ಸುದ್ದಿ 1: ಶ್ರೀಕಂಠಪ್ಪ ಬಡಾವಣೆಯ ಬಳಿ ಕೆಎಸ್ಆರ್ಟಿಸಿ ಬಸ್ಗಳ ನಿಲುಗಡೆಗಾಗಿ ಆಗ್ರಹಿಸಿ ಹಾವೇರಿ ನಗರದ ಹೊರವಲಯದ ಹಾನಗಲ್ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೇಲ್ ವಿದ್ಯಾರ್ಥಿನಿಯರು ರಸ್ತೆ ತಡೆದು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ 2: ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಎಸ್ಯುಸಿಐ(ಸಿ) ಪಕ್ಷದ ಕಾರ್ಯಕರ್ತರು ಕಲಬುರಗಿಯ ಸರ್ದಾರ್ ವಲ್ಲಬಾಯಿ ಪಟೇಲ್ ವೃತ್ತದಲ್ಲಿ ಇತ್ತಿಚೆಗೆ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಸುದ್ದಿ 3: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಅಂಗನವಾಡಿ ನೌಕರರು ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಕಲಬುರಗಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ–ಯುಕೆಜಿ ತರಗತಿಗಳನ್ನು ಪ್ರಾರಂಭಿಸಬೇಕು. ಸರ್ಕಾರ ಇಲ್ಲಿನ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್ ಮತ್ತು ಶೂಗಳನ್ನು ವಿತರಿಸಬೇಕು. ಅಂಗನವಾಡಿಗಳನ್ನೇ ಪೂರ್ವ ಪ್ರಾಥಮಿಕ ಶಿಕ್ಷಣ ಕೇಂದ್ರವೆಂದು ಪರಿವರ್ತಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.