52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್: ವಿಶ್ವದಾಖಲೆಗಳ ಸುರಿಮಳೆಗೈದ 15ರ ಪೋರ ವೈಭವ್ ಸೂರ್ಯವಂಶಿ

Date:

ಭಾರತದ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ, ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ಲಿಸ್ಟ್ ‘ಎ’ ಕ್ರಿಕೆಟ್‌ನ ಹಲವು ವಿಶ್ವದಾಖಲೆಗಳನ್ನು ಪುಡಿಗಟ್ಟಿದ್ದಾರೆ. ದೋಹಾದ ಯೂನಿವರ್ಸಿಟಿ ಆಫ್ ದೋಹಾ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ ಮೈದಾನದಲ್ಲಿ ಮಂಗಳವಾರ (ಇಂದು) ನಡೆದ ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 53 ಎಸೆತಗಳಲ್ಲಿ 204 ರನ್ ಸಿಡಿಸಿದ ವೈಭವ್, ಭಾರತ ‘ಎ’ ತಂಡ 250 ರನ್‌ಗಳ ದಾಖಲೆಯ ಗುರಿಯನ್ನು ಬೆನ್ನಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದರು.

- Advertisement -

50 ಓವರ್‌ಗಳ ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ದ್ವಿಶತಕವನ್ನು ಕೇವಲ 52 ಎಸೆತಗಳಲ್ಲಿ ಪೂರೈಸಿದ ವೈಭವ್, ಈ ಮಾದರಿಯಲ್ಲಿ ಅತಿ ವೇಗದ ದ್ವಿಶತಕ ಬಾರಿಸಿದ ವಿಶ್ವದಾಖಲೆ ನಿರ್ಮಿಸಿದರು. 2024ರ ಅಕ್ಟೋಬರ್‌ನಲ್ಲಿ ನ್ಯೂಜಿಲೆಂಡ್‌ನ ದೇಶೀಯ ಏಕದಿನ ಟೂರ್ನಿಯಲ್ಲಿ ಒಟಾಗೊ ವಿರುದ್ಧ ಕ್ಯಾಂಟರ್‌ಬರಿ ಪರ ಚಾಡ್ ಬೌಸ್ 103 ಎಸೆತಗಳಲ್ಲಿ ಗಳಿಸಿದ್ದ ದ್ವಿಶತಕದ ದಾಖಲೆಯನ್ನು ಅವರು ಭಾರಿ ಅಂತರದಿಂದ ಮುರಿದರು. ಇದೇ ಇನಿಂಗ್ಸ್‌ನಲ್ಲಿ ಒಟ್ಟು 28 ಸಿಕ್ಸರ್ ಸಿಡಿಸುವ ಮೂಲಕ, ಲಿಸ್ಟ್ ‘ಎ’ ಇನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಸ್ಟ್ರೇಲಿಯಾದ ಡಾರ್ಸಿ ಶಾರ್ಟ್ (23 ಸಿಕ್ಸರ್) ಅವರ ವಿಶ್ವದಾಖಲೆಯನ್ನೂ ವೈಭವ್ ಅಳಿಸಿಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...

ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್‌ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್‌ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ಇದಕ್ಕೂ ಮುನ್ನ ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ ವೈಭವ್, ಲಿಸ್ಟ್ ‘ಎ’ ಕ್ರಿಕೆಟ್‌ನ ಅತಿ ವೇಗದ ಶತಕದ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡರು. 2023ರ ಅಕ್ಟೋಬರ್‌ನಲ್ಲಿ ತಾಸ್ಮೇನಿಯಾ ವಿರುದ್ಧ ದಕ್ಷಿಣ ಆಸ್ಟ್ರೇಲಿಯಾ ಪರ ಜೇಕ್ ಫ್ರೇಸರ್-ಮೆಕ್‌ಗರ್ಕ್ 29 ಎಸೆತಗಳಲ್ಲಿ ಗಳಿಸಿದ್ದ ಶತಕದ ದಾಖಲೆಯನ್ನು ಒಂದು ಎಸೆತದ ಅಂತರದಿಂದ ಹಿಂದಿಕ್ಕಿದರು. ಬಳಿಕವೂ ಅಬ್ಬರ ಮುಂದುವರಿಸಿದ ಅವರು, ಕೇವಲ 40 ಎಸೆತಗಳಲ್ಲಿ 150 ರನ್ ಗಡಿ ದಾಟಿದರು. ಆ ವೇಳೆಗೆ ಅವರ ಬ್ಯಾಟ್‌ನಿಂದ 20 ಸಿಕ್ಸರ್ ಹಾಗೂ 6 ಬೌಂಡರಿಗಳು ಸಿಡಿದಿದ್ದವು.

