಹಗಳ ಸಮಸ್ಯೆಗಳಿವೆ. ಆದ್ದರಿಂದ ಶಿಬಿರಗಳನ್ನು ಶಾಲೆಗಳಿಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X