ಭಾನುವಾರ ಪಾಕಿಸ್ತಾನ ಶಾಹೀನ್ಸ್ ವಿರುದ್ಧದ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಕೈಚೆಲ್ಲಿದ್ದ ನಿರಾಸೆಯನ್ನು ಬದಿಗೊತ್ತಿದ ವೈಭವ್, ಮಂಗಳವಾರ ಮೊದಲ ಓವರ್‌ನಿಂದಲೇ ಯುಎಇ ವೇಗಿಗಳು ಹಾಗೂ ಸ್ಪಿನ್ನರ್‌ಗಳನ್ನು ನಿರ್ದಯವಾಗಿ ದಂಡಿಸಿದರು. ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅವರು 150ಕ್ಕೂ ಹೆಚ್ಚು ರನ್ ಗಳಿಸಿದ್ದು ಇದು ಎರಡನೇ ಬಾರಿ. ಈ ಹಿಂದೆ 2025–26ರ ವಿಜಯ್ ಹಜಾರೆ ಟ್ರೋಫಿಯಲ್ಲಿ ಅರುಣಾಚಲ ಪ್ರದೇಶ ವಿರುದ್ಧ ಬಿಹಾರ ಪರ 36 ಎಸೆತಗಳಲ್ಲಿ ಶತಕ ಪೂರೈಸಿ, 84 ಎಸೆತಗಳಲ್ಲಿ 190 ರನ್ ಚಚ್ಚಿದ್ದರು.
ದಾಖಲೆಗಳನ್ನು ಮುರಿಯುವುದನ್ನು ರೂಢಿ ಮಾಡಿಕೊಂಡಿರುವ ವೈಭವ್, ತಮ್ಮ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲೂ ರಾಜಸ್ಥಾನ ರಾಯಲ್ಸ್ ಪರ ಗುಜರಾತ್ ಟೈಟನ್ಸ್ ವಿರುದ್ಧ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಆ ಮೂಲಕ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಗಳಿಸಿದ ಭಾರತೀಯ ಹಾಗೂ ಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಯುಎಇ ನೀಡಿದ 249 ರನ್‌ಗಳ ಸವಾಲನ್ನು ಟೀಂ ಇಂಡಿಯಾ ಕೇವಲ 14.2 ಓವರ್‌ಗಳಲ್ಲಿ ಗುರಿ ಮುಟ್ಟಿದೆ.

ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ವೈಭವ್ ಹೆಸರಿನ ವಿಶ್ವದಾಖಲೆಗಳು
​ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅತಿ ವೇಗದ ರನ್ ಗಳಿಕೆಯ ಪ್ರಮುಖ ವಿಶ್ವದಾಖಲೆಗಳೆಲ್ಲವೂ ಈಗ ವೈಭವ್ ಸೂರ್ಯವಂಶಿ ಅವರ ಹೆಸರಿನಲ್ಲಿವೆ. 2026ರಲ್ಲಿ ಶ್ರೀಲಂಕಾ ‘ಎ’ ವಿರುದ್ಧ ಕೇವಲ 11 ಎಸೆತಗಳಲ್ಲಿ ಅತಿ ವೇಗದ ಅರ್ಧಶತಕ (50) ಬಾರಿಸಿದ್ದ ಅವರು, ಯುಎಇ ವಿರುದ್ಧದ ಪಂದ್ಯದಲ್ಲಿ ಕೇವಲ 28 ಎಸೆತಗಳಲ್ಲಿ ಅತಿ ವೇಗದ ಶತಕ (100), 40 ಎಸೆತಗಳಲ್ಲಿ ಅತಿ ವೇಗದ 150 ರನ್ ಹಾಗೂ 52 ಎಸೆತಗಳಲ್ಲಿ ಅತಿ ವೇಗದ ದ್ವಿಶತಕ (200) ಪೂರೈಸಿ ದಾಖಲೆ ಬರೆದಿದ್ದಾರೆ. ಇದೇ ಪಂದ್ಯದಲ್ಲಿ ಒಟ್ಟು 28 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ, ಲಿಸ್ಟ್ ‘ಎ’ ಇನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.

​ಲಿಸ್ಟ್ ‘ಎ’ ಕ್ರಿಕೆಟ್‌ನ ಅತಿ ವೇಗದ ಶತಕಗಳು
​ಲಿಸ್ಟ್ ‘ಎ’ ಕ್ರಿಕೆಟ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ ಅಗ್ರಸ್ಥಾನಕ್ಕೇರಿದ್ದಾರೆ. 2026ರಲ್ಲಿ ಭಾರತ ‘ಎ’ ಪರ ಯುಎಇ ವಿರುದ್ಧ ಕೇವಲ 28 ಎಸೆತಗಳಲ್ಲಿ ಶತಕ ಗಳಿಸಿ ಅವರು ಮೊದಲ ಸ್ಥಾನದಲ್ಲಿದ್ದಾರೆ. 2023ರಲ್ಲಿ ದಕ್ಷಿಣ ಆಸ್ಟ್ರೇಲಿಯಾ ಪರ ತಾಸ್ಮೇನಿಯಾ ವಿರುದ್ಧ 29 ಎಸೆತಗಳಲ್ಲಿ ಶತಕ ಬಾರಿಸಿದ್ದ ಜೇಕ್ ಫ್ರೇಸರ್-ಮೆಕ್‌ಗರ್ಕ್ ಎರಡನೇ ಸ್ಥಾನದಲ್ಲಿದ್ದಾರೆ. 2015ರಲ್ಲಿ ದಕ್ಷಿಣ ಆಫ್ರಿಕಾ ಪರ ವೆಸ್ಟ್ ಇಂಡೀಸ್ ವಿರುದ್ಧ 31 ಎಸೆತಗಳಲ್ಲಿ ಶತಕ ಸಿಡಿಸಿದ್ದ ಎಬಿ ಡಿವಿಲಿಯರ್ಸ್ ಮೂರನೇ ಸ್ಥಾನದಲ್ಲಿದ್ದರೆ, 2025ರಲ್ಲಿ ಬಿಹಾರ ಪರ ಅರುಣಾಚಲ ಪ್ರದೇಶ ವಿರುದ್ಧ 32 ಎಸೆತಗಳಲ್ಲಿ ಶತಕ ಗಳಿಸಿದ್ದ ಸಕಿಬುಲ್ ಗನಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್...